ಬೆಂಗಳೂರು: ಇಂಗ್ಲೆಂಡ್‍ನಿಂದ ಚೆನ್ನೈಗೆ ಬಂದ ವ್ಯಕ್ತಿಯೊಬ್ಬರಿಗೆ ರೂಪಾಂತರಗೊಂಡ ಲಂಡನ್ ಕೊರೊನಾ ವೈರಸ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ನೆರೆಯ ಕರ್ನಾಟಕದಲ್ಲೂ ಆತಂಕ ಶುರುವಾಗಿದೆ.
ಕಳೆದ ಮಾರ್ಚ್‍ನಲ್ಲಿ ವಿದೇಶಗಳಿಂದ ಬಂದವರಿಂದ ದೇಶಾದ್ಯಂರ ಕೊರೊನಾ ವೈರಸ್ ಸೋಂಕು ಹರಡಿತ್ತು. ದುಬೈಗೆ ತೆರಳಿ ವಾಪಸ್ಸಾಗಿದ್ದ ಕಲಬುರಗಿಯ ವೃದ್ಧರೊಬ್ಬರು ಸಾವನ್ನಪ್ಪುವ ಮೂಲಕ ದೇಶದಲ್ಲೇ ಮೊದಲ ಕೊರೊನಾ ಸಾವು ಕರ್ನಾಟಕದಿಂದಲೇ ಆರಂಭವಾಗಿತ್ತು. ಸಹಜವಾಗಿಯೇ ಲಂಡನ್ ಕೊರೊನಾ ವೈರಸ್ ರಾಜ್ಯದಲ್ಲೂ ತಲ್ಲಣ ಶುರು ಮಾಡಿದೆ.

ಇಂಗ್ಲೆಂಡ್‍ನಿಂದ ಚೆನ್ನೈಗೆ 15 ಮಂದಿ ಬಂದಿದ್ದು, ಇವರಲ್ಲಿ ಒಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅದೇ ರೀತಿ, ಬ್ರಿಟನ್‍ನಿಮದ 138 ಮಂದಿ ಬೆಂಗಳೂರಿಗೆ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ಇವರನ್ನು ಪತ್ತೆ ಹಚ್ಚಿ ತಪಾಸಣೆ ನಡೆಸಲು ಬಿಬಿಎಂಪಿ ವಿಶೇಷ ತಂಡವನ್ನು ರಚಿಸಿದೆ.
ಬೆಂಗಳೂರಿನಲ್ಲಿ ಮಾತನಾಡಿದ ಆರೋಗ್ಯ ಸಚಿವ ಸುಧಾಕರ್, ಲಂಡನ್ ಕೊರೊನಾ ವೈರಸ್ ರಾಜ್ಯದಲ್ಲಿ ಪತ್ತೆಯಾಗಿಲ್ಲ. ಆದರೂ, ಕಟ್ಟೆಚ್ಚರಕ್ಕೆ ಸೂಚನೆ ನೀಡಲಾಗಿದೆ. ಕ್ರಿಸ್‍ಮಸ್ ಹಬ್ಬ ಹಾಗೂ ಹೊಸ ವರ್ಷಾಚರಣೆ ಸಮೀಪವಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ನೈಟ್ ಕಫ್ರ್ಯೂ ಜಾರಿಗೆ ಬಗ್ಗೆ ಇನ್ನೂ ನಿರ್ಧರಿಸಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಜತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳುವ ಮೂಲಕ ನೈಟ್ ಕಫ್ರ್ಯೂ ಜಾರಿಯ ಸುಳಿವು ನೀಡಿದ್ದಾರೆ.
ಕೋವಿಡ್ ತಾಂತ್ರಿಕ ಸಮಿತಿ ಸಭೆ ಕರೆದ ಸುಧಾಕರ್..!
ಇಂಗ್ಲೆಂಡ್‍ನಲ್ಲಿ ರೂಪಾಂತರಗೊಂಡ ಹೊಸ ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಸಂಬಂಧ ಆರೋಗ್ಯ ಸಚಿವ ಸುಧಾಕರ್ ಕೋವಿಡ್ ತಾಂತ್ರಿಕ ಸಮಿತಿ ಹಾಗೂ ಹಿರಿಯ ಆರೋಗ್ಯ ಅಧಿಕಾರಿಗಳ ಸಭೆ ಕರೆದಿದ್ದಾರೆ.
ಹೊಸ ಲಂಡನ್ ಕೊರೊನಾ ವೈರಸ್ ರಾಜ್ಯದಲ್ಲಿ ಹರಡದಂತೆ ಕೈಗೊಳ್ಳಬೇಕಾದ ಕ್ರಮಗಳು, ವಿದೇಶದಿಂದ ಬರುವರರನ್ನು ಪರೀಕ್ಷೆಗೆ ಒಳಪಡಿಸಿ, ಕ್ವಾರಂಟೈನ್ ಮಾಡುವುದು, ಸೋಂಕಿತರ ಸಂಪರ್ಕ ಪತ್ತೆ ಹಚ್ಚುವುದು ಸೇರಿದಂತೆ ಹಲವು ಕಠಿಣ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








