ಡಿಸೆಂಬರ್ 31ರಂದು ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆ Thunderstorms December 31
ಬೆಂಗಳೂರು, ಡಿಸೆಂಬರ್29: ಡಿಸೆಂಬರ್ 31ರಂದು ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. Thunderstorms December 31

ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರಿನಲ್ಲಿ ಸಾಧಾರಣ ಮಳೆಯಾಗಲಿದೆ. 2.5 ಮಿ.ಮೀನಿಂದ 64.4 ಮಿ.ಮೀವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚೀನಾದ ಹೂಡಿಕೆಗಳನ್ನು ಹಿಂದಕ್ಕೆ ತಳ್ಳಿರಬಹುದು, ಆದರೆ ಚೀನಾದ ಸೈನಿಕರನ್ನು ಹಿಂದಕ್ಕೆ ತಳ್ಳಲು ಸಾಧ್ಯವಾಗಿಲ್ಲ – ರಾವತ್
ಬೆಂಗಳೂರಿನಲ್ಲಿ ಆಕಾಶ ಶುಭ್ರವಾಗಿದ್ದು, ಗರಿಷ್ಠ ಉಷ್ಣಾಂಶ 29 ಡಿಗ್ರಿ , ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೀದರ್ನಲ್ಲಿ 9.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಜಮ್ಮು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಲ್ಟಿಸ್ತಾನ, ಮುಜಾಫರಾಬಾದ್ನಲ್ಲಿ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಡಿಸೆಂಬರ್ 27 ಮತ್ತು 28ರಂದು ಉತ್ತರಾಖಂಡ, ಪಂಜಾಬ್, ಹರ್ಯಾಣ, ಚಂಡೀಗಢದಲ್ಲಿ ಹಿಮಪಾತದ ಜತೆಗೆ ಮಳೆಯಾಗಲಿದೆ ಎಂದು ಹೇಳಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
https://twitter.com/SaakshaTv/status/1343586719208071168?s=19
https://twitter.com/SaakshaTv/status/1343587039950721026?s=19








