ಕೊರೊನಾ | ಕ್ರಿಸ್ಮಸ್ & ಹೊಸ ವರ್ಷಾಚರಣೆಗೆ ಸರ್ಕಾರದ ಮಾರ್ಗಸೂಚಿ ಬಿಡುಗಡೆ
ಕೋವಿಡ್-19 ಹಿನ್ನೆಲೆಯಲ್ಲಿ ಕ್ರಿಸ್ಮಸ್ ಹಬ್ಬ ಮತ್ತು ಹೊಸ ವರ್ಷಾಚರಣೆ ಸಂದರ್ಭದಲ್ಲಿ ಚರ್ಚ್ ಗಳಲ್ಲಿ ಹಾಗೂ ಹೋಟೆಲ್, ಮಾಲ್ ಮುಂತಾದ ಸಾರ್ವಜನಿಕ ಸ್ಥಳಗಳಲ್ಲಿ ಪಾಲಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಮಾರ್ಗಸೂಚಿಗಳನ್ನು ಸರ್ಕಾರ ಬಿಡುಗಡೆ ಮಾಡಲಾಗಿದೆ.
ಕೇಂದ್ರ ಸರ್ಕಾರದ ಆದೇಶವನ್ನು ಯಥಾವತ್ತಾಗಿ ಜಾರಿಗೊಳಿಸಲಾಗಿದ್ದು, ಮಾರ್ಗಸೂಚಿಗಳು ಹೀಗಿವೆ..
01. ಚರ್ಚ್‍ಗಳಲಿ ಹೆಚ್ಚು ಜನರು ಸೇರದಂತೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮೇಲ್ವಿಚಾರಕರು ಕ್ಟುನಿಟ್ಟಿನ ಕ್ರಮ ವಹಿಸತಕ್ಕದ್ದು.
02. ಹಬ್ಬದ ಆಚರಣೆಯ ಸಂದರ್ಭದಲ್ಲಿ ಕೋವಿಡ್ ಸೋಂಕು ತಡೆಯಲು ಸಾರ್ವಜನಿಕರ ಹಸ್ತಲಾಘವ ಮತ್ತು ಆಲಿಂಗನ ನಿಷೇಧ.
03 ದಿನಾಂಕ 30.12.2020 ರಿಂದ 02.01.2021ರವರೆಗೆ ಕ್ಲಬ್, ಪಬ್, ರೆಸ್ಟೋರೆಂಟ್ ಹಾಗೂ ಅದೇ ತೆರನಾದ ಪ್ರದೇಶಗಳಲ್ಲಿ ವಿಶೇಷ ಕಾರ್ಯಕ್ರಮ ನಿಷೇಧ.
ಏರ್ ಇಂಡಿಯಾ ಟಿಕೆಟ್ ಮೇಲೆ ಶೇ 50 ರಷ್ಟು ರಿಯಾಯ್ತಿ : ಷರತ್ತು ಅನ್ವಯ
04. ಸಾರ್ವಜನಿಕ ಪ್ರದೇಶಗಳಲ್ಲಿ ಹೊಸ ವರ್ಷ ಆಚರಣೆ ನಿಷೇಧ.
05. ಆಯ್ದ ಪ್ರದೇಶಗಳಲ್ಲಿ ಜಿಲ್ಲಾಧೀಕಾರಿಗಳು ಹೆಚ್ಚಿನ ನಿಬಂಧಗಳನ್ನು ವಿಧಿಸಬಹುದು.
06. 65 ವರ್ಷದ ಮೇಲ್ಪಟ್ಟ ಹಿರಿಯರ ಮತ್ತು 10 ವರ್ಷದೊಳಗಿನ ಮಕ್ಕಳು ಮನೆಯಲ್ಲೇ ಇರತಕ್ಕದ್ದು.
07. ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಸ್ಯಾನಿಟೇಸನ್, ಥರ್ಮಲ್ ಸ್ಕ್ಯಾನಿಂಗ್ ಕಡ್ಡಾಯ
08. ಉಪಹಾರ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಡ್ಡಾಯ
09. ಹಸಿರು ಪಟಾಕಿ ಮಾತ್ರ ಹಚ್ಚತಕ್ಕದ್ದು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









