ಕಮಲ್ ನಾಥ್ ಸರ್ಕಾರ ಉರುಳಿಸಿದ್ದು ಮೋದಿ : ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅಚ್ಚರಿ ಹೇಳಿಕೆ
ಇಂದೋರ್ : ಮಧ್ಯ ಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದಲ್ಲಿ ರಚನೆಯಾಗಿದ್ದ ಕಾಂಗ್ರೆಸ್ ಸರ್ಕಾರ ಈ ವರ್ಷದ ಮಾರ್ಚ್ ನಲ್ಲಿ ಆಪರೇಷನ್ ಕಮಲಕ್ಕೆ ಸಿಲುಕಿ ಪತನಗೊಂಡಿತು. ಇದಕ್ಕೆ ಕಾಂಗ್ರೆಸ್ ನೇರವಾಗಿ ಬಿಜೆಪಿ ವಿರುದ್ಧ ಆರೋಪ ಮಾಡಿತ್ತು.
ಆದ್ರೆ ಈ ಆಪೋಪವನ್ನು ಬಿಜೆಪಿಗರು ತಳ್ಳಿ ಹಾಕಿದ್ದರು. ಇದೀಗ ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನವಾಗುವಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಅಚ್ಚರಿ ಹೇಳಿಕೆ ನೀಡಿದ್ದಾರೆ.
ಇಂದೋರ್ ನಲ್ಲಿ ಬಿಜೆಪಿ ವತಿಯಿಂದ ಕಿಸಾನ್ ಸಮ್ಮೇಳನ ಆಯೋಜನೆ ಮಾಡಲಾಗಿತ್ತು. ಇದರಲ್ಲಿ ಭಾಗಿಯಾಗಿ ಮಾತನಾಡಿದ ಕೈಲಾಶ್ ವಿಜಯವರ್ಗಿಯಾ, “ಯಾರಿಗೂ ಹೇಳಬೇಡಿ, ನಾನು ಇದನ್ನು ಈವರೆಗೆ ಯಾರಿಗೂ ಹೇಳಿಲ್ಲ.
ನೀವು ಇದನ್ನೂ ಓದಿ : ಹಿಂದು ಯುವತಿ ಅಪಹರಣ.. ಬಲವಂತದ ಮತಾಂತರ… ಆರೋಪಿ ಅಂದರ್..!
ಕಮಲ್ ನಾಥ್ ಸರ್ಕಾರವನ್ನು ಕೆಳಗಿಳಿಸುವಲ್ಲಿ ಯಾರಾದರೂ ಪ್ರಮುಖ ಪಾತ್ರ ವಹಿಸಿದ್ದರೆ ಅದು ನರೇಂದ್ರ ಮೋದಿ ಹೊರತು ಧಮೇರ್ಂದ್ರ ಪ್ರಧಾನ್ ಅಲ್ಲ” ಎಂದು ಹೇಳಿದ್ದಾರೆ.
ಇದೀಗ ವಿಜಯವರ್ಗಿಯಾ ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರಿ ಕೋಲಾಹಲ ಮೂಡಿಸಿದೆ. ಈ ವಿಡಿಯೋವನ್ನು ಶೇರ್ ಮಾಡಿಕೊಂಡಿರುವ ಕಾಂಗ್ರೆಸ್ ವಕ್ತಾರ ನರೇಂದ್ರ ಸಲೂಜಾ, “ಸಂವಿಧಾನಾತ್ಮಕವಾಗಿ ಚುನಾಯಿತವಾದ ಸರ್ಕಾರಗಳನ್ನು ಅಸಾಂವಿಧಾನಿಕ ರೀತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೆಳಗಿಳಿಸುತ್ತಾರೆ ಎಂಬುದು ಸ್ಪಷ್ಟವಾಗಿದೆ” ಎಂದು ಟೀಕಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









