ADVERTISEMENT
Monday, June 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಏನಿದು ದೇಶದಲ್ಲಿ ಆತಂಕಕ್ಕೆ ಕಾರಣವಾಗಿರುವ ಹೊಸ ಶಿಗೆಲ್ಲಾ ಸೋಂಕು? ಇದರ ಲಕ್ಷಣಗಳೇನು?ಇದು ಹೇಗೆ ಹರಡುತ್ತದೆ?

Shwetha by Shwetha
December 22, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
shigella infection Kerala
Share on FacebookShare on TwitterShare on WhatsappShare on Telegram

ಏನಿದು ದೇಶದಲ್ಲಿ ಆತಂಕಕ್ಕೆ ಕಾರಣವಾಗಿರುವ ಹೊಸ ಶಿಗೆಲ್ಲಾ ಸೋಂಕು? ಇದರ ಲಕ್ಷಣಗಳೇನು?ಇದು ಹೇಗೆ ಹರಡುತ್ತದೆ? shigella infection Kerala

ಕೊಚ್ಚಿ, ಡಿಸೆಂಬರ್22: ಕೊರೋನಾ ವೈರಸ್‌ ಸೋಂಕಿನಿಂದ ದೇಶ ಇನ್ನೂ ಹೊರಬರಲಾಗದೆ ತತ್ತರಿಸಿರುವಾಗ ಇದೀಗ ಕೇರಳದಲ್ಲಿ ಬ್ಯಾಕ್ಟಿರಿಯಾ ಸೋಂಕು ಕಾಣಿಸಿಕೊಂಡಿದ್ದು, ಆತಂಕಕ್ಕೆ ಕಾರಣವಾಗಿದೆ. ಶಿಗೆಲ್ಲಾ ಎಂಬ ಸೋಂಕು ಇದಾಗಿದ್ದು, ಈಗಾಗಲೇ 11 ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದರೆ, 6 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ ಮತ್ತು 20 ಮಂದಿಯಲ್ಲಿ ಸೋಂಕಿನ ಲಕ್ಷಣಗಳು ಪತ್ತೆಯಾಗಿವೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.
ಮಾರಕ ಬ್ಲ್ಯಾಕ್‌ ಫಂಗಸ್ ಕೊರೋನಾ ಪೀಡಿತರಲ್ಲಿ ಕಾಣಿಸಿಕೊಳ್ಳುತ್ತಿದೆ ಎಂಬ ವರದಿಗಳ ಜೊತೆಗೆ ಶಿಗೆಲ್ಲಾ ಬ್ಯಾಕ್ಟಿರಿಯಾ ಸೋಂಕು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. shigella infection Kerala
shigella infection Kerala

Related posts

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

June 29, 2026
ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಸಿಎಂ ಸಿಂಹಾಸನ ನಶ್ವರ ಜನರ ಹೃದಯ ಸಿಂಹಾಸನ ಶಾಶ್ವತ: ಅಧಿಕಾರ ಹೋದರೂ ಕುಗ್ಗದ ವರ್ಚಸ್ಸು ಮಾಜಿ CM ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

June 29, 2026

ಈ ಹೊಸ ಸೋಂಕಿಗೆ ಕಾರಣವಾಗುವ ಬ್ಯಾಕ್ಟೀರಿಯಾದ ಹೆಸರು ಶಿಗೆಲ್ಲಾ ಮತ್ತು ಸೋಂಕನ್ನು ಶಿಗೆಲ್ಲೋಸಿಸ್ ಎಂದು ಕರೆಯಲಾಗುತ್ತದೆ.
ಅತಿಸಾರ ಭೇದಿ, ಜ್ವರ ಹಾಗೂ ಹೊಟ್ಟೆನೋವು ಶಿಗೆಲ್ಲಾ ಬ್ಯಾಕ್ಟಿರಿಯಾ ಸೋಂಕಿನ ಲಕ್ಷಣಗಳಾಗಿದ್ದು, ಕೆಲವರಲ್ಲಿ ಸೋಂಕಿನ ಲಕ್ಷಣ ಇರುವುದಿಲ್ಲ. ಮೂರಕ್ಕಿಂತ ಹೆಚ್ಚು ದಿನ ಭೇದಿ ಹಾಗೂ ಇನ್ನಿತರೆ ಲಕ್ಷಣಗಳು ಕಂಡುಬಂದರೆ ವೈದ್ಯರನ್ನು ಕಾಣಬೇಕು. ಕಲುಷಿತ ಆಹಾರ ಹಾಗೂ ನೀರಿನಿಂದ ಈ ಸೋಂಕು ಹಬ್ಬುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.

