ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ತರಗತಿಗೆ ಸಂಬಂಧಿಸಿದಂತೆ ಮುಂದಿನ ಪದವಿಪೂರ್ವ ಶಿಕ್ಷಣಕ್ಕೆ ಅವಶ್ಯಕವಾಗುವ ಕನಿಷ್ಟ ಜ್ಞಾನ ಹಾಗೂ ಪರೀಕ್ಷಾಭಿಮುಖವಾಗಿ ಅವಶ್ಯಕವಾಗುವ ಪಠ್ಯವನ್ನು ನಿರ್ಧರಿಸಿ ಬೋಧನೆಗೆ ನಿರ್ಣಯಿಸಲಾಗಿದೆ. ಬೋಧನೆಗೆ ಲಭ್ಯವಾಗುವ ಸಮಯದ ಆಧಾರದಲ್ಲಿ ರೂಪರೇಷೆಗಳನ್ನು ಮುಂದಿನ ಒಂದು ವಾರದ ಅವಧಿಯಲ್ಲಿ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಈಗಾಗಲೇ ಘೋಷಿಸಿರುವಂತೆ ಜನವರಿ ಒಂದಕ್ಕೆ ಶಾಲೆಗಳು ಆರಂಭವಾಗಲಿವೆ. ತಾಂತ್ರಿಕ ಸಲಹಾ ಸಮಿತಿಯ ಅಭಿಪ್ರಾಯ ಹಾಗೂ ಈ ನಿಟ್ಟಿನಲ್ಲಿ ಸಿಎಂ ಸೂಚನೆ ಹಿನ್ನೆಲೆಯಲ್ಲಿ ಶಾಲಾರಂಭಕ್ಕೆ ಅಗತ್ಯ ಸಿದ್ಧತೆಗಳನ್ನ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.
ಜನವರಿ ಒಂದಕ್ಕೆ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ಪ್ರಾರಂಭಿಸಲಾಗುತ್ತಿದ್ದು, ಅದರ ಯಶಸ್ಸಿನ ಆಧಾರದಲ್ಲಿ ಜನವರಿ 15ರ ನಂತರ ಉಳಿದ ತರಗತಿಗಳ ಪ್ರಾರಂಭಕ್ಕೆ ಸೂಕ್ತ ನಿರ್ಣಯ ತೆಗೆದುಕೊಳ್ಳಲಾಗುವುದು. ಈಗಾಗಲೇ ತಿಳಿಸಲಾದ ರೀತಿಯಲ್ಲಿ ಜನವರಿ ಒಂದರಿಂದ ಆಯ್ದ ತರಗತಿಗಳ ವಿದ್ಯಾಗಮ ಕಾರ್ಯಕ್ರಮವೂ ಆರಂಭವಾಗಲಿದೆ ಎಂದು ಅವರು ಖಚಿತಪಡಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








