ಮಮತಾ ಆಪ್ತನ ವಶಕ್ಕೆ ಕೋರಿ ಸುಪ್ರೀಂ ಮೊರೆ ಹೋದ ಸಿಬಿಐ
ಕೋಲ್ಕತಾ: ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಆಪ್ತ ಹಾಗೂ ಕೋಲ್ಕತಾದ ಮಾಜಿ ಪೊಲೀಸ್ ಆಯುಕ್ತರಾದ ರಾಜೀವ್ ಕುಮಾರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಅವಕಾಶ ಕೋರಿ ಸಿಬಿಐ ಸುಪ್ರೀಂಕೋರ್ಟಿಗೆ ಮನವಿ ಸಲ್ಲಿಸಿದೆ.
ಪಶ್ಚಿಮ ಬಂಗಾಳದ ವಿಧಾನಸಭಾ ಕ್ಷೇತ್ರದ ಚುನಾವಣೆ ಬೆನ್ನಲ್ಲೇ ನೆನೆಗುದಿಗೆ ಬಿದ್ದಿದ್ದ ಶಾರದ ಚಿಟ್ ಫಂಡ್ ಹಗರಣ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀವ್ ವಿಚಾರಣೆಗೊಳಪಡಿಸಲು ಸಿಬಿಐ ಸುಪ್ರೀಂ ಕೋರ್ಟ್ ಅರ್ಜಿ ಸಲ್ಲಿಸಿದೆ.
ನಮ್ಮದು ಪ್ರೀತಿಸುವ ಹಿಂದುತ್ವ, ಬಿಜೆಪಿಯದ್ದು ದ್ವೇಷಿಸುವ ಹಿಂದುತ್ವ : ಸಿದ್ದರಾಮಯ್ಯ ಹಿಂದುತ್ವ ಪಾಠ
ಇನ್ನೂ ಪ್ರಕರಣ ಒಂದು ವರ್ಷದಿಂದ ಸುಪ್ರೀಂಕೋರ್ಟ್‌ನಲ್ಲಿ ಬಾಕಿ ಉಳಿದಿದ್ದು ಶೀಘ್ರ ವಿಚಾರಣೆ ನಡೆಸಬೇಕು. ಕಸ್ಟಡಿ ವಿಚಾರಣೆ ನಡೆಸಬೇಕಿರುವುದರಿಂದ ಕುಮಾರ್ ಅವರಿಗೆ ನೀಡಲಾಗಿದ್ದ ಜಾಮೀನು ರದ್ದುಗೊಳಿಸಬೇಕು ಎಂದು ಕೂಡ ಸಿಬಿಐ ಕೋರಿದೆ.
ಶಾರದಾ ಚಿಟ್ ಫಂಡ್ ಹಗರಣದ ತನಿಖೆ ವೇಳೆ ಸಂಗ್ರಹಿಸಿದ ಸಾಕ್ಷ್ಯಗಳನ್ನು ಕುಮಾರ್ ಹಾಳುಗೆಡವಿದ್ದಾರೆ. ಹೀಗಾಗಿ, ಕೋರ್ಟ್ ನೀಡಿದ್ದ ಷರತ್ತು ಮುರಿದಿದ್ದಾರೆ. ಅವರ ಜಾಮೀನು ರದ್ದುಗೊಳಿಸಬೇಕು ಎಂದು ಕೂಡಾ ಸಿಬಿಐ ಅರ್ಜಿಯಲ್ಲಿ ಉಲ್ಲೇಖವಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel