ಸಿದ್ದರಾಮಯ್ಯ ಅವ್ರಿಗೆ ಡಿಕೆಶಿ ಅಂದ್ರೆ ಭಯ : ಡಿ.ವಿ.ಸದಾನಂದಗೌಡ
ಬೆಂಗಳೂರು : ಸಿದ್ದರಾಮಯ್ಯ ಅವರು ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಭಯದಲ್ಲಿ ಏನೇನೋ ಮಾತನಾಡುತ್ತಾರೆ ಎಂದು ಕೇಂದ್ರ ಸಂಸದ ಡಿ.ವಿ.ಸದಾನಂದಗೌಡ ಅವರು ಹೇಳಿದ್ದಾರೆ.
ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಹಾಗೂ ಸಿದ್ದರಾಮಯ್ಯ ಪರಸ್ಪರ ಆರೋಪ ಪ್ರತ್ಯಾರೋಪ ಮಾಡುತ್ತಿರುವ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಡಿ ವಿ ಸದಾನಂದಗೌಡರು, ರಾಜ್ಯದ ಮುಖ್ಯಮಂತ್ರಿಯಾದವರು, ಒಂದು ಪಕ್ಷದ ಹಿರಿಯರಾದವರು ತಮ್ಮ ಇತಿಮಿತಿಯಲ್ಲಿ ಮಾತನ್ನಾಡಬೇಕು.
ಆದರೆ ಮಾಜಿ ಮುಖ್ಯಮಂತ್ರಿಗಳಿಬ್ಬರೂ ತಮ್ಮ ಮಿತಿಯನ್ನು ಮೀರಿ ಮಾತನಾಡಿದ್ದಾರೆ . ಈ ರೀತಿ ಮಾತನಾಡುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಹೇಳಿದರು.
ಇನ್ನು ಹೆಚ್ ಡಿ ಕುಮಾರಸ್ವಾಮಿ ದೊಡ್ಡ ರಾಜಕೀಯ ಕುಟುಂಬದಿಂದ ಬಂದವರು. ಅವರ ಪಕ್ಷ ಹಿನ್ನಡೆಯಾಗಿದೆ ಎಂಬ ಕಾರಣಕ್ಕೆ ಏನೇನೊ ಹೇಳುತ್ತಾರೆ.
ಸಿದ್ದರಾಮಯ್ಯ ಅವರು ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಭಯದಲ್ಲಿ ಏನೇನೋ ಮಾತನಾಡುತ್ತಾರೆ ಎಂದು ಟೀಕಿಸಿದರು.
ಜನವರಿ 1ರಿಂದಲೇ ಶಾಲೆ-ಕಾಲೇಜು ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್
ಇದೇ ವೇಳೆ ಶಾಲೆಗಳ ಆರಂಭದ ಬಗ್ಗೆ ಮಾತನಾಡಿ, ಹಂತ ಹಂತವಾಗಿ ಶಾಲೆ ಪ್ರಾರಂಭ ಮಾಡಿದರೆ ತೊಂದರೆಯಿಲ್ಲ.
ಶಾಲೆ ಆರಂಭ ಮಾಡುವ ಅವಶ್ಯಕತೆಯಿದೆ. ಕೋವಿಡ್ ಗಣನೀಯವಾಗಿ ಇಳಿಕೆಯಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಸರಿಯಾಗಿ ವ್ಯವಸ್ಥೆ ಮಾಡಿ ವಿದ್ಯಾಭ್ಯಾಸಕ್ಕೆ ಅನುವು ಮಾಡಿಕೊಡಬೇಕು ಎಂದು ಸದಾನಂದಗೌಡ ಅಭಿಪ್ರಾಯಪಟ್ಟರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel