ADVERTISEMENT
Wednesday, September 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಮಾಡಲಾರೆ, ಶಿಡ್ಲಘಟ್ಟಕ್ಕೂ ನಾನೇ ಶಾಸಕನಿದ್ದಂತೆ: ಸಚಿವ ಸುಧಾಕರ್ ಭರವಸೆ

Kariyappa N by Kariyappa N
December 18, 2020
in Newsbeat, Politics, Samagra karnataka, ರಾಜ್ಯ
health minister
Share on FacebookShare on TwitterShare on WhatsappShare on Telegram

Related posts

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

September 23, 2026
ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

September 23, 2026

ಚಿಕ್ಕಬಳ್ಳಾಪುರ: ಬಿಜೆಪಿ ಪ್ರಾತಿನಿಧ್ಯ ಇಲ್ಲ ಎಂದು ಶಿಡ್ಲಘಟ್ಟ ಕ್ಷೇತ್ರದ ಜನತೆ ಕೊರಗುವ ಅಗತ್ಯವಿಲ್ಲ. ಚಿಕ್ಕಬಳ್ಳಾಪುರಕ್ಕೆ ನೀಡಿರುವ ಪ್ರಾಮುಖ್ಯತೆಯನ್ನೇ ಈ ಭಾಗಕ್ಕೂ ನೀಡಿ ಅಭಿವೃದ್ಧಿಪಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಭರವಸೆ ನೀಡಿದ್ದಾರೆ.
ಗ್ರಾಮಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸುಧಾಕರ್, ನಮ್ಮನ್ನು ಗಮನಿಸಿಕೊಳ್ಳುವವರು ಯಾರೂ ಇಲ್ಲ, ಅಭಿವೃದ್ಧಿಯಿಂದ ಹಿನ್ನೆಡೆ ಆಗುತ್ತದೆ ಎಂಬ ಅನಾಥ ಪ್ರಜ್ಞೆಯನ್ನು ಶಿಡ್ಲಘಟ್ಟದ ಜನತೆ ಹೊಂದುವ ಅಗತ್ಯವಿಲ್ಲ. ಚಿಕ್ಕಬಳ್ಳಾಪುರದಂತೆ ಇಲ್ಲಿಗೂ ನಾನೇ ಶಾಸಕ, ನಾನೇ ಮಂತ್ರಿ ಎಂಬ ಮನೋಭಾವದಿಂದ ಅಭಿವೃದ್ಧಿ ಕೆಲಸ ಮಾಡುತ್ತೇನೆ. ಈ ವಿಷಯದಲ್ಲಿ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿದ್ದಾರೆ.


ತಾಲ್ಲೂಕಿನಲ್ಲಿ ಬಿಜೆಪಿ ಶಾಸಕರಿಲ್ಲ ಎಂಬ ಕಾರಣಕ್ಕೆ ಅಭಿವೃದ್ಧಿ ಕೆಲಸಗಳಲ್ಲಿ ರಾಜಕಾರಣ ಬೆರೆಸುತ್ತಿಲ್ಲ. ಸ್ವಂತ ಕ್ಷೇತ್ರದಂತೆ ಶಿಡ್ಲಘಟ್ಟವನ್ನೂ ಪರಿಗಣಿಸಿದ್ದೇನೆ. ಇಲ್ಲಿನ ಕೆರೆಗಳಿಗೂ ಈಗಾಗಲೇ ನೀರು ಹರಿಸಲಾಗುತ್ತಿದೆ. ನೀರು ತುಂಬಿಸುವ ಆರಂಭಿಕ ಸಭೆಯಲ್ಲಿ ಮಾಜಿ ಶಾಸಕರಾದ ರಾಜಣ್ಣ ಅವರು ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವಂತೆ ಪಟ್ಟು ಹಿಡಿದಿದ್ದರು. ಅವರು ಶಾಸಕರಾಗಿದ್ದಾಗ ಇದ್ದ ಪರಿಸ್ಥಿತಿಗೂ ಈಗಿನ ಸ್ಥಿತಿಗೂ ಸಾಕಷ್ಟು ವೆತ್ಯಾಸ ಇರುವುದು ಈಗಾಗಲೇ ಜನರಿಗೆ ಮನವರಿಕೆ ಆಗಿದೆ ಎಂದರು.
ನೀರು ಕೊಟ್ಟವರನ್ನು, ಅನ್ನ ನೀಡಿದವರನ್ನು, ಅಕ್ಷರ ಕೊಟ್ಟವರನ್ನು ಯಾರೂ ಕೂಡ ಮರೆಯಬಾರದು ಎಂದು ಹಿರಿಯರು ಹೇಳುತ್ತಾರೆ. ಹೀಗಾಗಿ ರಾಜಣ್ಣ ಮತ್ತು ಬಿಜೆಪಿ ಪಕ್ಷವನ್ನು ಜನತೆ ಮತ್ತು ಕಾರ್ಯಕರ್ತರು ಬೆಂಬಲಿಸಿ ಮುಂಬರುವ ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ಆ ಮೂಲಕ ಮುಂಬರುವ ದಿನಗಳಲ್ಲಿ ಪಕ್ಷಕ್ಕೆ ಭದ್ರ ಬುನಾದಿ ಹಾಕಬೇಕು ಎಂದು ಮನವಿ ಮಾಡಿದರು.

