ಡಿಕೆಶಿಗೆ ಸೆಡ್ಡು : ದೇವೇಗೌಡರನ್ನ ಭೇಟಿಯಾದ ಇಬ್ರಾಹಿಂ
ಬೆಂಗಳೂರು : ಮಾಜಿ ಕೇಂದ್ರ ಸಚಿವ ಮತ್ತು ವಿಧಾನಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಕಾಂಗ್ರೆಸ್ ಬಿಟ್ಟು ಜೆಡಿಎಸ್ ಸೇರಲಿದ್ದಾರೆ ಅನ್ನೋ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಹರಿದಾಡುತ್ತಿವೆ.
ಈ ಹಿಂದೆ ಹೆಚ್ ಡಿ ಕುಮಾರಸ್ವಾಮಿ ಇಬ್ರಾಹಿಂ ನಿವಾಸಕ್ಕೆ ಭೇಟಿ ನೀಡಿ ಜೆಡಿಎಸ್ ಪಕ್ಷಕ್ಕೆ ವಾಪಸ್ ಬರುವಂತೆ ಮನವಿ ಆಹ್ವಾನ ನೀಡಿದ್ದರು.
ಈ ವಿಚಾರವಾಗಿ ಮಾತನಾಡಿದ್ದ ಇಬ್ರಾಹಿಂ ಅವರು ಡಿ.15 ರ ನಂತರ ರಾಜ್ಯ ಪ್ರವಾಸ ಮಾಡಿ ನಿರ್ಧಾರ ತಿಳಿಸಲಾಗುವುದು ಎಂದು ಇಬ್ರಾಹಿಂ ಹೇಳಿದ್ದರು.
ಈ ಎಲ್ಲ ಬೆಳವಣಿಗಳನ್ನು ಗಮನಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇಬ್ರಾಹಿಂ ನಿವಾಸಕ್ಕೆ ಭೇಟಿ ನೀಡಿ ಪಕ್ಷ ಬಿಡದಂತೆ ಮನವಿ ಮಾಡಿಕೊಂಡಿದ್ದರು.
ಆದ್ರೆ ಇದೀಗ ಇಬ್ರಾಹಿಂ ಅವರು ಹೆಚ್ ಡಿ ದೇವೇಗೌಡ ಅವರನ್ನ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ಪದ್ಮನಾಭನಗರದಲ್ಲಿರುವ ತಮ್ಮ ನಿವಾಸದಲ್ಲಿ ಸಿ.ಎಂ. ಇಬ್ರಾಹಿಂ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಜೊತೆ ದೇವೇಗೌಡರು ಚರ್ಚೆ ನಡೆಸಿದ್ದಾರೆ.
ಈ ವೇಳೆ ಜೆಡಿಎಸ್ ಶಾಸಕ ಆರ್. ಮಂಜುನಾಥ್, ಮಾಜಿ ಶಾಸಕ ಸುರೇಶ್ ಬಾಬು ಸಹ ಇದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel