ADVERTISEMENT
Thursday, August 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇಂದು ರೈತ ದಿನ | ಅನ್ನದಾತನ ಮನೆ ಬಳಿ ತೆರಳಿ ಶಿರಬಾಗಿ ನಮಿಸಿದ ಡಿಸಿಎಂ ಅಶ್ವತ್ಥನಾರಾಯಣ

Kariyappa N by Kariyappa N
December 23, 2020
in Newsbeat, Politics, Samagra karnataka, ರಾಜ್ಯ
farmers day
Share on FacebookShare on TwitterShare on WhatsappShare on Telegram

                            ರೈತ ದಿನದಂದು ಶುಭಕೋರಿ ಕೃಷಿ ಕಾಯ್ದೆಗಳ ಕುರಿತು ವಿವರಣೆ

ರಾಮನಗರ: ಅನ್ನದಾತನ ಮನೆ ಬಾಗಿಲಿಗೆ ತೆರಳಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ರೈತ ದಿನದ ಶುಭಾಶಯ ಕೋರಿ ಅಭಿವಂದನೆ ಸಲ್ಲಿಸಿದರಲ್ಲದೆ, ರಾಜ್ಯ ಮತ್ತು ಕೇಂದ್ರ ಸರಕಾರಗಳು ಜಾರಿಗೆ ತಂದಿರುವ ಕೃಷಿ ಕಾಯ್ದೆಗಳ ಬಗ್ಗೆ ರೈತರಲ್ಲಿರುವ ಅನುಮಾನಗಳನ್ನು ನಿವಾರಿಸುವ ಪ್ರಯತ್ನ ನಡೆಸಿದರು.

Related posts

nagara-panchami-2026-date-muhurat-significance

ನಾಗ ಪಂಚಮಿ ಹಬ್ಬದ ಮಹತ್ವ ಮತ್ತು ಆಚರಣೆಯ ಮುಖ್ಯಾಂಶಗಳು

August 13, 2026
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

August 13, 2026


ಬೆಂಗಳೂರಿನಿಂದ ಮಾಗಡಿ ತಾಲ್ಲೂಕಿನ ಉಕ್ಕಡ-ಗುಡ್ಡಹಳ್ಳಿ ಗ್ರಾಮಕ್ಕೆ ಬಂದ ಡಿಸಿಎಂ, ಅಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತರಲ್ಲಿಗೆ ತೆರಳಿ ಶುಭಾಶಯ ಕೋರಿ ಶಿರಬಾಗಿ ನಮಿಸಿದರು. ರೈತರಾದ ನಾರಾಯಣಪ್ಪ, ನಾಗರಾಜ ಮತ್ತು ನರಸಿಂಹಯ್ಯ ಅವರಿಗೆ ಹೂವಿನ ಹಾರ ಹಾಕಿ ಗೌರವಿಸಿದರು.
ಯಾವ ಮುನ್ಸೂಚನೆಯೂ ಇಲ್ಲದೆ ಸ್ವತಃ ಉಪ ಮುಖ್ಯಮಂತ್ರಿಗಳೇ ರಸ್ತೆಯಲ್ಲಿ ಕಾರು ನಿಲ್ಲಿಸಿ ಯಾವ ಶಿಷ್ಠಾಚಾರ ಇಲ್ಲದೆ ತಾವಿದ್ದ ಜಾಗಕ್ಕೇ ನಡೆದುಬಂದು ಹೂಮಾಲೆ ಹಾಕಿ ಶುಭ ಕೋರಿದ್ದನ್ನು ಕಂಡು ರೈತರು, ಗ್ರಾಮಸ್ಥರು ಚಕಿತರಾದರು. ಕ್ಷಣ ಮಾತ್ರದಲ್ಲಿ ಇಡೀ ಊರಿನ ರೈತಾಪಿ ಜನರು, ಹಿರಿಯರು, ಮಹಿಳೆಯರು, ಯುವಕರು ಅಲ್ಲಿ ಸೇರಿಕೊಂಡರಲ್ಲದೆ, ಡಿಸಿಎಂ ಸರಳತೆ ಬಗ್ಗೆ ಅಗಾಧ ಮೆಚ್ಚುಗೆ ವ್ಯಕ್ತಪಡಿಸಿದರು.

ರೈತರೊಂದಿಗೆ ಡಿಸಿಎಂ ಸಂವಾದ
ಇದೇ ವೇಳೆ ರೈತರ ಜತೆ ಸಂವಾದ ನಡೆಸಿದ ಉಪ ಮುಖ್ಯಮಂತ್ರಿ, ಮುಖ್ಯವಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಜಾರಿಗೆ ತಂದಿರುವ ಕೃಷಿ ಕಾಯ್ದೆಗಳ ಬಗ್ಗೆ ಡಿಸಿಎಂ ಅಶ್ವತ್ಥ ನಾರಾಯಣ, ಜನರಲ್ಲಿದ್ದ ಅನುಮಾನ-ಗೊಂದಲಗಳನ್ನು ತಿಳಿಗೊಳಿಸುವ ಯತ್ನ ನಡೆಸಿದರು.


“ಅನೇಕ ವರ್ಷಗಳಿಂದ ರಾಜ್ಯದ ರೈತರ ಪಾಲಿಗೆ ಮರಣಶಾಸನವಾಗಿದ್ದ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ) ಕಾಯ್ದೆಗೆ ಕ್ರಾಂತಿಕಾರಕ ತಿದ್ದುಪಡಿಗಳನ್ನು ತರಲಾಗಿದೆ. ನೀವು ಬೆಳೆದ ಬೆಳೆಯನ್ನು ನೀವೇ ಕಟಾವು ಮಾಡಿಕೊಂಡು ಹೋಗಿ ಮಾರುಕಟ್ಟೆಯಲ್ಲಿ ಮಾರಬೇಕಾಗಿತ್ತು. ಅಲ್ಲಿ ದಳ್ಳಾಳಿಗಳದ್ದೇ ದರ್ಬಾರ್ ಆಗಿತ್ತು. ಮಧ್ಯವರ್ತಿಗಳ ಹಾವಳಿಯಿಂದ ಸರಿಯಾದ ದರಕ್ಕೆ ಮಾರಾಟವಾಗುತ್ತಿರಲಿಲ್ಲ. ಅನೇಕ ಸಂದರ್ಭಗಳಲ್ಲಿ ನೀವೆಲ್ಲ ರಾತ್ರಿಹೊತ್ತು ಮಾರುಕಟ್ಟೆಯಲ್ಲಿ ಮಲಗಿರಬೇಕಾದ ದುಸ್ಥಿತಿ ಇತ್ತು. ಕಾಯ್ದೆಯನ್ನು ಬದಲಾವಣೆ ಮಾಡಿದ ಪರಿಣಾಮ ನೀವೆಲ್ಲರೂ ಇನ್ನು ಮುಂದೆ ಮಾರುಕಟ್ಟೆಗೆ ಹೋಗಬೇಕಾದ ಅಗತ್ಯವಿಲ್ಲ. ಖರೀದಿದಾರನೇ ನಿಮ್ಮಲ್ಲಿಗೇ ಬಂದು ಬೆಳೆಯನ್ನು ಖರೀದಿ ಮಾಡುತ್ತಾನೆ” ಎಂದು ರೈತರಿಗೆ ಉಪ ಮುಖ್ಯಮಂತ್ರಿ ವಿವರಿಸಿದರು.
“ಇದುವರೆಗೂ ನಿಮ್ಮ ಶೋಷಣೆ ಆಗಿದ್ದು ಸಾಕು. ರೈತನೆ ದೇಶದ ಬೆನ್ನೆಲುಬು ಎನ್ನುವ ಹಾಗೆ ಅದಕ್ಕೆ ಶಕ್ತಿ ತುಂಬುವ ಉದ್ದೇಶದಿಂದ ನರೇಂದ್ರ ಮೋದಿ ಅವರ ಸರಕಾರ ಕೃಷಿ ಕ್ಷೇತ್ರದಲ್ಲಿ ಅನೇಕ ಸುಧಾರಣೆಗಳನ್ನು ಜಾರಿಗೆ ತಂದಿದೆ. ಇದುವರೆಗೂ ದಲ್ಲಾಳಿಗಳ ಕೈಗೊಂಬೆಯಾಗಿದ್ದ ಪ್ರತಿಪಕ್ಷಗಳು ವಿನಾಕಾರಣ ನಿಮ್ಮನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿವೆ. ಅಂತಹ ವಿಚಾರಗಳಿಗೆ ಕಿವಿಗೊಡಬೇಡಿ” ಎಂದು ರೈತರಲ್ಲಿ ಮನವಿ ಮಾಡಿದರು.
ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್, ಮಾಗಡಿ ತಾಲ್ಲೂಕಿನ ಬಿಜೆಪಿ ಅಧ್ಯಕ್ಷ ಧನಂಜಯ, ಬಿಜೆಪಿ ಮುಖಂಡ ಎಚ್.ಎಂ.ಕೃಷ್ಣಮೂರ್ತಿ, ಪಕ್ಷದ ವಿವಿಧ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: deputy cheif ministerdr.aswath narayanfarmers dayfeliciate farmersmagadiRAMANAGAR
ShareTweetSendShare
Join us on:

Related Posts

nagara-panchami-2026-date-muhurat-significance

ನಾಗ ಪಂಚಮಿ ಹಬ್ಬದ ಮಹತ್ವ ಮತ್ತು ಆಚರಣೆಯ ಮುಖ್ಯಾಂಶಗಳು

by admin
August 13, 2026
0

ನಾಗ ಪಂಚಮಿ ಸೋಮವಾರ, ಆಗಸ್ಟ್ 17, 2026 ನಾಗ ಪಂಚಮಿ ಪೂಜೆ ಮುಹೂರ್ತ - 05:51 AM ರಿಂದ 08:29 AM ಅವಧಿ - 02 ಗಂಟೆಗಳು...

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

by Shwetha
August 13, 2026
0

ಬೆಂಗಳೂರು: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಒಂದನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಎಲ್ಲ ರೀತಿಯ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟವನ್ನು...

ನೂತನ ಸಚಿವರಿಗೆ ಖಾತೆ ಹಂಚಿಕೆ;  ಯಾವ ಖಾತೆ?

ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾವ ಖಾತೆ?

by Shwetha
August 13, 2026
0

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಆಗಸ್ಟ್ 3ರಂದು ಸೇರ್ಪಡೆಯಾಗಿದ್ದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ...

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

by Shwetha
August 13, 2026
0

ನಟ ಪ್ರಕಾಶ್ ರಾಜ್ ಅವರ ಹೆಸರು ಶಾಂತಿನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಇನ್ನೂ ನೋಂದಣಿಯಲ್ಲಿದ್ದು, ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಅವರ ಹೆಸರನ್ನು ಅಳಿಸಲಾಗಿಲ್ಲ...

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

by Shwetha
August 13, 2026
0

ನವದೆಹಲಿ: ಸಂಸತ್ ಆವರಣದಲ್ಲಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಧ್ಯಮ ಪ್ರತಿನಿಧಿಗಳ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದು, ಪತ್ರಕರ್ತರನ್ನು ಇಲಿಗಳಿಗೆ ಹೋಲಿಸಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram