ಬೆಂಗಳೂರು: ಕೊರೊನಾ ಭೀತಿಯ ನಡುವೆಯೂ ನಾಡಿನೆಲ್ಲೆಡೆ ವೈಕುಂಠ ಏಕಾದಶಿಯ ಸಂಭ್ರಮ ಕಳೆಗಟ್ಟಿದೆ. ಬೆಂಗಳೂರಿನ ಇಸ್ಕಾನ್ ದೇವಾಲಯ, ವೈಯಾಲಿಕಾವಲ್‍ನ ಟಿಟಿಡಿ ತಿರುಮಲ ದೇವಾಲಯ, ಚಾಮರಾಜಪೇಟೆಯ ಕೋಟೆ ವೆಂಕಟೇಶ್ವರ ದೇವಾಲಯ, ಬನ್ನೇರುಘಟ್ಟದ ಚಂಪಕಧಾಮ ಸ್ವಾಮಿ ದೇವಾಲಯದಲ್ಲಿ ವೈಕುಂಠನಾಥನ ಆರಾಧಾನೆ ನಡೆಯುತ್ತಿದೆ.

ವೈಕುಂಠ ಏಕಾದಶಿಯಂದು ಸ್ವರ್ಗದ ಬಾಗಿಲಿ ತೆರೆಯುತ್ತದೆ ಎಂಬ ನಂಬಿಕೆ ಇದೆ. ಹೀಗಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ವೆಂಕಟೇಶ್ವರ ದೇವಾಲಯಗಳಲ್ಲಿ ವೈಕುಂಠ ದ್ವಾರಗಳನ್ನು ನಿರ್ಮಿಸಿ ಬೆಳಿಗ್ಗೆಯೇ ವಿಶೇಷ ಪೂಜೆ ನಡೆಸುವ ಮೂಲಕ ಗೋವಿಂದನ ನಾಮಸ್ಮರಣೆ ಮಾಡಲಾಗುತ್ತಿದೆ.

ಬೆಂಗಳೂರಿನ ಇಸ್ಕಾನ್, ವೈಯಾಲಿಕಾವಲ್‍ನ ಟಿಟಿಡಿ ದೇವಾಲಯದಲ್ಲಿ ಭಕ್ತರು ಬೆಳಗಿನ ಜಾವದಿಂದಲೇ ಕ್ಯೂನಲ್ಲಿ ನಿಂತು ತಿಮ್ಮಪ್ಪನ ದರ್ಶನ ಪಡೆಯುತ್ತಿದ್ದಾರೆ. ದೇವಸ್ಥಾನಗಳಿಗೆ ಬರುವ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು ಆದೇಶ ಹಿನ್ನೆಲೆಯಲ್ಲಿ ಕೆಲ ದೇವಾಲಯಗಳಿಗೆ ಬರುವ ಭಕ್ತರ ಸಂಖ್ಯೆಯಲ್ಲಿ ಇಳಿಮುಖವಾಗಿದೆ.
ತಿರುಪತಿ ಹಾಗೂ ವೈಯಾಲಿಕಾವಲ್‍ನಲ್ಲಿ 10 ದಿನ ದರ್ಶನ
ಇಂದು ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ತಿರುಪತಿಯ ತಿಮ್ಮಪ್ಪ ಹಾಗೂ ಬೆಂಗಳೂರಿನ ವೈಯಾಲಿಕಾವಲ್‍ನಲ್ಲಿ ಇಂದಿನಿಂದ 10 ದಿನಗಳ ಕಾಲ ವೈಕುಂಠ ದ್ವಾರದ ಮೂಲಕ ಭಕ್ತರಿಗೆ ತಿಮ್ಮಪ್ಪನ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ತಿಮ್ಮಪ್ಪನ ದರ್ಶನಕ್ಕೆ ಲಕ್ಷಾಂತರ ಭಕ್ತರು ಬರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಮ ಪಾಲನೆ ಮಾಡುವುದು ಕಷ್ಟ. ಈ ಕಾರಣಕ್ಕೆ ಇಂದಿನಿಂದ ಜನವರಿ 3ರವರೆಗೆ ಒಟ್ಟು ಹತ್ತುದಿನಗಳ ಕಾಲ ಸ್ವರ್ಗದ ಬಾಗಿಲಿನ ಮೂಲಕ ತಿಮ್ಮಪ್ಪನ ದರ್ಶನ ಮಾಡಲು ಅವಕಾಶ ನೀಡಲಾಗಿದೆ.
![]()
ಸಂಭ್ರಮಕ್ಕೆ ಕೊರೊನಾ ಅಡ್ಡಿ..!
ರಾಜ್ಯಾದ್ಯಂತ ವೈಕುಂಠ ಏಕಾದಶಿ ಸಂಭ್ರಮವಿದ್ದರೂ ಹಲವು ದೇವಾಲಯಗಳಲ್ಲಿ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಿಲ್ಲ. ಬೆಂಗಳೂರಿನ ಕೋಟೆ ವೆಂಕಟೇಶ್ವರ ಸ್ವಾಮಿ ದೇವಾಲಯ ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುತ್ತದೆ. ಹೀಗಾಗಿ ಕೋಟೆ ವೆಂಕಟೇಶ್ವರ ದೇವಾಲಯದಲ್ಲಿ ಗರ್ಭಗಡಿ ಸಮೀಪ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಹೀಗಾಗಿ ಭಕ್ತರಿಲ್ಲದೆ ದೇವಾಲಯ ಖಾಲಿ ಖಾಲಿ ಎನ್ನುತ್ತಿದೆ. ಕಳೆದ 30 ವರ್ಷಗಳಿಂದ ವೈಕುಂಠ ಏಕಾದಶಿಯಂದು ಬರುತ್ತಿದ್ದ ಭಕ್ತರು ನೇರವಾಗಿ ತಿಮ್ಮಪ್ಪನ ದರ್ಶನ ಸಾಧ್ಯವಾಗದೇ ಬೇಸರ ವ್ಯಕ್ತಪಡಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








