ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು..!
ಹೈದರಾಬಾದ್ : ಸೂಪರ್ ಸ್ಟಾರ್ ರಜನಿಕಾಂತ್ ಅವರ ಆರೋಗ್ಯದಲ್ಲಿ ಏರುಪೇರುಮಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ರಕ್ತದೊತ್ತಡದಲ್ಲಿ ತೀವ್ರ ಏರುಪೇರು ಕಂಡು ಬಂದ ಹಿನ್ನೆಲೆ ಹೈದರಾಬಾದ್ ನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿದೆ.
ಕಳೆದ 10 ದಿನಗಳಿಂದ ಹೈದರಾಬಾದ್ ನಲ್ಲಿ ಅಣ್ಣಾತೆ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದರು. ಈ ವೇಳೆ ಚಿತ್ರೀಕರಣದ ಸೆಟ್ ನಲ್ಲಿದ್ದ ಕೆಲವರಿಗೆ ಕೋವಿಡ್-19 ಪಾಸಿಟಿವ್ ಇದೆ ಎಂಬ ಮಾಹಿತಿ ಬಹಿರಂಗವಾಗಿತ್ತು. ಇದರ ಬೆನ್ನಲ್ಲೇ ರಜನಿಕಾಂತ್ ಅವರನ್ನು ಸಹ ಪರೀಕ್ಷಿಸಲಾಗಿತ್ತು. ಆದರೆ ಅವರಿಗೆ ಕೊರೋನಾ ನೆಗೆಟಿವ್ ಇರೋದು ತಿಳಿದುಬಂದಿತ್ತು.
ಆದರೆ ಇದೀಗ ಅವರ ರಕ್ತದೊತ್ತಡದಲ್ಲಿ ತೀವ್ರವಾದ ಏರಿಳಿತಗಳು ಕಂಡುಬಂದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತ ರಜನಿಕಾಂತ್ ಅನಾರೋಗ್ಯದ ವಿಚಾರ ಗೊತ್ತಾಗ್ತಿದ್ದಂತೆ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ. ಇನ್ನೂ ರಕ್ತದೊತ್ತಡ ಕಡಿಮೆಯಾಗುವವರೆಗೂ ಅವರನ್ನು ಆಸ್ಪತ್ರೆಯಲ್ಲಿಯೇ ತಪಾಸಣೆ ಗೊಳಪಡಿಸಲಾಗುತ್ತದೆ. ಅವರ ಆರೋಗ್ಯದ ಬಗ್ಗೆ ತೀವ್ರ ನಿಗಾ ವಹಿಸಲಾಗುತ್ತಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








