ನೌಕರರ ಬಿಕ್ಕಟ್ಟು ನಿರ್ವಹಿಸೋದು ಸದನದಲ್ಲಿ ಆ ಚಿತ್ರ ನೋಡಿದಷ್ಟು ಸುಲಭವಲ್ಲ
ಬೆಂಗಳೂರು : ಸಾರಿಗೆ ನೌಕರರ ಬಿಕ್ಕಟ್ಟು ನಿರ್ವಹಿಸುವುದು ಸದನದಲ್ಲಿ ರೋಮಾಂಚಕ ಚಿತ್ರ ನೋಡಿದಷ್ಟು ಸುಲಭವಲ್ಲ ಎಂದು ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ್ ಸವದಿಯನ್ನು ರಾಜ್ಯ ಕಾಂಗ್ರೆಸ್ ಟ್ವಿಟ್ಟರ್ ನಲ್ಲಿ ತಿವಿದಿದೆ.
ಕಾಂಗ್ರೆಸ್ ಟ್ವೀಟ್ ನಲ್ಲಿ ಸಾರಿಗೆ ನೌಕರರ ಪ್ರತಿಭಟನೆ ನಿರ್ವಹಿಸುವುದರಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಸೋತಿದೆ. ಪ್ರಯಾಣಿಕರ ಪರದಾಟ, ಅನಾನುಭವಿ ಖಾಸಗಿ ಚಾಲಕರ ಪೀಕಲಾಟ, ಸರ್ಕಾರದ ಮೊಂಡು ಹಠ, ಖಾಸಗಿ ಬಸ್ ಮಾಲೀಕರ ನಿರಾಕರಣೆ ಈ ಎಲ್ಲವುಗಳನ್ನು ಎದುರಿಸುವ ಸ್ಥಿತಿ ಎದುರಾಗಿದೆ. ಸಾರಿಗೆ ಸಚಿವ ಲಕ್ಷ್ಮಣ್? ಸವದಿ ಅವರೇ ಬಿಕ್ಕಟ್ಟುಗಳನ್ನು ನಿರ್ವಹಿಸುವುದೆಂದ್ರೆ ಸದನದಲ್ಲಿ ಕುಳಿತು ಮೊಬೈಲ್ ನಲ್ಲಿ ರೋಮಾಂಚನದ ಚಿತ್ರ ವೀಕ್ಷಿಸಿದಂತಲ್ಲ ಎಂದು ಹೇಳಿದೆ.

ಹಿನ್ನೆಲೆ
2012ರ ಫೆಬ್ರವರಿ ತಿಂಗಳಲ್ಲಿ ನಡೆದ ವಿಧಾನಸಭೆ ಅಧಿವೇಶನ ಸಂದರ್ಭ ವಿಧಾನಸಭೆಯಲ್ಲಿ ಲಕ್ಷ್ಮಣ್ ಸವದಿ ಮೊಬೈಲ್ ಮೂಲಕ ಅಶ್ಲೀಲ ಚಿತ್ರ ನೋಡುತ್ತಿದ್ದ ಘಟನೆ ದೇಶಾದ್ಯಂತ ವ್ಯಾಪಕ ಟೀಕೆಗೆ ಗುರಿಯಾಗಿತ್ತು.ಇದು ಇಂದಿಗೂ ಲಕ್ಷ್ಮಣ್ ಸವದಿ ಪಾಲಿಗೆ ದೊಡ್ಡ ಕಳಂಕವಾಗಿ ಉಳಿದುಕೊಂಡಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel







