ಜಾತಿವಾರು ಸಮೀಕ್ಷೆ ವರದಿ ಸ್ವೀಕರಿಸಬೇಡ ಎಂದ ಹೆದರಿಸಿದ್ರಂತೆ ಹೆಚ್ಡಿಕೆ
ಚಾಮರಾಜನಗರ: ರಾಜ್ಯ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ನಡುವೆ ನಡೆಯುತ್ತಿರುವ ಮಾತಿನ ಸಮರಕ್ಕೆ ಈಗ ಮತ್ತೊಂದು ತಿರುವು ಬಂದಿದೆ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಜಾತಿವಾರು ಸಮೀಕ್ಷೆ ವರದಿ ಸ್ವೀಕರಿಸದಂತೆ ಅಂದು ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ ಕುಮಾರಸ್ವಾಮಿ ಹೆದರಿಸಿದ್ದರು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮಾಜಿ ಸಚಿವ ಪುಟ್ಟರಂಗಶೆಟ್ಟಿ ಗಂಭೀರ ಆರೋಪ ಮಾಡಿದ್ದಾರೆ.

ಇದೇ ವೇಳೆ ರಾಜ್ಯದಲ್ಲಿ ಲಿಂಗಾಯತರು, ಒಕ್ಕಲಿಗರಿಗಿಂತ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ರಾಜ್ಯದಲ್ಲಿ ಲಿಂಗಾಯಿತ ಜನಸಂಖ್ಯೆ ಕೇವಲ 68 ಲಕ್ಷ. ಲಿಂಗಾಯತರು ಒಂದೂವರೆ ಕೋಟಿ, ಒಕ್ಕಲಿಗರು ಒಂದು ಕೋಟಿ, ಉಪ್ಪಾರರು 30 ಲಕ್ಷ ಜನಸಂಖ್ಯೆ ಇದ್ದೇವೆ ಅನ್ನೋದೆಲ್ಲಾ ಸುಳ್ಳು.
ಲಿಂಗಾಯತರು ಕೇವಲ 67 ರಿಂದ 68 ಲಕ್ಷ ಇದ್ದಾರೆ, ಒಕ್ಕಲಿಗರು 48 ಲಕ್ಷ ಹಾಗು ಉಪ್ಪಾರರು 14 ಲಕ್ಷ ಇದ್ದಾರೆ. ರಾಜ್ಯದಲ್ಲಿ ಎಲ್ಲಾ ಸಮುದಾಯಗಳಿಗಿಂತ ಮುಸ್ಲಿಂರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹೀಗಾಗಿಯೇಜಾತಿವಾರು ಸಮೀಕ್ಷೆ ವರದಿ ಸ್ವೀಕರಿಸದಂತೆ ಅಂದು ಸಿಎಂ ಆಗಿದ್ದ ಕುಮಾರಸ್ವಾಮಿ ನನ್ನನ್ನು ಹೆದರಿಸಿದ್ದರು ಪುಟ್ಟರಂಗಶೆಟ್ಟಿ ಆರೋಪಿಸಿದ್ದಾರೆ.

ನಾನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವನಾಗಿದ್ದಾಗ ಹಿಂದುಳಿದ ವರ್ಗಗಳ ಆಯೋಗದ ಸಭೆ ನಡೆಸಿ ಜಾತಿವಾರು ಸಮೀಕ್ಷಾ ವರದಿಯನ್ನು ಸ್ವೀಕರಿಸಲು ಸಿದ್ದನಿದ್ದೆ. ಆದರೆ ಹೆಚ್.ಡಿ.ಕುಮಾರಸ್ವಾಮಿ ನಿಮಗೆ ಸಭೆ ಕರೆಯಲು ಹೇಳಿದ್ದವರು ಯಾರು? ಯಾವುದೇ ಕಾರಣಕ್ಕೂ ಸಭೆ ನಡೆಸಬಾರದು ಹಾಗೂ ಸಮೀಕ್ಷಾ ವರದಿ ಸ್ವೀಕರಿಸಬಾರದು ಎಂದು ಹೆದರಿಸಿದ್ದರು ಹೇಳಿದ್ದಾರೆ.
ಒಬ್ಬ ಮುಖ್ಯಮಂತ್ರಿ ಹೇಳಿದ ಮೇಲೆ ಅವರ ಮಾತಿಗೆ ಗೌರವ ಕೊಡಬೇಕು ಅನ್ನೋ ಕಾರಣಕ್ಕೆ ನಾನು ಅಂದಿನ ಸಭೆಯನ್ನು ರದ್ದುಮಾಡಿದೆ. ಇಲ್ಲದಿದ್ದರೆ ಅಂದೇ ವರದಿ ಸ್ವೀಕರಿಸುತ್ತಿದ್ದೆ ಎಂದು ಹೇಳಿದ್ದಾರೆ.
ನಾನು ಸಿಎಂ ಆಗಿದ್ದಾಗ ಜಾತಿವಾರು ಸಮೀಕ್ಷೆ ಅಪೂರ್ಣವಾಗಿತ್ತು. ಆದರೆ, ಕುಮಾರಸ್ವಾಮಿ ಸಿಎಂ ಆಗಿದ್ದಾಗ ಪೂರ್ಣಗೊಂಡಿತ್ತು. ಆದರೆ ಕುಮಾರಸ್ವಾಮಿ ಪುಟ್ಟರಂಗಶೆಟ್ಟಿಗೆ ಕರೆ ಮಾಡಿ ವರದಿ ಸ್ವೀಕರಿಸದಂತೆ ಹೆದರಿಸಿದ್ದರು ಎಂದು ಇತ್ತೀಚೆಗೆ ಸಿದ್ದರಾಮಯ್ಯ ಆರೋಪ ಮಾಡಿದ್ದರು. ಸಿದ್ದರಾಮಯ್ಯ ಆರೋಪಕ್ಕೆ ಪುಟ್ಟರಂಗಶೆಟ್ಟಿ ಧ್ವನಿಗೂಡಿಸಿದ್ದಾರೆ.
ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂದು ಹೇಳುತ್ತಿರುವ ಸಿಎಂ ಯಡಿಯೂರಪ್ಪ ಈ ವರದಿಯನ್ನು ಸ್ವೀಕರಿಸಲಿ. ವರದಿ ಸ್ವೀಕರಿಸಲು ಅವರಿಗೆ ಏನು ಕಷ್ಟ ಎಂದ ಪುಟ್ಟರಂಗಶೆಟ್ಟಿ ಸವಾಲು ಹಾಕಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








