ನೈಟ್ ಕಪ್ರ್ಯೂ | ಬಸ್ ಸಂಚಾರಕ್ಕೂ ಬ್ರೇಕ್..!?
ಬೆಂಗಳೂರು :ರಾಜ್ಯದಲ್ಲಿ ಕೋವಿಡ್-19 ಹೊಸ ರೂಪಾಂತರದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಇಂದು ರಾತ್ರಿಯಿಂದಲೇ ಜನವರಿ 2ರವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ.
ಈ ಘೋಷಣೆ ಮೂಲಕ ಕ್ರಿಸ್ ಮಸ್ ಹಾಗೂ ನ್ಯೂ ಇಯರ್ ಸೆಲಬ್ರೆಷನ್ ಗೆ ಬ್ರೇಕ್ ಬಿದ್ದಂತಾಗಿದೆ. ಜೊತೆಗೆ ಬಸ್ ಸಂಚಾರವೂ ಬಂದ್ ಆಗಿಲಿದ್ದು, ರಾತ್ರಿ ಪ್ರಯಾಣಿಕರಿಗೆ ಬಸ್ ಸಂಚಾರ ಇರೋದಿಲ್ಲ ಎಂದು ತಿಳಿದುಬಂದಿದೆ.
ನೈಟ್ ಕರ್ಫ್ಯೂ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಇಂದು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುತ್ತಿದೆ. ಜನವರಿ 2ರವರೆಗೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುತ್ತಿದೆ. ಕೋವಿಡ್ 19 ಹೊಸ ರೂಪಾಂತರದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದಾಗಿ ತಿಳಿಸಿದ್ದಾರೆ.
ಇದೇ ವೇಳೆ ಯುಕೆಯಿಂದ ಬರುವಂತವರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ರಾಜ್ಯಕ್ಕೆ ಯುಕೆಯಿಂದ ಬಂದಿರುವಂತವರನ್ನು ಪತ್ತೆ ಹಚ್ಚಿ, ಅವರನ್ನು ಕೋವಿಡ್-19 ಸೋಂಕು ಪತ್ತೆಗಾಗಿ ಆರ್ ಟಿ-ಪಿಸಿಆರ್ ಮೂಲಕ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಆ ಬಗ್ಗೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಅಂತಾ ತಿಳಿಸಿದರು.
ಇನ್ನು ನೈಟ್ ಕರ್ಫ್ಯೂನಲ್ಲಿ ಏನ್ ಇರಲಿದೆ ಅಂತಾ ನೋಡೋದಾದ್ರೆ
ತುರ್ತು ಸೇವೆಗಳಾದಂತ ಆಸ್ಪತ್ರೆ, ವೈದ್ಯಕೀಯ ಸೇವೆ, ಮೆಡಿಕಲ್ ಶಾಪ್ ಸೇರಿದಂತೆ ಇತರೆ ವ್ಯವಸ್ಥೆಗೆ ಮಾತ್ರ ರಾತ್ರಿ 10ರ ನಂತ್ರ ಬೆಳಿಗ್ಗೆ 6 ಗಂಟೆಯವರೆಗೆ ಅನುಮತಿ ನೀಡಲಾಗುತ್ತದೆ.
ಏನ್ ಇರೋದಿಲ್ಲ.?
ಪಬ್, ಬಾರ್ ಅಂಡ್ ರೆಸ್ಟೋರೆಂಟ್, ವೈನ್ ಶಾಪ್, ಸಾರಿಗೆ ಸಂಚಾರ ವ್ಯವಸ್ಥೆ ಸೇರಿದಂತೆ ಎಲ್ಲವೂ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಬಂದ್ ಆಗಲಿವೆ.
ಒಟ್ಟಾರೆ ಕೊರೊನಾ ರೂಪಾಂತರಗೊಂಡಿರುವ ಹಿನ್ನೆಲೆ ಇಂದಿನಿಂದ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿ ಇರಲಿದೆ.
ತುರ್ತು ಸಂದರ್ಭ ಹೊರತುಪಡಿಸಿ, ಬೇರೆ ಯಾವುದೇ ಚಟುವಟಿಕೆಗೆ ಅವಕಾಶ ಇರುವುದಿಲ್ಲ. ಸಾರಿಗೆ ಸಂಚಾರ ಕೂಡ ಬಂದ್ ಆಗಲಿದೆ ಎನ್ನಲಾಗುತ್ತಿದೆ. ಈ ಸಂಬಂದ ರಾಜ್ಯ ಸರ್ಕಾರ ಮಾರ್ಗಸೂಚಿ ಕ್ರಮಗಳನ್ನು ಸಂಜೆ ಬಿಡುಗಡೆ ಮಾಡಲಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









