ಸಂಬಳ ನೀಡುವಲ್ಲಿ ವ್ಯತ್ಯಯವಾಗಿರುವುದನ್ನ ಒಪ್ಪಿಕೊಂಡ ವಿಸ್ಟ್ರಾನ್ ಕಂಪನಿ
ನವದೆಹಲಿ : ಕೋಲಾರದ ಐಫೋನ್ ಫ್ಯಾಕ್ಟರಿಯಲ್ಲಿ ದಾಂಧಲೆ ಪ್ರಕರಣ ರಾಜ್ಯ ಮಾತ್ರವಲ್ಲದೆ ದೇಶದಾದ್ಯಂತ ಸದ್ದು ಮಾಡಿತ್ತು.
ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ವಿಸ್ಟ್ರಾನ್ ಕಂಪನಿಯ ಉಪಾಧ್ಯಕ್ಷ ಲೀ ವಿನ್ಸೆಂಟ್ ತಲೆದಂಡವಾಗಿದೆ.
ಅಷ್ಟೆ ಅಲ್ಲದೇ ನೌಕರರಿಗೆ ಸಂಬಳ ನೀಡುವುದರಲ್ಲಿ ವ್ಯತ್ಯಯವಾಗಿರುವುದಾಗಿ ಕಂಪನಿ ಒಪ್ಪಿಕೊಂಡಿದೆ.
ಪ್ರಕರಣದ ತನಿಖೆ ವೇಳೆ ಕೆಲ ನೌಕರರಿಗೆ ಸಂಬಳ ನೀಡದಿರುವುದು ಕಂಡುಬಂದಿದೆ. ಈ ಕುರಿತು ನಾವು ತೀವ್ರ ವಿಷಾದ ವ್ಯಕ್ತಪಡಿಸುತ್ತೇವೆ.
ಕೊರೊನಾ ಸೋಂಕು, ಸಾವಿನ ಪ್ರಮಾಣ ಇಳಿಕೆ: ಆರೋಗ್ಯ ಸಚಿವ ಸುಧಾಕರ್ ಖುಷ್
ಅಲ್ಲದೆ ನಮ್ಮೆಲ್ಲ ಉದ್ಯೋಗಿಗಳ ಕ್ಷಮೆಯಾಚಿಸುತ್ತೇವೆ. ನಮ್ಮಿಂದ ತಪ್ಪಾಗಿರುವುದನ್ನು ಅರಿತಿದ್ದೇವೆ. ಕಾರ್ಮಿಕ ಏಜೆನ್ಸಿಗಳ ನಿರ್ವಹಿಸಲು ಕೆಲ ಪ್ರಕ್ರಿಯೆಗಳನ್ನು ಬಲಪಡಿಸಬೇಕಿದೆ.
ಶಿಸ್ತು ಕ್ರಮ ಸೇರಿದಂತೆ ತಕ್ಷಣವೇ ಈ ಕುರಿತು ಕ್ರಮ ತೆಗೆದುಕೊಳ್ಳುತ್ತೇವೆ. ಇದರ ಭಾಗವಾಗಿ ಕಂಪನಿಯ ಭಾರತದ ಉಪಾಧ್ಯಕ್ಷರನ್ನು ಹುದ್ದೆಯಿಂದ ತೆಗೆಯಲಾಗಿದೆ.
ಇಂತಹ ಸಮಸ್ಯೆಗಳು ಮತ್ತೆ ಮರುಕಳಿಸದಂತೆ ಹೆಚ್ಚಿನ ಕ್ರಮ ಕೈಗೊಳ್ಳುತ್ತೇವೆ. ನಮ್ಮ ತಂಡಗಳನ್ನು ಪುನರ್ ರಚಿಸುತ್ತೇವೆ ಎಂದು ಕಂಪನಿ ಪ್ರಕಟನೆ ಬಿಡುಗಡೆ ಮಾಡಿದೆ.
ಅಲ್ಲದೆ ಕಾರ್ಮಿಕರ ಕುಂದು ಕೊರತೆಗಳನ್ನು ಆಲಿಸಲು ಕನ್ನಡ ತೆಲುಗು ತಮಿಳು ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ 24 ಗಂಟೆಗಳ ಸಹಾಯವಾಣಿಯನ್ನ ತೆರೆಯುತ್ತೇವೆ.
ನಮ್ಮ ಉದ್ಯೋಗಿಗಳಿಗೆ ಸಹಾಯ ಮಾಡಲು ನಾವು ಬದ್ಧರಾಗಿದ್ದು, ಈ ರೀತಿಯ ಘಟನೆಗಳು ಮತ್ತೆ ಮರುಕಳಿಸದಂತೆ ಶ್ರದ್ಧೆಯಿಂದ ಕೆಲಸ ಮಾಡುತ್ತೇವೆ ಎಂದು ಸಂಸ್ಥೆ ತಿಳಿಸಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel