ಮಂಗಳೂರು : ಕೊರೊನಾ ಸೋಂಕು ಹರಡುವುದನ್ನು ತಡೆಯಲು ಸರ್ಕಾರ ದೇಶವನ್ನು ಲಾಕ್ ಡೌನ್ ಮಾಡಿದೆ. ಇದರ ಪರಿಣಾಮ ಮಂಗಳೂರಿನ ಹಲವು ಆಸ್ಪತ್ರೆಗಳು ತಮ್ಮ ಹೊರ ರೋಗಿಗಳಿಗೆ ನೀಡುವ ಚಿಕಿತ್ಸಾ ಸೇವೆಯನ್ನು ಸ್ಥಗತಿಗೊಳಿಸಿದೆ. ಇದರಿಂದ ಅನೇಕ ರೋಗಿಗಳಿಗೆ ಸಕಾಲಕ್ಕೆ ವೈದ್ಯರ ಸಲಹೆ ಔಷಧಗಳು ಸಿಗದೆ ತೊಂದರೆಗೀಡಾಗಿದ್ದಾರೆ.
ಈ ಹಿನ್ನಲೆಯಲ್ಲಿ ರೋಗಿಗಳ ಅನುಕೂಲಕ್ಕಾಗಿ ದೇರಳಕಟ್ಟೆಯಲ್ಲಿರುವ ಕೆ.ಎಸ್.ಹೆಗ್ಡೆ ಆಸ್ಪತ್ರೆ ರಾಜ್ಯದಲ್ಲೇ ಮೊದಲ ಬಾರಿಗೆ ವಿನೂತನ ಸೇವೆಗೆ ಮುಂದಾಗಿದೆ.
ಲಾಕ್ ಡೌನ್ ಹಿನ್ನೆಲೆ ಸಾರ್ವಜನಿಕರಿಗೆ ಓಡಾಟಕ್ಕೆ ಅವಕಾಶ ಇಲ್ಲದ ಕಾರಣ ಕೆ.ಎಸ್.ಹೆಗ್ಡೆ ಆಸ್ಪತ್ರೆಯೂ ಆನ್ ಲೈನ್ ನ ಮೂಲಕ ರೋಗಿಗಳ ಸೇವೆಗೆ ಪ್ಲಾನ್ ಮಾಡಿದೆ.
ಆನ್ ಲೈನ್ ಮೂಲಕ ರೋಗಿಗಳ ಸೇವೆ ಹೇಗೆ?
ಕೆ.ಎಸ್ ಹೆಗ್ಡೆ ಆಸ್ಪತೆಯೂ ಎಲ್ಲಾ ವಿಭಾಗದ ವೈದ್ಯರ ವಾಟ್ಸಾಪ್ ನಂಬರ್ ನೀಡಿದ್ದು, ಆಯಾ ವಿಭಾಗದ ವೈದ್ಯರಿಗೆ ಯಾವುದಾದರೂ ರೋಗಗಳಿಂದ ಬಳಲುತ್ತಿರುವ ರೋಗಿಗಳು ವಾಟ್ಸಾಪ್ ನಲ್ಲಿ ತಮ್ಮ ರೋಗ ಲಕ್ಷಣ ಮಾಹಿತಿನ್ನು ರವಾನಿಸಬಹುದು. ಇದರೊಂದಿಗೆ ಹೆಸರು, ವಯಸ್ಸು, ಲಿಂಗ, ತೂಕ, ಖಾಯಿಲೆಯ ಮಾಹಿತಿ ಹಾಗೂ ಹಳೆಯ ಪ್ರಿಸ್ಕ್ರಿಪ್ಷನ್ ಗಳಿದ್ದರೆ ತಪ್ಪದೆ ನೀಡಬೇಕು. ಇವೆಲ್ಲವೂ ನೋಡಿದ ಬಳಿಕ ಅಗತ್ಯವಿದ್ದರೆ ವೈದ್ಯರೇ ನಿಮಗೆ ಕರೆ ಮಾಡುತ್ತಾರೆ ಇಲ್ಲವಾದರೆ, ಯಾವ ಔಷಧಿ ಸೂಕ್ತವೆಂದು ಅಥವಾ ವೈದ್ಯರ ಸಲಹೆಯನ್ನು “ವೈದ್ಯರ ನೊಂದಣೆ ಸಂಖ್ಯೆವಿರುವ ಚೀಟಿಯಲ್ಲಿ” ಬರೆದು ರೋಗಿಗಳ ಫೋನ್‌ಗೆ ವೈದ್ಯರು ವಾಟ್ಸಾಪ್ ಮಾಡಲಿದ್ದಾರೆ. ಬಳಿಕ ಔಷಧಿಯನ್ನು ಸಮೀಪದ ಮೆಡಿಕಲ್ ನಲ್ಲಿ ಪಡೆಯಬಹುದಾಗಿದೆ.