ಕಿಸಾನ್ ಏಕ್ತಾ ಮೋರ್ಚಾ ಫೇಸ್‌ಬುಕ್ ಪೇಜ್ ನಿರ್ಬಂಧನೆ- ಫೇಸ್‌ಬುಕ್ ನಿಂದ ಸ್ಪಷ್ಟನೆ

ಸಾಮಾನ್ಯ ಭೇದಿಗಿಂತ ಇದು ಭಿನ್ನವಾಗಿದೆ. ಸೋಂಕಿತರು ಬಹುಬೇಗನೆ ಅಸ್ವಸ್ಥರಾಗಿ ಅವರ ಪರಿಸ್ಥಿತಿ ವಿಷಮಿಸುತ್ತದೆ. ಈಗಾಗಲೇ 6 ಮಂದಿಯ ಮಲ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಸೋಂಕು ದೃಢಪಟ್ಟಿದೆ ಎಂದು ಕೋಝಿಕೋಡ್‌ ಜಿಲ್ಲಾ ಆರೋಗ್ಯಾಧಿಕಾರಿ ಡಾ| ವಿ. ಜಯಶ್ರೀ ಅವರು ತಿಳಿಸಿದ್ದಾರೆ.

ಸೋಂಕಿತರಿಗೆ ಸಾಮಾನ್ಯವಾಗಿ ಆಯಂಟಿಬಯೋಟಿಕ್ಸ್‌ ಮೂಲಕ ಚಿಕಿತ್ಸೆ ನೀಡಲಾಗುತ್ತದೆ. ಈ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಸೋಂಕಿನಿಂದ ಚೇತರಿಸಿಕೊಂಡ ವ್ಯಕ್ತಿಯು ಸಹ ಈ ಸೋಂಕನ್ನು ಹಬ್ಬಲು ಕಾರಣನಾಗುತ್ತಾನೆ. ಸಣ್ಣ ಪ್ರಮಾಣದ ಬ್ಯಾಕ್ಟಿರಿಯಾಗಳಿಂದಲೂ ಈ ಸೋಂಕು ಹಬ್ಬುತ್ತದೆ. ಮಲ ಪರೀಕ್ಷೆ ಮೂಲಕ ಮಾತ್ರ ಈ ಸೋಂಕನ್ನು ಪತ್ತೆ ಹಚ್ಚಲು ಸಾಧ್ಯ.

ನೈರ್ಮಲ್ಯ ಕಾಪಾಡಿಕೊಳ್ಳುವುದು, ಕೈಗಳನ್ನು ತೊಳೆಯುವುದರಿಂದ ಈ ಸೋಂಕಿನಿಂದ ದೂರ ಉಳಿಯಬಹುದು. ಏಕೆಂದರೆ ಸೋಂಕಿತ ಸ್ಥಳವನ್ನು ಮುಟ್ಟಿಅದೇ ಕೈಯನ್ನು ಬಾಯಿಗೆ ತಾಕಿಸಿದರೆ ಸೋಂಕು ಹಬ್ಬುತ್ತದೆ. ಸೋಂಕಿತ ವ್ಯಕ್ತಿ ಸಿದ್ಧಪಡಿಸಿದ ಆಹಾರ ಸೇವನೆಯಿಂದಲೂ ಸೋಂಕು ಬರಬಹುದಾಗಿದೆ.

ಎಲ್ಲ ವಯೋಮಾನದವರಲ್ಲೂ ಈ ಸೋಂಕು ಹರಡುತ್ತದೆಯಾದರೂ ಮಕ್ಕಳಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚು. ಸೋಂಕಿತರ ಜತೆ ಲೈಂಗಿಕ ಕ್ರಿಯೆಯಿಂದಲೂ ರೋಗ ಹರಡಬಹುದಾಗಿದೆ. ಕೇರಳದಲ್ಲಿ ಸೋಂಕು ಕಾಣಿಸಿಕೊಂಡ ಬಹುತೇಕರು ಸೋಂಕಿನಿಂದ ಮೃತಪಟ್ಟ11 ವರ್ಷದ ಬಾಲಕನ ಅಂತ್ಯಕ್ರಿಯೆಗೆ ಹೋಗಿದ್ದು, ಕೆಲವರು ಆತನ ಮನೆಯಲ್ಲಿ ಆಹಾರ ಸೇವಿಸಿದ್ದರು ಎಂದು ಆರೋಗ್ಯಾಧಿಕಾರಿಗಳು ಹೇಳಿದ್ದಾರೆ.

ಶಿಗೆಲ್ಲಾ ಸೋಂಕಿನ ಲಕ್ಷಣಗಳು ಏನು?

ಅತಿಸಾರ ಭೇದಿ, ಜ್ವರ, ಹೊಟ್ಟೆನೋವು. ಕೆಲವರಲ್ಲಿ ಯಾವುದೇ ಲಕ್ಷಣಗಳು ಗೋಚರಿಸುವುದಿಲ್ಲ.

ಚಿಕಿತ್ಸೆಯ ವಿಧಾನ

ಮಲ ಪರೀಕ್ಷೆ ಮೂಲಕ ಸೋಂಕನ್ನು ಪತ್ತೆಹಚ್ಚಿ ಬಳಿಕ ಆ್ಯಂಟಿ ಬಯೋಟಿಕ್ಸ್‌ ಬಳಸಿ ಚಿಕಿತ್ಸೆ ನೀಡಲಾಗುತ್ತದೆ.

shigella infection Kerala

ಇದು ಹೇಗೆ ಹರಡುತ್ತದೆ?

