ರಕ್ಷಣಾ ಇಲಾಖೆ ಸಮಿತಿ ಸಭೆಯಿಂದ ಮಧ್ಯದಲ್ಲೇ ಹೊರನಡೆದ ‘ರಾಗಾ’ : ಕಾರಣವೇನು..?
ನವದೆಹಲಿ: ರಕ್ಷಣಾ ಇಲಾಖೆಯ ಸಂಸದೀಯ ಸಮಿತಿ ಸಭೆಯಲ್ಲಿ ಅಸಮಾಧಾನಗೊಂಡ ಕಾಂಗ್ರೆಸ್ ನಾಯಕರು ಹಾಗೂ ರಾಹುಲ್ ಗಾಂಧಿ ಮಧ್ಯದಲ್ಲಿಯೇ ಸಭೆಯಿಂದ ಹೊರನಡೆದಿದ್ದಾರೆ. ಇನ್ನೂ ಸಭೆಯಲ್ಲಿ ದೇಶದ ಭದ್ರತೆಗೆ ಸಂಬಂಧಪಟ್ಟ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸದೆ, ಸೇನಾಪಡೆಯ ಸಿಬ್ಬಂದಿಯ ಸಮವಸ್ತ್ರದ ಬಗ್ಗೆ ಚರ್ಚಿಸಿ ಸಮಯ ಹಾಳು ಮಾಡಲಾಗುತ್ತಿತ್ತು ಎಂಬುದು ರಾಹುಲ್ ಗಾಂಧಿ ಅವರ ಆರೋಪವಾಗಿದೆ. ಹೀಗಾಗಿಯೇ ಆಕ್ರೋಶಗೊಂಡು ಸಭೆಯಿಂದ ಹೊರನಡೆದಿದ್ದಾರೆ ಎನ್ನಲಾಗಿದೆ.
ರಾಹುಲ್ ಗಾಂಧಿಯವರು ಸಭೆಯಲ್ಲಿ ಪೂರ್ವ ಲಡಾಕ್ ನಲ್ಲಿ ಚೀನಾ ಸೇನೆಯ ಘರ್ಷಣೆ ಮತ್ತು ಅಲ್ಲಿ ಸೇವೆಯಲ್ಲಿ ನಿಯೋಜನೆಗೊಂಡಿರುವ ಸೈನಿಕರಿಗೆ ಇನ್ನಷ್ಟು ಉತ್ತಮ ಶಸ್ತ್ರಾಸ್ತ್ರಗಳನ್ನು ಹೇಗೆ ಒದಗಿಸಬಹುದು ಎಂದು ಚರ್ಚೆ ನಡೆಸಲು ರಾಹುಲ್ ಗಾಂಧಿ ಮುಂದಾದರು. ಆಗ ಸಮಿತಿಯ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಜುವಲ್ ಒರಮ್ ಅವರು ಅದಕ್ಕೆ ನಿರಾಕರಿಸಿದರು.
`ಕಾಂಗ್ರೆಸ್’ ತೊರೆದ್ರೆ ಸಿ.ಎಂ ಇಬ್ರಾಹಿಂಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ..?
ರಕ್ಷಣಾ ಪಡೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರ ಸಮ್ಮುಖದಲ್ಲಿ ಭಾರತೀಯ ಸೇನೆಯ ಮೂರೂ ಪಡೆಗಳ ಸಿಬ್ಬಂದಿಗೆ ಸಮವಸ್ತ್ರ ನೀಡುವ ಬಗ್ಗೆ ಚರ್ಚಿಸಲಾಗುತ್ತಿತ್ತು. ಆಗ ಮಧ್ಯೆ ಪ್ರವೇಶಿಸಿದ ರಾಹುಲ್ ಗಾಂಧಿಯವರು ಈ ವಿಷಯವನ್ನು ಚರ್ಚೆ ಮಾಡುತ್ತಾ ಕಾಲಹರಣ ಮಾಡುವ ಬದಲು ದೇಶದ ಭದ್ರತೆ ಮತ್ತು ಲಡಾಕ್ ನಲ್ಲಿ ಚೀನಾ ಸೇನೆಯ ಜೊತೆ ಹೋರಾಡಲು ಸೇನೆಯನ್ನು ಇನ್ನಷ್ಟು ಬಲಗೊಳಿಸುವ ಬಗ್ಗೆ ರಾಜಕೀಯ ನಾಯಕರು ಚರ್ಚೆ ನಡೆಸಬೇಕೆಂದು ರಾಹುಲ್ ಗಾಂಧಿ ಮಧ್ಯೆ ಪ್ರವೇಶಿಸಿ ಆಕ್ಷೇಪ ವ್ಯಕ್ತಪಡಿಸಿದಲ್ಲದೇ ಸಭೆಯಿಂದಲೇ ಹೊರನಡೆದಿದ್ದಾರೆ ಎನ್ನನ್ನಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








