ಸ್ವಂತ ಪಕ್ಷ ಕಟ್ಟಿ, 10 ಸೀಟು ಗೆದ್ದು ತೋರಿಸಿ : ಸಿದ್ದರಾಮಯ್ಯಗೆ ಹೆಚ್ ಡಿಕೆ ಸವಾಲ್
ಬೆಂಗಳೂರು : ರಾಷ್ಟ್ರೀಯ ಪಕ್ಷದ ನೆರಳಲ್ಲಿರುವ ತಾವು ಪ್ರಾದೇಶಿಕ ಪಕ್ಷ ಕಟ್ಟಿ, ನಿಮ್ಮ ಸಾಮಥ್ರ್ಯದ ಮೇಲೆ 10 ಸ್ಥಾನ ಗೆದ್ದು ತೋರಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಹೆಚ್ ಡಿ ಕುಮಾರಸ್ವಾಮಿ ಸವಾಲ್ ಹಾಕಿದ್ದಾರೆ.
37 ಸೀಟು ಗೆದ್ದಿದ್ದ ಜೆಡಿಎಸ್ ಗೆ ನಾವು ಸಿಎಂ ಸ್ಥಾನ ಬಿಟ್ಟುಕೊಟ್ಟೆವು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಕುಮಾರಸ್ವಾಮಿ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದು, ಸಿದ್ದುಗೆ ಸವಾಲ್ ಹಾಕಿದ್ದಾರೆ.
ಕುಮಾರಸ್ವಾಮಿ ಟ್ವೀಟ್ ನಲ್ಲಿ..
37 ಸ್ಥಾನ ಗೆದ್ದಿದ್ದ ಜೆಡಿಎಸ್‍ಗೆ ನಾವು ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟೆವು ಎಂದು ಸಿದ್ದರಾಮಯ್ಯ ಪದೇ ಪದೆ ಹೇಳುತ್ತಾರೆ. ಅದು 37 ಸ್ಥಾನವಾಗಲಿ, ಅಥವಾ 100 ಸ್ಥಾನಗಳಾದರೂ ಆಗಿರಲಿ. ಅದು ಜನಾದೇಶ. ಆ ವಿಚಾರದಲ್ಲಿ ಮೂದಲಿಕೆ ಮಾಡುವ ಸಿದ್ದರಾಮಯ್ಯ ಅವರಿಗೆ ಜನರ ಆಶಯ, ಅಭಿಪ್ರಾಯಗಳನ್ನು ಒಪ್ಪುವಂಥ ಮನಸ್ಥಿತಿಯೇ ಇಲ್ಲ.
ಜೆಡಿಎಸ್ ಸ್ಥಾನ ಗಳಿಕೆ, ದೇವೇಗೌಡರು, ನನ್ನ ಬಗ್ಗೆ ಅಡಿಗಡಿಗೂ ಟೀಕಿಸುವ ಸಿದ್ದರಾಮಯ್ಯರಿಗೆ ಒಂದು ಸವಾಲು. ರಾಷ್ಟ್ರೀಯ ಪಕ್ಷದ ನೆರಳಲ್ಲಿರುವ ತಾವು ಪ್ರಾದೇಶಿಕ ಪಕ್ಷ ಕಟ್ಟಿ, ನಿಮ್ಮ ಸಾಮಥ್ರ್ಯದ ಮೇಲೆ 10 ಸ್ಥಾನ ಗೆದ್ದು ತೋರಿಸಿ. ನಂತರ ಜೆಡಿಎಸ್ ಸ್ಥಾನ ಗಳಿಕೆ, ನಮ್ಮ ನಾಯಕತ್ವಗಳ ಬಗ್ಗೆ ಮಾತಾಡಿ. ಆಗ ನಿಮ್ಮ ತಾಕತ್ತು ಒಪ್ಪೋಣ.
ಸಿದ್ದರಾಮಯ್ಯನವರೇ ಎಂದೂ ರಾಜಕೀಯ ಒಳಒಪ್ಪಂದದ ಬಗ್ಗೆ ಮಾತಾಡಬೇಡಿ. ತಾವು ರಾಜಕೀಯ ಒಳಒಪ್ಪಂದಗಳ ಜನಕ. ಅದು ಯಾವಾಗಲೂ ಸಾಬೀತಾಗಿದೆ. ಇನ್ನೆಂದು ಜೆಡಿಎಸ್‍ನ ಸ್ಥಾನ ಗಳಿಕೆ ಬಗ್ಗೆ ಲಘುವಾಗಿ ಮಾತಾಡಬೇಡಿ. ಸ್ವತಂತ್ರ ಪ್ರಾದೇಶಿಕ ಪಕ್ಷ ಕಟ್ಟಲು ಬೇಕಿರುವ ನಾಯಕತ್ವ, ಅದು ಬೇಡುವ ಶ್ರಮದ ಬಗ್ಗೆ ನಿಮಗೆ ಅರಿವಿಲ್ಲ. ನಿಮಗೆ ಅದು ಸಾಧ್ಯವೂ ಇಲ್ಲ ಎಂದು ಟ್ವೀಟ್ ಮಾಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









