ರಾಮನಗರ: ತಮಿಳುನಾಡಿನ ದಬ್ಬಾಗುಳೇಶ್ವರ (ದಬ್ಬಗುಳಿಯ ಬಸವೇಶ್ವರ ) ದೇವಾಲಯಕ್ಕೆ ಪೂಜೆ ಸಲ್ಲಿಸಲು ಟ್ರ್ಯಾಕ್ಟರ್ನಲ್ಲಿ ತೆರಳುತ್ತಿದ್ದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 8 ಮಂದಿ ಸ್ಥಿತಿ ಚಿಂತಾಜನಕವಾಗಿದೆ.
ಅಪಘಾತದಲ್ಲಿ ಮೃತಪಟ್ಟ 6 ಮಂದಿ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೆರಳಾಳುಸಂದ್ರದ ನಿವಾಸಿಗಳು. ಗಂಭೀರ ಸ್ಥಿತಿಯಲ್ಲಿ 8 ಮಂದಿ ತಮಿಳುನಾಡಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ

ಕೆರಳಾಳುಸಂದ್ರದ ಗ್ರಾಮದ 15 ಮಂದಿ ಟ್ರ್ಯಾಕ್ಟರ್ ಮೂಲಕ ತಮಿಳುನಾಡಿನ ದಬ್ಬಾಗುಳೇಶ್ವರ (ದಬ್ಬಗುಳಿಯ ಬಸವೇಶ್ವರ ) ದೇವಾಲಯಕ್ಕೆ ತೆರಳುತ್ತಿದ್ದರು. ಕನಕಪುರ-ತಮಿಳುನಾಡಿನ ಗಡಿ ಭಾಗದ ತಿರುವಿನಲ್ಲಿ ಟ್ರ್ಯಾಕ್ಟರ್ ನ ಬ್ರೇಕ್ ಕಟ್ ಅಗಿದ್ದಲ್ಲದೆ, ಆಕ್ಸಲೇಟರ್ ತುಂಡಾಗಿದೆ. ಇದರಿಂದಾಗಿ ರಸ್ತೆ ತಿರುವುನಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಸ್ಥಳದಲ್ಲೇ ಆರು ಮಂದಿ ಮೃತಪಟ್ಟಿದ್ದು, ಎಂಟು ಮಂದಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಗಾಯಾಳುಗಳನ್ನು ತಮಿಳುನಾಡಿನ ಡೆಂಕಣಿಕೋಟೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಪುಟ್ಟಲಿಂಗಮ್ಮ, ಮುಳ್ಳಮ್ಮ, ಗೌರಮ್ಮ ಸೇರಿ ನಾಲ್ವರು ಮಹಿಳೆಯರು, ಇಬ್ಬರು ಪುರುಷರು ಸೇರಿದಂತೆ 6 ಮಂದಿ ಮೃತಪಟ್ಟಿದ್ದಾರೆ.
ಆಟೋಗೆ ಕಾರು ಡಿಕ್ಕಿ: ಇಬ್ಬರ ಬಲಿ
ಆಟೋಗೆ ಕಾರು ಡಿಕ್ಕುಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಬ್ಯಾಲದಹಳ್ಳಿ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಚನ್ನಬಸಮ್ಮ(60), ಗದಿಗೇಶ್(40) ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ.
ಕುಂಬಳೂರಿನಿಂದ ಹರಿಹರ ಕಡೆಗೆ ಬರುತ್ತಿದ್ದ ಆಟೋ, ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಹರಿಹರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








