ಎಸ್ಎಸ್ಎಲ್ಸಿ ಆದವರಿಗೆ ಕರ್ನಾಟಕ ಅಂಚೆ ವೃತ್ತದಲ್ಲಿ ಉದ್ಯೋಗಾವಕಾಶ Gramin Dak Sevak 2443
ಬೆಂಗಳೂರು, ಡಿಸೆಂಬರ್23: ಗ್ರಾಮೀಣ ದಕ್ ಸೇವಕ್ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಅಂಚೆ ವೃತ್ತದಲ್ಲಿ ಅಧಿಸೂಚನೆಯನ್ನು ಪ್ರಕಟಿಸಿದೆ. Gramin Dak Sevak 2443
2443 ದಕ್ ಸೇವಕ್ ಖಾಲಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೋರಲಾಗಿದೆ. 21-12-2020ರಿಂದ ಆನ್ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಪ್ರಾರಂಭವಾಗಿದ್ದು 20-01-2021 ಕೊನೆಯ ದಿನವಾಗಿರುತ್ತದೆ.

ಹುದ್ದೆಗಳ ವಿವರ :
ಹುದ್ದೆಯ ಹೆಸರು : ಗ್ರಾಮೀಣ ದಕ್ ಸೇವಕ್
ಒಟ್ಟು ಹುದ್ದೆಗಳು : 2443
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದ್ದು, ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ. ಇದಲ್ಲದೆ ಸೈಕ್ಲಿಂಗ್ನ ಜ್ಞಾನದ ಅವಶ್ಯಕತೆಯಾಗಿದೆ. ಅಭ್ಯರ್ಥಿಗೆ ದ್ವಿಚಕ್ರ ವಾಹನ ಸವಾರಿ ಮಾಡುವ ಜ್ಞಾನವಿದ್ದರೆ ಅದನ್ನೂ ಪರಿಗಣಿಸಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ಸೂಚಿಸಲಾಗಿದೆ.
ಸರ್ಕಾರಿ ಅಧಿಕಾರಿಯಾಗಲು ಬಯಸುವ ಯುವಕರಿಗೆ ಇಲ್ಲಿದೆ ಒಳ್ಳೆಯ ಸುದ್ದಿ
ಅಭ್ಯರ್ಥಿಗಳು ದಿನಾಂಕ 21.12.202 ಕ್ಕೆ ಅನ್ವಯವಾಗುವಂತೆ ಕನಿಷ್ಠ ವಯೋಮಿತಿ 18 ವರ್ಷ ಮತ್ತು ಗರಿಷ್ಠ ವಯೋಮಿತಿ 40 ವರ್ಷ ವಯಸ್ಸಿನವರಾಗಿರಬೇಕು.
ನಿಯಮಾನುಸಾರ ಕಾಯ್ದಿರಿಸಿದ ವರ್ಗಕ್ಕೆ ವಯೋಮಿತಿಯಲ್ಲಿ ಸಡಿಲಿಕೆ ಇದೆ.
ಅರ್ಜಿ ಸಲ್ಲಿಸಲು ಆರಂಭದ ದಿನಾಂಕ : 21-12-2020
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-01-2021
ಅರ್ಜಿ ಸಲ್ಲಿಸುವುದು ಹೇಗೆ..?
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಅಂಚೆ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ https://www.indiapost.gov.in/VAS/Pages/Content/Recruitments.aspx?Category=Recruitment ಆನ್ಲೈನ್ ಮೂಲಕ ಸಲ್ಲಿಸಬೇಕು.

ಅರ್ಜಿಯನ್ನು ಸಲ್ಲಿಸುವ ವಿಧಾನ ಬೇಕಾದ ದಾಖಲೆಗಳ ವಿವರ, ಅರ್ಜಿ ಶುಲ್ಕ ಪಾವತಿಸುವ ವಿಧಾನ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ನೋಡಿ ಹಾಗೂ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಲು ಕೆಳಗೆ ನೀಡಲಾಗಿರುವ ಲಿಂಕ್ ಗೆ ಭೇಟಿನೀಡಿ.
ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಲು : https://bit.ly/34xxAW4
ಅರ್ಜಿ ಸಲ್ಲಿಸಲು ಅಧಿಕ್ರತ ವೆಬ್ಸೈಟ್ ವಿಳಾಸ : https://www.indiapost.gov.in/VAS/Pages/Content/Recruitments.aspx?Category=Recruitment
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ಹಾಲು ಬೆರೆಸದ ಚಹಾ ಅಥವಾ ಕಪ್ಪು ಚಹಾ ಎಷ್ಟು ಪ್ರಯೋಜನಕಾರಿ ಗೊತ್ತಾ ? https://t.co/VotFsVG3Ld
— Saaksha TV (@SaakshaTv) December 22, 2020
ಚೀನಾದಲ್ಲಿ ಹೆಚ್ಚು ಚರ್ಚಿಸಲಾಗುವ ಭಾರತದ ಶಸ್ತ್ರಾಸ್ತ್ರಗಳು ಯಾವುದೆಂದು ಗೊತ್ತಾ ?https://t.co/vtj3IfwWx4
— Saaksha TV (@SaakshaTv) December 22, 2020








