ಸಿದ್ದರಾಮಯ್ಯನವರೇ ಎಐಸಿಸಿ ನಿಮ್ಮನ್ನೇ ನಂಬಿದೆ : ಕೆ.ಹೆಚ್.ಮುನಿಯಪ್ಪ
ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ವಿರುದ್ಧ ಸಿದ್ದರಾಮಯ್ಯನವರು ಒಬ್ಬರೇ ಹೋರಾಟ ಮಾಡುತ್ತಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಕೆ.ಹೆಚ್ ಮುನಿಯಪ್ಪ ಸಿದ್ದರಾಮಯ್ಯ ಅವರನ್ನು ಹಾಡಿಹೊಗಳಿದ್ದಾರೆ.
ಕಾಂಗ್ರೆಸ್ ಪಕ್ಷದ 136ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಮಾಜಿ ಸಿದ್ದರಾಮಯ್ಯ ಅವರ ಪರ ಬ್ಯಾಟ್ ಬೀಸಿದರು.
ಸಿದ್ದರಾಮಯ್ಯ ಒಬ್ಬರೇ ರಾಜ್ಯದಲ್ಲಿ ಬಿಜೆಪಿ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಇದಕ್ಕಾಗಿ ಅವರು ಟೀಕೆಗೂ ಒಳಗಾಗಿದ್ದಾರೆ.
ದೇಶಕ್ಕೆ ಕಾಂಗ್ರೆಸ್ ಅನಿವಾರ್ಯ : ರಮಾನಾಥ ರೈ
ಅದೇ ರೀತಿ ಮೋದಿ ವಿರುದ್ಧ ರಾಹುಲ್ ಗಾಂಧಿ ಮಾತ್ರ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರು, ಶಾಸಕಾಂಗ ಪಕ್ಷದ ನಾಯಕರು, ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು ಮಾತನಾಡಬೇಕು ಎಂದು ಸಲಹೆ ನೀಡಿದರು.
ಪ್ರಧಾನಿ ಭಾಷಣ ಮುಗಿದ ತಕ್ಷಣ ಪತ್ರಿಕಾಗೋಷ್ಠಿಗಳನ್ನು ನಡೆಸಿ ಬಿಜೆಪಿ ವಿರುದ್ಧ ಅಟ್ಯಾಕ್ ಮಾಡಬೇಕು. ಅವರ ಅಚಾತುರ್ಯಗಳನ್ನು ಜನರಿಗೆ ತಿಳಿಸಬೇಕು. ಆದರೆ, ಕಾಂಗ್ರೆಸ್‍ನಲ್ಲಿ ಅದು ಆಗುತ್ತಿಲ್ಲ ಎಂದು ಮುನಿಯಪ್ಪ ಬೇಸರ ಹೊರಹಾಕಿದರು.
ಇನ್ನು ಸಿದ್ದರಾಮಯ್ಯ ಬಗ್ಗೆ ಮಾತನಾಡಿ ಸಿದ್ದರಾಮಯ್ಯನವರೇ ನೀವು ಉಗ್ರ ಹೋರಾಟ ಮಾಡುತ್ತಿದ್ದೀರಿ. ನೀವು ಮುಖ್ಯಮಂತ್ರಿ ಆಗಿ ಸ್ವಾತಂತ್ರ್ಯ ಬಂದಾಗಿನಿಂದ ಯಾವ ಸರ್ಕಾರವೂ ನೀಡದಂತಹ ಒಳ್ಳೆಯ ಕಾರ್ಯಕ್ರಮಗಳನ್ನು ನಿಡೀದ್ದೀರಿ. ಈಗ ನಿಮ್ಮ ಮೇಲೆ ಬಹಳ ದೊಡ್ಡ ಜವಾಬ್ದಾರಿ ಇದೆ. ಎಐಸಿಸಿ ನಿಮ್ಮನ್ನೇ ನಂಬಿದೆ. ನೀವು ಮುಂದೆ ಸಾಗಬೇಕು, ಅಧ್ಯಕ್ಷರನ್ನು ಜೊತೆಗೆ ಕರೆದುಕೊಂಡು ಹೋಗಬೇಕು ಎಂದು ಮನವಿ ಮಾಡಿಕೊಂಡರು.
ಇದೇ ವೇಳೆ ಕಾಂಗ್ರೆಸ್ ಮುಂದಿನ ಸಿಎಂ ಅಭ್ಯರ್ಥಿ ಬಗ್ಗೆ ಮಾತನಾಡಿ ಮುಖ್ಯಮಂತ್ರಿ ಕುರ್ಚಿ ಕಿತ್ತಾಟ ಬಿಡಿ. ಎಲ್ಲರೂ ಒಟ್ಟಾಗಿ ಶ್ರಮಿಸಿ ಪಕ್ಷವನ್ನ ಅಧಿಕಾರಕ್ಕೆ ತನ್ನಿ ಅಂತಾ ಬುದ್ಧಿಮಾತು ಹೇಳಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








