ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಮೋದಿ ಸೇರಿದಂತೆ ರಾಜಕೀಯ ಗಣ್ಯರಿಂದ ಗೌರವ ನಮನ..!
ನವದೆಹಲಿ: ಭಾರತ ಕಂಡ ಅತ್ಯಂತ ಧೀಮಂತ ಪ್ರಧಾನಿಗಳಾಗಿದ್ದ ಅಜಾತಶತ್ರು ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವಿಂದು. ಈ ಪ್ರಯುಕ್ತ ಪ್ರದಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ವಾಜಪೇಯಿ ಅವರಿಗೆ ಗೌರವ ಸೂಚಿಸಿದ್ದಾರೆ. ವಾಜಪೇಯಿ ಅವರ 96ನೇ ಜನ್ಮ ವಾರ್ಷಿಕೋತ್ಸವದ ಪ್ರಯುಕ್ತ ದೆಹಲಿಯ ಸದೈವ್ ಅಟಲ್‌ನಲ್ಲಿರುವ ವಾಜಪೇಯಿ ಸಮಾಧಿಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ಸಮರ್ಪಿಸಿದ್ದಾರೆ. ಈ ವೇಳೆ ರಾಷ್ಟ್ರಪತಿ ರಾಮನಾಥ ಕೋವಿಂದ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್ ಸೇರಿದಂತೆ ಅನೇಕರು ಉಪಸ್ಥಿತರಿದ್ದು, ವಾಜಪೇಯಿ ಅವರಿಗೆ ಪುಷ್ಪ ನಮನ ಸಲ್ಲಿಸಿದ್ರು.
ಕಿಸ್ಮಸ್ ಸಂಭ್ರಮ: ಕ್ರೈಸ್ತ ಬಾಂಧವರಿಗೆ ಶುಭಕೋರಿದ ರಾಷ್ಟ್ರಪತಿ, ಮೋದಿ, ಬಿ ಎಸ್ ವೈ..!
ಇನ್ನೂ ಈ ಕುರಿತು ಟ್ವೀಟ್ ಮಾಡಿರುವ ಮೋದಿ ಅವರು, ‘ವಾಜಪೇಯಿ ಅವರ ದೂರದೃಷ್ಟಿಯ ನಾಯಕತ್ವದಿಂದ ದೇಶವನ್ನು ಅಭೂತಪೂರ್ವ ಅಭಿವೃದ್ಧಿಯತ್ತ ಕೊಂಡೊಯ್ದಿದ್ದರು. ಬಲಿಷ್ಠ ಮತ್ತು ಸಮೃದ್ಧ ಭಾರತವನ್ನು ನಿರ್ಮಿಸಲು ಅವರು ಮಾಡಿದ ಪ್ರಯತ್ನಗಳು ಶಾಶ್ವತವಾಗಿ ನೆನಪಿನಲ್ಲಿ ಉಳಿಯುತ್ತವೆ’ ಎಂದಿದ್ದಾರೆ. ಇನ್ನೂ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಸಹ ಟ್ವೀಟ್ ಮಾಡಿ ‘ತಮ್ಮ ವಿಚಾರಧಾರೆ ಮತ್ತು ಸಿದ್ಧಾಂತ ಆಧಾರಿತ ಆಡಳಿತದ ಮೂಲಕ ರಾಷ್ಟ್ರಕ್ಕಾಗಿ ತಮ್ಮ ಜೀವನವನ್ನೇ ಸಮರ್ಪಿಸಿ ಭಾರತದ ವಿಕಾಸ, ಬಡವರ ಕಲ್ಯಾಣ ಮತ್ತು ಉತ್ತಮ ಆಡಳಿತದ ಯುಗವನ್ನು ಪ್ರಾರಂಭಿಸಿದರು. ಅವರ ಜನ್ಮದಿನದಂದು ಅವರಿಗೆ ಗೌರವ ಅರ್ಪಿಸುತ್ತೇನೆ. ಅಟಲ್ ಜಿ ಅವರ ಕರ್ತವ್ಯ ಮತ್ತು ರಾಷ್ಟ್ರೀಯ ಸೇವೆ ಯಾವಾಗಲೂ ನಮಗೆ ಸ್ಫೂರ್ತಿಯಾಗಿರುತ್ತದೆ’ ಎಂದಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








