Corona Update : ಕಳೆದ 24 ಗಂಟೇಲಿ 22,065 ಮಂದಿಗೆ ಸೋಂಕು
ನವದೆಹಲಿ : ಭಾರತದಲ್ಲಿ ಸದ್ಯ ಕೊರೊನಾ ಆರ್ಭಟ ತಗ್ಗಿದ್ದು, ಸೋಂಕಿನಿಂದ ಗುಣಮುಖರಾಗುತ್ತಿರುವವ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ.
ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 22,065 ಮಂದಿಯಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ಇದೇ ಅವಧಿಯಲ್ಲಿ 354 ಜನರು ಸಾವನ್ನಪ್ಪಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 99,06,165ಕ್ಕೆ ಸೋಂಕಿಗೆ ಬಲಿಯಾದವರ ಸಂಖ್ಯೆ 1,43,709ಕ್ಕೆ ಏರಿಕೆಯಾಗಿದೆ.
ಇನ್ನು ನಿನ್ನೆ 34,477 ಸೋಂಕಿತರು ಕೊರೊನಾದಿಂದ ಗುಣಮುಖರಾಗಿದ್ದು, ಇದುವರೆಗು ದೇಶದಲ್ಲಿ 94,22,636 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿನ್ನು 3,39,820 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









