ರಾಮನಗರ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇನ್ನೊಂದೆಡೆ ಸೋಂಕು ಹರಡುವುದನ್ನು ತಡೆಯಲು ರಾಜ್ಯ ಸರ್ಕಾರ ನಾನಾ ಕ್ರಮಗಳನ್ನು ಅನುಸರಿಸುತ್ತಿದೆ. ಈ ವೇಳೆ ಆರೋಗ್ಯ ಸಚಿವ ಶ್ರೀರಾಮುಲು ಮಾಸ್ಕ್ ಧರಿಸದೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕೊರೊನಾ ಐಸೋಲೇಷನ್ ವಾರ್ಡ್ ಗೆ ಭೇಟಿ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಇಂದು ರಾಮನಗರಕ್ಕೆ ಭೇಟಿ ನೀಡಿದ್ದ ಸಚಿವ ಶ್ರೀ ರಾಮುಲು ರಾಮನಗರ ಜಿಲ್ಲಾಧಿಕಾರಿ, ಸಿಇಓ, ಆರೋಗ್ಯಾಧಿಕಾರಿ, ಸಂಸದ ಸುರೇಶ್ ಅವರೊಂದಿಗೆ ಅಧಿಕಾರಿಗಳ ಸಭೆ ನಡೆಸಿದರು. ಈ ವೇಳೆ ರಾಮುಲು ಹಾಗೂ ಅಧಿಕಾರಿಗಳು ಮಾಸ್ಕ್ ಧರಿಸದೇ ಸಭೆಗೆ ಹಾಜರಾಗಿ, ನಿರ್ಲಕ್ಷ್ಯ ವಹಿಸಿದ್ದಾರೆ ಎನ್ನಲಾಗಿದೆ.
ರಾಜ್ಯದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ದಿನದಿಂದ ಶ್ರೀರಾಮುಲು ಅವರೇ ಸ್ವತಃ ಸೋಷಿಯಲ್ ಡಿಸ್ಟೆನ್ಸ್ ಮೈಂಟೆನ್ ಮಾಡಿ, ಮಾಸ್ಕ್ ಧರಿಸಿ ಅಂತ ಹೇಳುತ್ತಿದ್ದಾರೆ. ಇದೀಗ ಅವರೇ ಕೊರೊನಾ ಮುನ್ನೆಚ್ಚರಿಕೆ ರೂಲ್ಸ್ ಬ್ರೇಕ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.