ಕೋಡಿಹಳ್ಳಿ ಚಂದ್ರಶೇಖರ್ ಎರಡು ತಲೆ ಹಾವು : ಈಶ್ವರಪ್ಪ
ಶಿವಮೊಗ್ಗ : ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಎರಡು ತಲೆ ಹಾವು ಇದ್ದಂತೆ ಎಂದು ಕೋಡಿಹಳ್ಳಿ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಎರಡು ತಲೆ ಹಾವು ಇದ್ದಂತೆ.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಒಳ್ಳೆಯ ಆಡಳಿತ ನೀಡುತ್ತಿದೆ. ಇದನ್ನು ಸಹಿಸದೆ ಈ ರೀತಿ ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಎಸ್ಮಾ ಎಂದರೇನು..? ಜಾರಿಯಾದ್ರೆ ಏನಾಗುತ್ತೆ..?
ಇನ್ನು ಈಗಾಗಲೇ ಸರ್ಕಾರ ಸಾರಿಗೆ ನೌಕರರ 10 ರಲ್ಲಿ 8 ಬೇಡಿಕೆ ಈಡೆರಿಸಿದೆ. ಆದ್ರೂ ಸಹ ಪ್ರತಿಭಟನೆ ಮುಂದುವರೆಸಿದ್ದು ಸರಿಯಲ್ಲ.
ಕೋಡಿಹಳ್ಳಿ ಚಂದ್ರಶೇಖರ್ ಅವರ ಹಿಂದೆ ಯಾರಿದ್ದಾರೆ ಅಂತಾ ಗೊತ್ತಿಲ್ಲ. ಅದನ್ನು ಪತ್ತೆ ಹಚ್ಚುವ ಕಾರ್ಯವನ್ನು ರಾಜ್ಯ ಸರ್ಕಾರ ಮಾಡುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇದೇ ವೇಳೆ ಸಾರಿಗೆ ನೌಕರರ ಸಂಘಕ್ಕೂ ಕೋಡಿಹಳ್ಳಿ ಚಂದ್ರಶೇಖರ್ ಗೂ ಏನ್ ಸಂಬಂಧ ಎಂದು ಪ್ರಶ್ನೆ ಮಾಡಿದ ಈಶ್ವರಪ್ಪ, ಕೋಡಿಹಳ್ಳಿ ಚಂದ್ರಶೇಖರ್ ರಂತಹ ವ್ಯಕ್ತಿಗಳ ಬಗ್ಗೆ ಎಲ್ಲಾ ಸಂಘಟನೆಗಳು ಎಚ್ಚರಕೆಯಿಂದ ಇರಬೇಕು.
ಸರ್ಕಾರಿ ನೌಕರಿಗಾಗಿ ಶೇ.45ರಷ್ಟು ಆದಾಯ ಹೋಗುತ್ತಿದೆ. ಉಳಿದ ನೌಕರರನ್ನು ತೆಗೆದುಕೊಳ್ಳುವಾಗ ನೀವು ಸರ್ಕಾರಿ ನೌಕರರೇ ಅಲ್ಲ ಎಂದು ಬರವಣಿಗೆಯ ಮೂಲಕ ತೆಗೆದುಕೊಳ್ಳಲಾಗುತ್ತದೆ.
ಕಾರ್ಮಿಕರಲ್ಲಿ ಗೊಂದಲವನ್ನುಂಟು ಮಾಡುವವರ ಬಗ್ಗೆ ಎಚ್ಚರಿಕೆ ಇರಬೇಕೆಂದು ಕೋಡಿಹಳ್ಳಿ ಚಂದ್ರಶೇಖರ್ ವಿರುದ್ದ ಹರಿಹಾಯ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









