ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಅವರು ಕೋವಿಡ್-19 ಹರಡುವಿಕೆ ತಡೆಯಲು ಮುಂಜಾಗ್ರತಾ ಪರಿಶೀಲನಾ ಸಭೆಯನ್ನು ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅಬಕಾರಿ ಸಚಿವರಾದ ಎಚ್ ನಾಗೇಶ್ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಸಭೆಯ ಬಳಿಕ ಕೋಲಾರ ಜಿಲ್ಲಾ ಆಸ್ಪತ್ರೆಗೆ ಆರೋಗ್ಯ ಸಚಿವ ಶ್ರೀರಾಮುಲು ಅವರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಜನರು ಯಾವುದೇ ಆತಂಕಕ್ಕೆ ಒಳಗಾಗ ಬಾರದು ಎಂದು ಅವರು ಮನವಿ ಮಾಡಿಕೊಂಡರು. ಕೊರೊನಾ ವೈರಸ್ ಹರಡದಂತೆ ತಡೆಯಲು ರಚಿಸಲಾಗಿರುವ ಟಾಸ್ಕ್ ಫೋರ್ಸ್ ಟೀಂ ಪರಿಶೀಲನೆಯನ್ನು ಇದೇ ಸಂದರ್ಭದಲ್ಲಿ ಸಚಿವ ಶ್ರೀರಾಮುಲು ಅವರು ಮಾಡಿದರು.








