ರಾತ್ರಿ ಬರಲು ಕೊರೊನಾ ಅದೇನ್ ಗೂಬೆನಾ..!
ಬೆಂಗಳೂರು: ಇಂಗ್ಲೆಂಡ್‍ನಲ್ಲಿ ರೂಪಾಂತರಗೊಂಡಿರುವ ಹೊಸ ಕೊರೋನಾ ವೈರಸ್ ಆತಂಕದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇಂದಿನಿಂದ ಬದಲು ನಾಳೆಯಿಂದ ನೈಟ್ ಕರ್ಫ್ಯೂ ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ನೈಟ್‍ಕಪ್ರ್ಯೂ ಅವಧಿಯಲ್ಲಿ ಎರಡು ಗಂಟೆಗಳ ಕಾಲ ವಿನಾಯಿತಿ ನೀಡಲಾಗಿದೆ. ರಾತ್ರಿ 10 ರಿಂದ ಬೆಳಿಗ್ಗೆ 6ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದರು. ಆದರೆ, ನಾಳೆ ರಾತ್ರಿ 11 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿ ಇರಲಿದೆ. ಅಂದರೆ ನಾಳೆ ರಾತ್ರಿ 11 ಗಂಟೆಯಿಂದ ಜನವರಿ 2ರ ಬೆಳಗಿನ ಜಾವ 5 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿ ಇರಲಿದೆ.
ವಷಾರ್ಂತ್ಯದಲ್ಲಿ ಈ ರೀತಿ ನೈಟ್ ಕರ್ಫ್ಯೂ ಜಾರಿ ಮಾಡುವುದರಿಂದ ಬಾರ್ ಅಂಡ್ ರೆಸ್ಟೋರೆಂಟ್, ಓಲಾ, ಉಬರ್ ಸೇರಿದಂತೆ ಅನೇಕ ಉದ್ಯಮಗಳಿಗೆ ನಷ್ಟವಾಗಲಿದೆ ಎಂಬ ಕಾರಣಕ್ಕೆ ರಾತ್ರಿ 10 ಗಂಟೆ ಬದಲು 11 ಗಂಟೆಗೆ ವಿಸ್ತರಿಸಲಾಗಿದೆ.
ಈ ಸಂಬಂಧ ಟ್ವಿಟರ್‍ನಲ್ಲಿ ಸ್ಪಷ್ಟಪಡಿಸಿರುವ ಸಿಎಂ ಯಡಿಯೂರಪ್ಪ, ಇಂದಿನಿಂದ ಜಾರಿ ಮಾಡಲು ಉದ್ದೇಶಿಸಿದ್ದ ರಾತ್ರಿ ಕರ್ಫ್ಯೂವನ್ನು ನಾಳೆಯಿಂದ ಅಂದರೆ ದಿನಾಂಕ 24ರಿಂದ ಜನವರಿ 1ರವರೆಗೆ ಜಾರಿ ಮಾಡಲಾಗಿದೆ. ರಾತ್ರಿ 10ರ ಬದಲಿಗೆ 11 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಈ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ನೈಟ್ ಕರ್ಫ್ಯೂ ಕ್ರಿಸ್‍ಮಸ್ ಹಬ್ಬದ ಪ್ರಯುಕ್ತ ಡಿ. 24ರಂದು ನಡೆಯಲಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮಕ್ಕೆ ಯಾವುದೇ ಅಡ್ಡಿಯಾಗದಂತೆ ಕ್ರಮ ವಹಿಸಲಾಗಿದೆ. ಈ ಸಂದರ್ಭದಲ್ಲಿ ಕ್ರಿಸ್‍ಮಸ್ ಅಂಗವಾಗಿ ರಾತ್ರಿ ಸಾಮೂಹಿಕ ಪ್ರಾರ್ತನೆಗೆ ಯಾವುದೇ ಅಡಚಣೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.
ನೈಟ್ ಕರ್ಫ್ಯೂ ಗೈಡ್‍ಲೈನ್ಸ್..
* ರಾತ್ರಿ 11ರಿಂದ ಬೆಳಗಿನ ಜಾವ 5ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿ
* ಕೈಗಾರಿಕೆ, ನೈಟ್ ಶಿಫ್ಟ್ ಆಧಾರಿತ ಕಂಪನಿಗಳಿಗೆ ಶೇ.50ರಷ್ಟು ನೌಕರರ ಬಳಕೆಗೆ ಅನುಮತಿ. ಕಂಪನಿ, ಕೈಗಾರಿಕೆಗಳ ಐಡಿ ಕಾರ್ಡ್ ತೋರಿಸಿ ಹೋಗಬೇಕು. ಕೈಗಾರಿಕೆಗಳು ದಿನದ 24 ಗಂಟೆ ಕೆಲಸ ಮಾಡಲು ಅಡ್ಡಿ ಇಲ್ಲ.
* ದೂರದ ಪ್ರಯಾಣದ ಬಸ್ ಹಾಗೂ ರೈಲುಗಳ ಸಂಚಾರಕ್ಕೆ ಅನುಮತಿ
* ಪಿಕಪ್, ಡ್ರಾಪ್‍ಗೆ ಓಲಾ, ಉಬರ್, ಆಟೋಗಳಿಗೆ ಅವಕಾಶ
* ಬಸ್ ನಿಲ್ದಾಣ, ರೈಲ್ವೆ ಸ್ಟೇಷನ್, ಏರ್‍ಪೋರ್ಟ್‍ಗಳಿಂದ ಪಿಕ್‍ಅಪ್, ಡ್ರಾಪ್‍ಗೆ ಅವಕಾಶ. ಅಧಿಕಾರಿಗಳು ಕೇಳಿದರೆ ಟಿಕೆಟ್ ತೋರಿಸಬೇಕು.
* ಕ್ರಿಸ್‍ಮಸ್, ಹೊಸ ವರ್ಷಾಚರಣೆಗೆ ಷರತ್ತುಬದ್ಧ ಅನುಮತಿ
* ಸರಕು ಸಾಗಣೆ ವಾಹನಗಳಿಗೆ ಯಾವುದೇ ನಿರ್ಬಂಧ ಇಲ್ಲ
ರಾತ್ರಿ ಎಚ್ಚರವಾಗಿರೋಕೆ ಕೊರೊನಾ ಗೂಬೆನಾ..!
ಹೊಸ ಅಲೆಯ ಕೊರೊನಾ ಸೋಂಕು ತಡೆಗೆ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡುತ್ತಿರುವುದನ್ನು ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ ವ್ಯಂಗ್ಯವಾಡಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರ ತರ್ಕರಹಿತವಾದ ಕಪ್ರ್ಯೂ ಆದೇಶವನ್ನು ನೋಡಿದೆ. ರಾತ್ರಿ ಮಾತ್ರ ಎಚ್ಚರವಾಗಿರೋಕೆ ಅದೇನು ಕೊರೊನಾ ಇಲ್ಲ, ಗೂಬೆನಾ ಎಂಬ ಅನುಮಾನ ನನ್ನನ್ನು ಕಾಡತೊಡಗಿದೆ. ಈ ಮಾತು ಹಾಸ್ಯವಾಗಿ ಕಂಡರೂ ನನ್ನಲ್ಲಿ ದಿಗಿಲು ಹುಟ್ಟಿಸಿದೆ ಎಂದು ಟ್ವಿಟರ್ ನಲ್ಲಿ ಲೇವಡಿ ಮಾಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel