ಮಂಗಳೂರು : ಕೊರೊನಾ ಚಿಕಿತ್ಸೆ ನಿರ್ವಹಣೆಗೆ ರಾಜ್ಯದ ಒಂದು ಆಸ್ಪತ್ರೆ ತಮಗೆ ವಹಿಸಿ ಕೊಡುವಂತೆ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ. ಸುಧಾಮೂರ್ತಿ ಅವರು, ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ನೆರವಿನ ಹಸ್ತ ಚಾಚಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತುರ್ತು ವೈದ್ಯಕೀಯ ಸಾಮಾಗ್ರಿಗಳ ನೆರವಿಗಾಗಿ ದ.ಕ ಜಿಲ್ಲಾಡಳಿತದ ಪರವಾಗಿ ಮಂಗಳೂರು ಪೊಲೀಸ್ ಇಲಾಖೆ, ಸುಧಾಮೂರ್ತಿ ಅವರ ಬಳಿ ನೆರವು ನೀಡುವಂತೆ ವಿನಂತಿಸಿಕೊಂಡಿದ್ದರು.
ಪೊಲೀಸ್ ಇಲಾಖೆಯ ಕೋರಿಕೆಗೆ ತಕ್ಷಣ ಸ್ಪಂದಿಸಿದ ಸುಧಾಮೂರ್ತಿ ಅವರು, 36 ಗಂಟೆಯೊಳಗೆ 28 ಲಕ್ಷ ರೂ.ಗಳ ತುರ್ತು ವೈದ್ಯಕೀಯ ಸಾಮಾಗ್ರಿಗಳನ್ನು ಜಿಲ್ಲೆಯ ಜನತೆಯ ನೆರವಿಗಾಗಿ ಕಳುಹಿಸಿದ್ದಾರೆ.
https://twitter.com/compolmlr/status/1243746901616295937
ಈ ಬಗ್ಗೆ ಟ್ವೀಟ್ ಮಾಡಿರುವ ನಗರ ಪೊಲೀಸ್ ಆಯುಕ್ತ ಡಾ. ಹರ್ಷ ಶ್ರೀಮತಿ ಸುಧಾ ಮೂರ್ತಿ ಹಾಗೂ ಇನ್ಫೋಸಿಸ್ ಫೌಂಡೇಶನ್‌ನ ರಾಮದಾಸ್ ಕಾಮತ್ ಮತ್ತು ಅವರ ತಂಡಕ್ಕೆ ವಿಶೇಷ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.








