ಮಾರ್ಚ್ 28ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲಾ ಚಟುವಟಿಕೆ, ವಾಣಿಜ್ಯ ವ್ಯವಹಾರ, ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣ ಸ್ಥಗಿತಗೊಳಿಸಲಾಗುವುದು ಎಂದು ಶುಕ್ರವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಇಲ್ಲಿಯವರೆಗೆ ದ.ಕ.ಜಿಲ್ಲೆಯಲ್ಲಿ 7 ಪ್ರಕರಣಗಳು ವರದಿಯಾಗಿದ್ದು, ನೆರೆಯ ಕಾಸರಗೋಡು ಉತ್ತರ ಕನ್ನಡ ಜಿಲ್ಲೆಗಳಲ್ಲೂ ಕೊರೊನಾ ಪ್ರಕರಣಗಳು ತೀವ್ರ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಸಾರ್ವಜನಿಕ ಓಡಾಟ ನಿರ್ಬಂಧಿಸದಿದ್ದರೆ, ಮುಂದಿನ ದಿನಗಳು ಮತ್ತಷ್ಟು ಅಪಾಯಕಾರಿಯಾಗಿದ್ದು, ಜನರ ಉತ್ತಮ ಭವಿಷ್ಯಕ್ಕಾಗಿ ಕೈಗೊಳ್ಳುವ ಈ ನಿರ್ಧಾರವನ್ನು ಎಲ್ಲರೂ ಬೆಂಬಲಿಸಬೇಕು. ಸಾರ್ವಜನಿಕರ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಅನಿವಾರ್ಯವಾಗಿದ್ದು, ಪ್ರತಿಯೊಬ್ಬರು ಮನೆಯೊಳಗೆ ಕೂತು, ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪ್ರಧಾನ ಮಂತ್ರಿ, ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾರ್ಚ್ 28ರಿಂದ ಎಲ್ಲಾ ಚಟುವಟಿಕೆ, ವಾಣಿಜ್ಯ ವ್ಯವಹಾರ, ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುವುದು ಎಂದು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.
ಸಭೆಯಲ್ಲಿ ಸಂಸದರು, ಜಿಲ್ಲೆಯ ಶಾಸಕರು, ಜಿ.ಪ.ಅಧ್ಯಕ್ಷರು, ಮೇಯರ್, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ
ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವದ ಸಂಘರ್ಷ ಮತ್ತು ಆಂತರಿಕ ಭಿನ್ನಮತ ಈಗ ಹೊಸ ರೂಪ ಪಡೆದುಕೊಂಡಿದೆ. ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ವೈರಲ್ ಆದ...