ಕಾಂಗ್ರೆಸ್ ಸಮಾಧಿ ತೋಡಿಕೊಂಡಿದೆ
ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿಯನ್ನು ಇಡೀ ಜಗತ್ತೇ ಮೆಚ್ಚಿಕೊಂಡಿದೆ. ದೇಶಾದ್ಯಂತ ಜನರು ಮೋದಿ ಅವರ ಸರ್ಕಾರದ ಹಗರಣ ಮುಕ್ತ ಆಡಳಿತದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ. ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರತಿದಿನ ಒಂದಲ್ಲಾ ಒಂದು ಹಗರಣದಿಂದ ಜನ ರೋಸಿ ಹೋಗಿದ್ದರು. ಹೀಗಾಗಿಯೇ ಒಂದೊಂದೇ ರಾಜ್ಯಗಳಲ್ಲಿ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಮೊನ್ನೆ ರಾಜ್ಯ ವಿಧಾನಪರಿಷತ್ತಿನಲ್ಲಿ ಅವರ ನಡುವಳಿಕೆ ಗಮನಿಸಿದ ಮೇಲೆ ಅವರನ್ನು ಬೇರೆ ಯಾವುದೇ ಪಕ್ಷ ವಿರೋಧಿಸುವ ಅಥವಾ ಹಿಂದಿಕ್ಕುವ ಅಗತ್ಯವಿಲ್ಲ. ಅವರ ಸಮಾಧಿ ಅವರೇ ತೋಡಿಕೊಳ್ಳುತ್ತಿರುವುದು ಖಾತರಿಯಾದಂತಾಗಿದೆ ಎಂದು ಡಾ.ಕೆ ಸುಧಾಕರ್ ಲೇವಡಿ ಮಾಡಿದ್ದಾರೆ.


ಶಿಡ್ಲಘಟ್ಟ ತಾಲ್ಲೂಕಿನ ರೈತರಲ್ಲಿ ದೊಡ್ಡ ಮಟ್ಟದ ರಾಜಕೀಯ ಪ್ರಜ್ಞೆ ಇದೆ. ಹಳ್ಳಿಯಿಂದ ದಿಲ್ಲಿವರೆಗಿನ ಬೆಳವಣಿಗೆಗಳನ್ನು ಅವರು ಚೆನ್ನಾಗಿ ಅರಿತಿದ್ದಾರೆ. ಹೀಗಾಗಿ ಅವರಿಗೆ ರಾಜಕಾರಣದ ಬೆಳವಣಿಗೆಗಳನ್ನು ಮನವರಿಕೆ ಮಾಡಿಕೊಡುವ ಅಗತ್ಯವಿಲ್ಲ. ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸುವ ದಿಟ್ಟ ನಿಲುವನ್ನು ಈಗಾಗಲೇ ಅವರು ತೆಗೆದುಕೊಂಡಿದ್ದಾರೆ. ಇನ್ನೂ ಜೆಡಿಎಸ್ ಪಕ್ಷದ ಬಹುತೇಕ ಎಲ್ಲ ಮುಖಂಡರು ಮತ್ತು ಕಾರ್ಯಕರ್ತರು ರಾಜಣ್ಣ ಅವರ ಜತೆ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಪಕ್ಷದ ತತ್ವ, ಸಿದ್ಧಾಂತಗಳನ್ನು ಒಪ್ಪಿ ಬಂದಿರುವ ಎಲ್ಲರನ್ನೂ ಮುಕ್ತ ಮನಸ್ಸಿನಿಂದ ಬರಮಾಡಿಕೊಂಡು ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿ ಪಕ್ಷ ಬೆಂಬಲಿಸುವ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಕರೆ ನೀಡಿದರು.

