ಬಾಕ್ಸಿಂಗ್ ಡೇ ಟೆಸ್ಟ್ ಗೆ ಆಸ್ಟ್ರೇಲಿಯಾ ತಂಡ
ಟೀಮ್ ಇಂಡಿಯಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. ಆದ್ರೆ ತಂಡದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಮೊದಲ ಟೆಸ್ಟ್ ಪಂದ್ಯದಲ್ಲಿ ಆಡಿದ್ದ ತಂಡವನ್ನೇ ಎರಡನೇ ಟೆಸ್ಟ್ ಪಂದ್ಯಕ್ಕೂ ಕಣಕ್ಕಿಳಿಸಲು ಆಸ್ಟ್ರೇಲಿಯಾ ತಂಡದ ಕೋಚ್ ಜಸ್ಟಿನ್ ಲ್ಯಾಂಜರ್ ನಿರ್ಧರಿಸಿದ್ದಾರೆ.
ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಹೀನಾಯವಾಗಿ ಸೋಲು ಅನುಭವಿಸಿತ್ತು. ಮೊದಲ ಟೆಸ್ಟ್ ಪಂದ್ಯದ ಮೊದಲ ಎರಡು ದಿನ ಮೇಲುಗೈ ಸಾಧಿಸಿದ್ದ ವಿರಾಟ್ ಪಡೆ ಎರಡನೇ ಇನಿಂಗ್ಸ್ ನಲ್ಲಿ ಕೇವಲ 36 ರನ್ ಗಳಿಗೆ ಇನಿಂಗ್ಸ್ ಮುಗಿಸಿತ್ತು. ಹೀಗಾಗಿ ಟೀಮ್ ಇಂಡಿಯಾ ಸಾಕಷ್ಟು ಟೀಕೆಗೂ ಗುರಿಯಾಗಿತ್ತು.
ಆಸ್ಟ್ರೇಲಿಯಾ ತಂಡದ ಶಿಸ್ತು ಬದ್ಧ ಬೌಲಿಂಗ್ ಮುಂದೆ ಟೀಮ್ ಇಂಡಿಯಾ ಬ್ಯಾಟ್ಸ್ ಮೆನ್ ಗಳು ಪೆವಿಲಿಯನ್ ಪರೇಡ್ ನಡೆಸಿದ್ದರು. ಗೆಲುವಿನ ಆತ್ಮವಿಶ್ವಾಸದಲ್ಲಿರುವ ಆಸ್ಟ್ರೇಲಿಯಾ ತಂಡ ಯಾವುದೇ ಪ್ರಯೋಗಕ್ಕೆ ಮುಂದಾಗುತ್ತಿಲ್ಲ.
ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಗಾಯದಿಂದ ಪೂರ್ತಿಯಾಗಿ ವಾಸಿಯಾಗಿಲ್ಲ.
ಆಸ್ಟ್ರೇಲಿಯಾ ತಂಡ
ಟೀಮ್ ಪೇನ್ (ನಾಯಕ) ಜೋಯ್ ಬನ್ರ್ಸ್, ಮ್ಯಾಥ್ಯೂ ವಾಡೆ, ಮಾರ್ನಸ್ ಲಾಬುಸ್ಚೆಂಗ್ನೆ, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮರೂನ್ ಗ್ರೀನ್, ಪ್ಯಾಟ್ ಕಮಿನ್ಸ್, ಮಿಟ್ಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹಾಝ್ಲಲ್ ವುಡ್.