ಸೋಂಕಿತ ವ್ಯಕ್ತಿ ಸಿದ್ಧಪಡಿಸಿದ ಆಹಾರ ಸೇವನೆಯಿಂದ, ಬ್ಯಾಕ್ಟಿರಿಯಾ ಪೀಡಿತ ಪ್ರದೇಶವನ್ನು ಸ್ಪರ್ಶಿಸಿ ನಂತರ ಕೈಯನ್ನು ಬಾಯಿಗೆ ತಾಗಿಸಿದರೆ, ಸೋಂಕಿತರ ಜತೆ ಲೈಂಗಿಕ ಕ್ರಿಯೆ ನಡೆಸಿದರೆ ಈ ಸೋಂಕು ಹರಡುತ್ತೆ. ಕಲುಷಿತ ನೀರು, ಆಹಾರ ಸೇವನೆಯಿಂದಲೂ ಇದು ಹರಡುತ್ತದೆ.

ತಡೆಗಟ್ಟುವುದು ಹೇಗೆ?

ನೈರ್ಮಲ್ಯ ಕಾಪಾಡಿಕೊಳ್ಳಬೇಕು. ಕೈ ತೊಳೆದುಕೊಳ್ಳಬೇಕು. ಸೋಂಕಿನ ಲಕ್ಷಣ ಕಂಡ ಬಂದ ತಕ್ಷಣ ವೈದ್ಯರನ್ನು ಕಾಣಬೇಕು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಶೂನ್ಯ ಕ್ಯಾಲೊರಿಗಳನ್ನು ಹೊಂದಿರುವ ಸೂಪರ್ ಪವರ್‌ಫುಲ್ ಆಹಾರಗಳು https://t.co/5MztkNWqE9

— Saaksha TV (@SaakshaTv) December 21, 2020

ನಿಮ್ಮ ಆಧಾರ್ ಸಂಖ್ಯೆ ದುರ್ಬಳಕೆ ಆಗಿದೆಯೇ? ತಿಳಿಯುವುದು ಹೇಗೆ – ಇಲ್ಲಿದೆ ಮಾಹಿತಿhttps://t.co/iPUk4egRxi

— Saaksha TV (@SaakshaTv) December 21, 2020

Tags: infection KeralaKerala new virusshigella
ShareTweetSendShare
Join us on:

Related Posts

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

by Shwetha
June 29, 2026
0

ಬೆಂಗಳೂರು: ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಪಾನ್ ಮಸಾಲ ಹಾಗೂ ಗುಟ್ಕಾವನ್ನು ಸಂಪೂರ್ಣವಾಗಿ ನಿಷೇಧಿಸಲು ಕರ್ನಾಟಕ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯದ ಬೊಕ್ಕಸಕ್ಕೆ ನೂರು ಕೋಟಿ...

ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಸಿಎಂ ಸಿಂಹಾಸನ ನಶ್ವರ ಜನರ ಹೃದಯ ಸಿಂಹಾಸನ ಶಾಶ್ವತ: ಅಧಿಕಾರ ಹೋದರೂ ಕುಗ್ಗದ ವರ್ಚಸ್ಸು ಮಾಜಿ CM ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

by Shwetha
June 29, 2026
0

ಮೈಸೂರು: ಮುಖ್ಯಮಂತ್ರಿ ಸ್ಥಾನ ಎಂಬುದು ಶಾಶ್ವತವಲ್ಲ, ಅದು ಬಂದು ಹೋಗುವಂತದ್ದು. ಆದರೆ ಜನರ ಹೃದಯದಲ್ಲಿ ಪಡೆಯುವ ಸ್ಥಾನ ಎಂದಿಗೂ ಅಳಿಯದ ಶಾಶ್ವತ ಆಸ್ತಿ ಎಂದು ಮಾಜಿ ಮುಖ್ಯಮಂತ್ರಿ...

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

by Shwetha
June 29, 2026
0

ಬೆಂಗಳೂರು: ರಾಷ್ಟ್ರೀಯ ಭದ್ರತೆ ಮತ್ತು ದೇಶದ ಹಿತಾಸಕ್ತಿಯ ವಿಷಯ ಬಂದಾಗ ರಾಜ್ಯ ಸರ್ಕಾರವು ಯಾವಾಗಲೂ ಕೇಂದ್ರದ ಒಕ್ಕೂಟ ಸರ್ಕಾರದ ಪರವಾಗಿ ಇರುತ್ತದೆ. ಯಾವುದೇ ಕಾರಣಕ್ಕೂ ಕರ್ನಾಟಕವನ್ನು ದೇಶದ್ರೋಹಿಗಳ...

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

by Shwetha
June 29, 2026
0

ಮಂಗಳೂರು: ಕೆಂಪೇಗೌಡ ದಿನಾಚರಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿನ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದ ಪ್ರಕರಣ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ....

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

by Shwetha
June 29, 2026
0

ಮೈಸೂರು: ಜೆಡಿಎಸ್ ಹಿರಿಯ ನಾಯಕ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ನೇರ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram