ಗ್ಯಾಸ್ ಟ್ಯಾಂಕರ್ ಗೆ ಬಸ್ ಡಿಕ್ಕಿ: 8 ಸಾವು, 25ಕ್ಕೂ ಹೆಚ್ಚು ಜನರಿಗೆ ಗಾಯ
ಉತ್ತರ ಪ್ರದೇಶ: ಬಸ್ ಹಾಗೂ ಗ್ಯಾಸ್ ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಭೀಕರ ಅಪಘಾತದಲ್ಲಿ 8 ಮಂದಿ ಮೃತಪಟ್ಟಿದ್ದಾರೆ. ಈ ಘಟನೆ ಉತ್ತರಪ್ರದೇಶದ ಸಂಭಾಲ್ ನ ಆಗ್ರಾ-ಮೊರದಾಬಾದ್ ರಸ್ತೆಯಲ್ಲಿ ನಡೆದಿದೆ. ದುರಂತದಲ್ಲಿ 25 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಜಿನಿಕಾಂತ್ ಜೊತೆ ರಾಜಕೀಯ ಮೈತ್ರಿ : ಕಮಲ್ ಹಾಸನ್ ಸ್ಪಷ್ಟನೆ
ಇನ್ನೂ ಮಂಜು ಕವಿದಿದ್ದರಿಂದ ರಸ್ತೆಯು ಅಸ್ಪಷ್ಟವಾಗಿ ಕಾಣಿಸುತ್ತಿತ್ತು. ಇದರಿಂದ ಚಾಲಕರ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಇನ್ನೂ ಅಪಘಾತ ಸ್ಥಳಕ್ಕೆ ಧನರಿ ಠಾಣಾ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತೀವ್ರ ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ಅಗತ್ಯ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








