ಬೆಂಗಳೂರು: ದೇವೇಗೌಡರನ್ನು ಈ ದೇಶದ ಪ್ರಧಾನಿಯನ್ನಾಗಿ ಮಾಡಿದ್ದು ಇದೇ ಕಾಂಗ್ರೆಸ್ ಶಾಲು. ನಾವೇ ಬಲವಂತ ಮಾಡಿಯೋ ಏನೋ ಅಂತೂ ಕುಮಾರಸ್ವಾಮಿ ಅವರನ್ನೂ ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಿದ್ದು ಇದೇ ಕಾಂಗ್ರೆಸ್ ಶಾಲು ಎಂದು ಹೇಳಿದ್ದೆ. ಕುಮಾರಸ್ವಾಮಿ ನನ್ನನ್ನು ವೈಯಕ್ತಿಕವಾಗಿ ನಿಂದಿಸಲಿ, ಸಹಿಸಿಕೊಳ್ಳುತ್ತೇನೆ. ಆದರೆ ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡಿದರೆ ಎಂದಿಗೂ ಸ್ವಾಭಿಮಾನ ಬಿಟ್ಟುಕೊಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಹೆಚ್.ಡಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಕಾಂಗ್ರೆಸ್ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆಶಿ, ಕುಮಾರಸ್ವಾಮಿ ಅವರು ನಾನು ರೈತರ ಹೋರಾಟದಲ್ಲಿ ಭಾಗವಹಿಸುವಾಗ ಹಸಿರು ಶಾಲು ಹಾಕಿಕೊಂಡಿದ್ದನ್ನು ಉಲ್ಲೇಖಿಸಿ ಕಾಂಗ್ರೆಸ್ ಶಾಲಿಗೆ ಶಕ್ತಿ ಇಲ್ಲ, ಹೀಗಾಗಿ ಹಸಿರು ಶಾಲು ಹಾಕಿಕೊಂಡಿದ್ದಾರೆ ಎಂದು ಟೀಕಿಸಿದರ, ಆಗ ನಾನು ಸಾಕಷ್ಟು ತಾಳ್ಮೆಯಿಂದ ಮಾತನಾಡಿದೆ ಎಂದಿದ್ದಾರೆ.
ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಎಲ್ಲ ವರ್ಗದವರು ಅಧಿಕಾರಕ್ಕೆ ಬಂದ ಹಾಗೇ. ಇದು ಒಂದು ವರ್ಗ, ಒಂದು ಜಾತಿಗೆ ಸೀಮಿತವಾದ ಪಕ್ಷವಲ್ಲ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೊಂದೇ ಕಾಂಗ್ರೆಸ್ ಸಾಧನೆ ಅಲ್ಲ. ಈ ದೇಶಕ್ಕೆ ಸಂವಿಧಾನ ಕೊಟ್ಟಿದ್ದು ಕೂಡ ನಾವೇ. ನಾವು ಆ ಸಂವಿಧಾನದಲ್ಲೇ ಇಂದಿಗೂ ಬದುಕುತ್ತಿದ್ದೇವೆ. ಅದರಿಂದಲೇ ಶಿಕ್ಷಣ ಕೊಟ್ಟಿದ್ದೇವೆ ಎಂದು ಜೆಡಿಎಸ್, ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ಗೋ ಹತ್ಯೆ ಕಾನೂನು 1964ರಲ್ಲೇ ಜಾರಿಗೆ ಬಂದಿದೆ. ಬಿಜೆಪಿ ಒಂದು ವರ್ಗದವರನ್ನು ಗುರಿಯಾಗಿಸಿ ಈಗ ಹೊಸದಾಗಿ ಕಾಯ್ದೆ ತರುತ್ತಿದೆ. ಆದರೆ ಕಾಂಗ್ರೆಸ್ ಪಕ್ಷ ಒಂದು ವರ್ಗದ ಬಗ್ಗೆ ಚಿಂತಿಸುತ್ತಿಲ್ಲ. ರೈತನ ರಕ್ಷಣೆಗಾಗಿ ನಾವು ಇಂದು ಹೋರಾಟ ಮಾಡುತ್ತಿದ್ದೇವೆ. ನೀವು ವಯಸ್ಸಾದ ತಂದೆ-ತಾಯಿಯನ್ನು ಬೀದಿಗೆ ಬಿಡುತ್ತೀರಾ ಅಂತಾ ಕೇಳುತ್ತೀರಲ್ಲಾ, ಹಾಗಾದರೆ ವಯಸ್ಸಾದ ಗೋವುಗಳನ್ನು ಸಾಕಲು ರೈತನಿಗೆ ಪೆÇ್ರೀತ್ಸಾಹ ಧನ ನೀಡಿ. ಇದು ಕೇವಲ ಒಂದು ವರ್ಗದ ವಿಚಾರವಲ್ಲ. ಇದು ಒಂದು ಉದ್ಯಮದ ಪ್ರಶ್ನೆ. ಇದು ಒಂದಕ್ಕೊಂದು ಬೆಸೆದುಕೊಂಡಿರುವ ವಿಚಾರ ಎಂದು ಬಿಜೆಪಿ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ನಮ್ಮ ಮಲ್ಲಿಕಾರ್ಜುನ ಖರ್ಗೆ ಹಾಗೂ ಆಸ್ಕರ್ ಫನಾರ್ಂಡಿಸ್ ಅವರು ಕಾರ್ಮಿಕ ಸಚಿವರಾಗಿದ್ದಾಗ ಕಾರ್ಮಿಕರ ಪರ ಕಾನೂನುಗಳನ್ನು ತಂದಿದ್ದರು. ಆದರೆ ಈ ಸರ್ಕಾರದ ನೋಟು ರದ್ಧತಿ, ಜಿಎಸ್ಟಿ, ಆರ್ಟಿಕಲ್ 370 ಸೇರಿದಂತೆ ಯಾವುದೇ ನಿರ್ಧಾರಗಳಿಂದ ರಾಜ್ಯದಲ್ಲಿ ನೆಮ್ಮದಿ ಸಿಕ್ಕಿದೆಯಾ? ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಪಕ್ಷ ಬಿಟ್ಟು ಹೋದವರು ಮತ್ತೆ ವಾಪಸ್ಸಾಗಲು ಇಚ್ಚಿಸಿದರೆ ಸ್ವಾಗತಿಸುತ್ತೇನೆ. ಪಕ್ಷಕ್ಕೆ ಯಾವುದೇ ಷರತ್ತು ಇಲ್ಲದೆ ತತ್ವ ಹಾಗೂ ನಾಯಕತ್ವ ನಂಬಿ ಬರುವವರಿಗೆ ಸ್ವಾಗತ ಎಂದು ಡಿಕೆಶಿ ತಿಳಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel