ಬೆಂಗಳೂರು: ಡಿಸೆಂಬರ್ 22, 27ರಂದು ಎರಡು ಹಂತದಲ್ಲಿ ನಡೆದ ಗ್ರಾಮ ಪಂಚಾಯ್ತಿ ಚುನಾವಣೆ ಮತ ಎಣಿಕೆ ಬಿರುಸಿನಿಂದ ಸಾಗಿದೆ. ಬ್ಯಾಲೆಟ್ ಪೇಪರ್ ಬಳಕೆಯಾಗಿದ್ದರಿಂದ ಫಲಿತಾಂಶ ತಡವಾಗುವ ಸಾಧ್ಯತೆ ಇದೆ.
ಈ ನಡುವೆ, ಗ್ರಾಮ ಪಂಚಾಯಿತಿ ಫಲಿತಾಂಶದ ಬಗ್ಗೆ ಖುಷಿ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಬಿಜೆಪಿ ಬೆಂಬಲಿತ ಶೇ 85 ರಿಂದ 90 ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ನನಗೆ ದೊರಕಿರುವ ಮಾಹಿತಿಯ ಪ್ರಕಾರ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶೇ 85 ರಿಂದ 90 ರಷ್ಟು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸುವುದು ಖಚಿತ” ಎಂದು ತಿಳಿಸಿದ್ದಾರೆ.
ರಾಜ್ಯ ರಾಜಕೀಯಕ್ಕೆ ದಿಕ್ಸೂಚಿಯಾಗುತ್ತಾ ಫಲಿತಾಂಶ..!
ಗ್ರಾಮ ಪಂಚಾಯ್ತಿ ಚುನಾವಣೆ ಯಾವುದೇ ರಾಜಕೀಯ ಪಕ್ಷಗಳ ಹೆಸರು ಹಾಗೂ ಚಿನ್ಹೆಗಳ ಮೇಲೆ ನಡೆಯುವುದಿಲ್ಲ. ಆದರೂ, ರಾಜಕೀಯ ಪಕ್ಷಗಳ ಕಾರ್ಯಕರ್ತರೇ ಕಣದಲ್ಲಿರುವುದರಿಂದ ಯಾವ ಪಕ್ಷದ ಎಷ್ಟು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ, ಯಾವ ಪಕ್ಷಕ್ಕೆ ಗ್ರಾಮೀಣ ಪ್ರದೇಶದಲ್ಲಿ ಜನರ ಒಲವು ಇದೆ ಎಂಬುದು ಅರಿಯಲು ಈ ಫಲಿತಾಂಶ ಮುಂದಿನ ರಾಜಕೀಯ ಬೆಳವಣಿಗೆ ದೃಷ್ಟಿಯಿಂದ ಮಹತ್ವ ಪಡೆದಿದೆ. ಮುಂದಿನ ಚುನಾವಣೆಗಳಿಗೂ ಈ ಫಲಿತಾಂಶ ದಿಕ್ಸೂಚಿಯಾಗಲಿದೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.

ಕರ್ನಾಟಕದ 5,728 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆದಿದ್ದು, ಮತ ಎಣಿಕೆ ಪ್ರಾರಂಭವಾಗಿದೆ. ಇವಿಎಂಗಳನ್ನು ಬಳಸಿದ ಬೀದರ್ ಜಿಲ್ಲೆಯನ್ನು ಹೊರತುಪಡಿಸಿ ಮತದಾನದಲ್ಲಿ ಮತಪತ್ರಗಳನ್ನು ಬಳಸಲಾಗಿದ್ದರಿಂದ, ಫಲಿತಾಂಶಗಳ ಪ್ರಕಟಣೆ ವಿಳಂಬವಾಗಬಹುದು ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.
ಬಿಜೆಪಿ ಬೆಂಬಲಿತರ ಮುನ್ನಡೆ
ಇತ್ತೀಚಿನ ಮಾಹಿತಿ ಪ್ರಕಾರ ರಾಜ್ಯದ 5728 ಗ್ರಾಮ ಪಂಚಾಯಿತಿಗಳ 82,616 ಸ್ಥಾನಗಳ ಪೈಕಿ ಬಿಜೆಪಿ ಬೆಂಬಲಿತ 3873, ಕಾಂಗ್ರೆಸ್ ಬೆಂಬಲಿತ 1988, ಜೆಡಿಎಸ್ ಬೆಂಬಲಿತ 1039 ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.
ಒಟ್ಟು ಗ್ರಾಮ ಪಂಚಾಯಿತಿಗಳು-5728
ಚುನಾವಣೆ ನಡೆದ ಒಟ್ಟು ಸ್ಥಾನಗಳು-82,616
ಬಿಜೆಪಿ ಬೆಂಬಲಿತ-3873
ಕಾಂಗ್ರೆಸ್ ಬೆಂಬಲಿತ-1988
ಜೆಡಿಎಸ್ ಬೆಂಬಲಿತ-1039
ಇತರೆ-503
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








