ಹುಬ್ಬಳ್ಳಿ : ಕೊರೊನಾ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ದೇಶವನ್ನು ಲಾಕ್ ಡೌನ್ ಮಾಡಲಾಗಿದೆ. ಇದರಿಂದಾಗಿ ದಿನಬಳಕೆ, ಅಗತ್ಯ ವಸ್ತುಗಳು ಸರಿಯಾಗಿ ಸಿಗದೇ ಜನರ ಪರದಾಡುತ್ತಿದ್ದರೆ, ಮತ್ತೊಂದೆಡೆ ಸಾರಾಯಿ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಹುಬ್ಬಳ್ಳಿಯಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಧಾರವಾಡ ಮೂಲದ 46 ವರ್ಷದ ಉಮೇಶ ಹಡಪದ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ನಾಗರಾಜ ರಟಗಲ್ ಅವರ ನಿರ್ಮಾಣ ಹಂತದ ಮನೆಯ ವಾಚ್ ಮನ್ ಆಗಿ ಉಮೇಶ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಭಾರತ್ ಲಾಕ್ ಡೌನ್ ಆದ ಹಿನ್ನೆಲೆ ಸಾರಾಯಿ ಅಂಗಡಿ ಬಂದ್ ಆಗಿದ್ದವು. ಕಳೆದ ಐದು ದಿನದಿಂದ ಕುಡಿಯಲು ಸಾರಾಯಿ ಸಿಕ್ಕಿಲ್ಲ ಎಂಬ ಕಾರಣಕ್ಕೆ ಉಮೇಶ್ ನೇಣಿಗೆ ಶರಣಾಗಿದ್ದಾನೆ. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