ರೇಷ್ಮೆ ಬೆಳೆಗಾರರಿಗೆ ನೆರವು
ಶಿಡ್ಲಘಟ್ಟ ತಾಲ್ಲೂಕಿನಲ್ಲಿ ದೊಡ್ಡ ಪ್ರಮಾಣದಲ್ಲಿ ರೇಷ್ಮೆ ಬೆಳೆ ಬೆಳೆಯಲಾಗುತ್ತಿದೆ. ಈ ಭಾಗದ ಬೆಳೆಗಾರರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಸಿಗಬೇಕಿರುವ ಎಲ್ಲ ನೆರವನ್ನೂ ದೊರಕಿಸಲು ಕೋಲಾರ ಸಂಸದರ ಜತೆ ಕಾರ್ಯಪ್ರವೃತ್ತರಾಗುವುದಾಗಿ ಭರವಸೆ ನೀಡಿದ ಸಚಿವ ಸುಧಾಕರ್, ಮುಂದಿನ ದಿನಗಳಲ್ಲಿ ರೇಷ್ಮೆ ಬೆಳೆಗಾರರಿಗೆ ಉನ್ನತ ಮಟ್ಟದ ಮಾಹಿತಿ ಮತ್ತು ನೆರವು ದೊರಕಿಸುವ ನಿಟ್ಟಿನಲ್ಲಿ ತಜ್ಞರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಧಿಕಾರಿಗಳನ್ನು ಇಲ್ಲಿಗೆ ಕರೆತಂದು ಕಾರ್ಯಾಗಾರ ಆಯೋಜಿಸಲಾಗುವುದು ಎಂದೂ ಪ್ರಕಟಿಸಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Cannot be politicizedhealth ministerK.Sudhakarshidlaghattaterms of development
ShareTweetSendShare
Join us on:

Related Posts

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

by Shwetha
September 23, 2026
0

ತುಮಕೂರು: ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರು ಹಾಗೂ ಶಿಕ್ಷಕರ ದಶಕಗಳ ಕಾಲದ ಹೋರಾಟಕ್ಕೆ ಕೊನೆಗೂ ಪ್ರತಿಫಲ ಸಿಕ್ಕಿದೆ. ಹೊಸ ಪಿಂಚಣಿ ಪದ್ಧತಿಯನ್ನು (NPS) ರದ್ದುಗೊಳಿಸಿ, ಹಳೇ ಪಿಂಚಣಿ...

ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

by Shwetha
September 23, 2026
0

ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳ ವಿಧಾನ ಪರಿಷತ್‌ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಸಲು ಭಾರತೀಯ ಚುನಾವಣಾ ಆಯೋಗ (ECI) ವೇಳಾಪಟ್ಟಿ ಪ್ರಕಟಿಸಿದೆ. ಬಿಹಾರ,...

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದ್ರೆ ಬಿಡಲ್ಲ:ಭ್ರಷ್ಟ ಅಧಿಕಾರಿಗಳ ಅಟ್ಟಹಾಸಕ್ಕೆ ಬ್ರೇಕ್- ಕೆಪಿಎಸ್‌ಸಿ ಮುಚ್ಚುವ ಬಗ್ಗೆ DK ಸರ್ಕಾರದಿಂದ ಗಂಭೀರ  ಚಿಂತನೆ

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದ್ರೆ ಬಿಡಲ್ಲ:ಭ್ರಷ್ಟ ಅಧಿಕಾರಿಗಳ ಅಟ್ಟಹಾಸಕ್ಕೆ ಬ್ರೇಕ್- ಕೆಪಿಎಸ್‌ಸಿ ಮುಚ್ಚುವ ಬಗ್ಗೆ DK ಸರ್ಕಾರದಿಂದ ಗಂಭೀರ ಚಿಂತನೆ

by Shwetha
September 23, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಂದರೆ ಕೆಪಿಎಸ್‌ಸಿ ಪರೀಕ್ಷೆ ಮತ್ತು ನೇಮಕಾತಿಗಳಲ್ಲಿ ನಡೆಯುತ್ತಿರುವ ಸಾಲು ಸಾಲು ಹಗರಣಗಳು ರಾಜ್ಯ ಸರ್ಕಾರದ ನಿದ್ದೆಗೆಡಿಸಿವೆ. ಪ್ರಾಮಾಣಿಕವಾಗಿ ಓದಿ ಪರೀಕ್ಷೆ ಬರೆಯುವ...

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

ವಿಧಾನ ಪರಿಷತ್‌ನಲ್ಲಿ ಬಿ.ಕೆ. ಹರಿಪ್ರಸಾದ್‌ ಹೇಳಿಕೆಗೆ ಭಾರಿ ಗದ್ದಲ: ಬಿಜೆಪಿ-ಜೆಡಿಎಸ್ ಸದಸ್ಯರಿಂದ ಸಭಾತ್ಯಾಗ

by Shwetha
September 23, 2026
0

ವಿಧಾನ ಪರಿಷತ್‌ನ ಎರಡನೇ ದಿನದ ಅಧಿವೇಶನದಲ್ಲಿ ಸಾಲಮನ್ನಾ ಹಾಗೂ ಬರ ಪರಿಹಾರ ವಿಚಾರಗಳ ಚರ್ಚೆ ವೇಳೆ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆಯಿತು....

ಯುಪಿಐ ಹೆಸರಲ್ಲಿ ಸಾಮಾನ್ಯರ ಜೇಬಿಗೆ ಕತ್ತರಿ: ಅಮೆರಿಕದ ಒತ್ತಡಕ್ಕೆ ಸಿಲುಕಿ ಭಾರತೀಯರ ಮೇಲೆ ಹೊರೆ- ಯುಪಿಐ ಶುಲ್ಕ ಏರಿಕೆಯ ಹಿಂದಿನ ರಹಸ್ಯ ಪ್ರಶ್ನಿಸಿದ ಖರ್ಗೆ

ಯುಪಿಐ ಹೆಸರಲ್ಲಿ ಸಾಮಾನ್ಯರ ಜೇಬಿಗೆ ಕತ್ತರಿ: ಅಮೆರಿಕದ ಒತ್ತಡಕ್ಕೆ ಸಿಲುಕಿ ಭಾರತೀಯರ ಮೇಲೆ ಹೊರೆ- ಯುಪಿಐ ಶುಲ್ಕ ಏರಿಕೆಯ ಹಿಂದಿನ ರಹಸ್ಯ ಪ್ರಶ್ನಿಸಿದ ಖರ್ಗೆ

by Shwetha
September 23, 2026
0

ಬೆಂಗಳೂರು: ವಿಶ್ವದಾದ್ಯಂತ ಭಾರತದ ಅತಿ ದೊಡ್ಡ ಡಿಜಿಟಲ್ ಕ್ರಾಂತಿ ಎಂದು ಬಿಂಬಿತವಾಗಿರುವ ಯುಪಿಐ ವ್ಯವಸ್ಥೆಯನ್ನು ಈಗ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಬ್ಯಾಂಕ್‌ಗಳು ಮತ್ತು ಪಾವತಿ ಸೇವಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram