ಕೊರೊನಾ ಹರಡುವಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಆದರೂ ಸೋಂಕು ಹರಡುವಿಕೆ ಕಡಿಮೆ ಆಗಿಲ್ಲ. ಆ ಹಿನ್ನೆಲೆಯಲ್ಲಿ ಚರ್ಚಿಸಲು ಇಂದು ಸರ್ವಪಕ್ಷ ಸಭೆಯನ್ನು ಕರೆಯಲಾಗಿದೆ. ಕೊರೊನಾ ಕುರಿತು ಚರ್ಚಿಸಲು ರಾಜ್ಯ ಸರ್ಕಾರ ಕರೆದಿರುವ ಸರ್ವಪಕ್ಷ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭಾಗಿಯಾಗಿದ್ದಾರೆ. ಸಭೆಯಲ್ಲಿ ಭಾಗವಹಿಸಲು ವಿಧಾನಸೌಧಕ್ಕೆ ಬಂದ ಸಮಯದಲ್ಲಿ ಡಿ.ಕೆ. ಶಿವಕುಮಾರ್ ಅವರು ಉಷ್ಣಾಂಶ ತಪಾಸಣೆಗೆ ಒಳಗಾದರು.
ಅರವಿಂದ ಅವೇಂಜರ್ಸ್ಗೆ ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ
ಬೆಂಗಳೂರು: ಅಮೋಘ ಆಟ ಪ್ರದರ್ಶಿಸಿದ ಅರವಿಂದ ಅವೇಂಜರ್ಸ್ ತಂಡವು ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. 9ಡ್ರೀಮ್ಸ್ ಸಂಸ್ಥೆ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ...








