ವಿಷ್ಣು ಪ್ರತಿಮೆ ಧ್ವಂಸ : ದರ್ಶನ್ ಆಕ್ರೋಶ
ಬೆಂಗಳೂರು : ಸಿಲಿಕಾನ್ ಸಿಟಿ ಹೊರವಲಯದ ಮಾಗಡಿ ರಸ್ತೆಯ ಟೋಲ್ ಬಳಿ ನಿರ್ಮಿಸಿದ್ದ ಸಾಹಸಸಿಂಹ ಡಾ.ವಿಷ್ಣುವರ್ಧನ್ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದಾರೆ. ಈ ಸಂಬಂಧ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕರ್ನಾಟಕದಲ್ಲಿ ಅತಿಯಾಗಿ ಪ್ರೀತಿಸೋ, ಆರಾಧಿಸೋ ವ್ಯಕ್ತಿಗಳಲ್ಲಿ ಮುಂಚೂಣಿಯಲ್ಲಿ ನಿಲ್ಲುವ ನಮ್ಮ ನಲ್ಮೆಯ ಸಾಹಸ ಸಿಂಹ ಡಾ. ವಿಷ್ಣು ಸರ್ ಪುತ್ಥಳಿಯನ್ನು ಯಾರೋ ಕಿಡಿಗೇಡಿಗಳು ಯಾರೂ ಇಲ್ಲದ ಹೊತ್ತಿನಲ್ಲಿ ಧ್ವಂಸ ಮಾಡಿರುವುದು ನಾಚಿಕೆಗೇಡಿನ ಸಂಗತಿ. ಇಂತ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು. ಇಂತ ಹೀನ ಕೃತ್ಯಗಳಿಗೆ ಕೈಜೋಡಿಸುವ ವ್ಯಕ್ತಿಗಳಿಗೆ ಅಭಿಮಾನಿಗಳೇ ತಕ್ಕ ಶಾಸ್ತಿ ಮಾಡುತ್ತಾರೆ ಎಂದು ಬರೆದುಕೊಂಡಿದ್ದಾರೆ.
ಇದೇ ಸ್ಥಳದಲ್ಲಿ ವಿಷ್ಣು ಪ್ರತಿಮೆಯನ್ನು ಧ್ವಂಸ ಮಾಡಿರುವುದು ಇದು ಎರಡನೇ ಬಾರಿ. ಈ ಹಿಂದೆ ಪ್ರತಿಮೆಯನ್ನೇ ಸ್ಥಳದಿಂದ ಎತ್ತೊಯ್ಯಲಾಗಿತ್ತು.
ತಡರಾತ್ರಿ ವಿಷ್ಣುವರ್ಧನ್‍ರ 12 ಅಡಿ ಪ್ರತಿಮೆಯನ್ನು ಪ್ರತಿಮೆಯನ್ನು ಧ್ವಂಸ ಮಾಡಿ ಅವಮಾನ ಮಾಡಿರುವ ಕಿಡಿಗೇಡಿಗಳು ಮತ್ತೆ ತಮ್ಮ ವಿಕೃತಿ ಮೆರೆದಿದ್ದಾರೆ.
ಈ ಹಿಂದೆ ಟೋಲ್‍ಗೇಟ್ ಬಳಿ ಪ್ರತಿಮೆ ನಿರ್ಮಾಣ ಮಾಡುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಆಗಾಗ ಘರ್ಷಣೆ ನಡೆಯುತ್ತಿತ್ತು ಎನ್ನಲಾಗಿದೆ. ಪ್ರತಿಮೆಯನ್ನು ಒಂದು ವಾರದಲ್ಲಿ ಧ್ವಂಸ ಮಾಡುತ್ತೇವೆ ಎಂದು ಕೆಲ ಕಿಡಿಗೇಡಿಗಳು ಓಡಾಡಿಕೊಂಡಿದ್ದರಂತೆ. ಅವರೇ ಈ ಕೃತ್ಯ ನಡೆಸಿರಬಹುದು ಎಂದು ವಿಷ್ಣು ಅಭಿಮಾನಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








