ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಹಾಗೂ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಬಾಕಿ ಉಳಿದಿರುವ ನಷ್ಟ ಪರಿಹಾರ ಇತ್ಯರ್ಥ ಕುರಿತು ಕೇಂದ್ರ ಸಂಸದೀಯ ವ್ಯವಹಾರ ಸಚಿವ ಸಂಸದ ಪ್ರಹ್ಲಾದ್ ಜೋಶಿ ಹಾಗೂ ಕೃಷಿ ಸಚಿವ ಬಿ.ಸಿ.ಪಾಟೀಲ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು.
ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ರಾಜ್ಯದಲ್ಲಿ ಸಣ್ಣಪುಟ್ಟ ಸಮಸ್ಯೆಗಳಿದ್ದು, ಬೆಳೆವಿಮೆ ಕಂಪನಿಗಳ ಜೊತೆ ಕೃಷಿ ಇಲಾಖೆ ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿರಬೇಕು. ಕಂಪನಿಗಳು ಹಾಗೂ ಕೃಷಿ ಇಲಾಖೆ ನಡುವೆ ಸಹಕಾರದ ಕೊರತೆಯಾಗದಂತೆ ನೋಡಿಕೊಳ್ಳಬೇಕು. ರೈತರ ಖಾತೆ, ಬೆಳೆ ಸಮೀಕ್ಷೆ ಸೇರಿದಂತೆ ಯೋಜನೆಯಡಿಯಲ್ಲಿನ ತಾಂತ್ರಿಕ ವಿಚಾರದಲ್ಲಿ ಕಂಡುಬರುವ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಸಭೆಯಲ್ಲಿ ಚರ್ಚಿಸಲಾಯಿತು.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ಇನ್ಶೂರೆನ್ಸ್ ಕಂಪನಿಗಳು ಪ್ರತಿ ತಾಲೂಕಿನ ಕೇಂದ್ರ ಕಚೇರಿಯಲ್ಲಿ ಕಚೇರಿಯನ್ನು ತೆರೆಯಬೇಕು. ಇನ್ಶೂರೆನ್ಸ್ ಕಂಪನಿಯ ಹಿರಿಯ ಅಧಿಕಾರಿಗಳು ಹಾಗೂ ಕೃಷಿ ಇಲಾಖೆ ಆಯುಕ್ತರು ಜಿಲ್ಲಾವಾರು ಭೇಟಿ ನೀಡಿ ಅಲ್ಲಿನ ಜನಪ್ರತಿನಿಧಿಗಳ ಜೊತೆ ವಿಮಾ ಯೋಜನೆ ಹಾಗೂ ನಷ್ಟಪರಿಹಾರ ಪರಿಹಾರದ ಕುರಿತು ಚರ್ಚಿಸಬೇಕು. ಧಾರವಾಡ ಜಿಲ್ಲೆಯ ಮಧ್ಯಂತರ ಬೆಳೆ ಪರಿಹಾರ ನೀಡಲು ಎದುರಾಗಿರುವ ಕುಂದುಕೊರತೆ ಬಗ್ಗೆ ವಿವರ ನೀಡುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ, ಸಂಸದರ ನಿರ್ದೇಶನದಂತೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ನೀಡಲಾಗುವುದು ಎಂದರು.
ಸಭೆಯಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಬೆಳಗಾವಿ-ಬಿಜಾಪುರ ಜಿಲ್ಲೆಯ ದ್ರಾಕ್ಷಿ ಬೆಳೆ ಪರಿಹಾರದ ಬಗ್ಗೆ ಚರ್ಚಿಸಿದರು. ಹಾವೇರಿ ಸಂಸದ ಶಿವಕುಮಾರ್ ಉದಾಸಿ, ಕೇಂದ್ರ ಕೃಷಿ ಇಲಾಖೆಯ ಕಾರ್ಯದರ್ಶಿ ಭೂತಾನಿ, ರಾಜ್ಯ ತೋಟಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯ, ಕೃಷಿ ಇಲಾಖೆ ಆಯುಕ್ತ ಬ್ರಿಜೆಶ್ ಕುಮಾರ್ ದೀಕ್ಷಿತ್ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








