ಮಡಿಕೇರಿ: ಜೈಲಿನಿಂದಲೇ ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬರು ಗೆಲುವು ಸಾಧಿಸಿ ಎಲ್ಲರನ್ನು ನಿಬ್ಬೆರಗಾಗುವಂತೆ ಮಾಡಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಎಮ್ಮೆಗುಂಡಿ ಕ್ಷೇತ್ರದ ಪುಲಿಯಂಡ ಬೋಪಣ್ಣ ಗೆಲುವು ಸಾಧಿಸಿರುವ ಬಿಜೆಪಿ ಬೆಂಬಲಿತ ಅಭ್ಯರ್ಥಿ. ಸತತ ನಾಲ್ಕನೇ ಬಾರಿಗೆ ಜಯಭೇರಿ ಸಾಧಿಸಿರುವ ಬೋಪಣ್ಣ ಕೊನೆ ಕ್ಷಣದಲ್ಲಿ ಪಾಲಿಬೆಟ್ಟ ಗ್ರಾಮ ಪಂಚಾಯಿತಿಯ ಎಮ್ಮೆಗುಂಡಿ ವಾರ್ಡ್ನಿಂದ ಸ್ಪರ್ಧಿಸಿ ಜೈಲಿನಿಂದ ಬಿಡುಗಡೆಯಾಗಿ ಪ್ರಚಾರ ನಡೆಸಿದ್ದರು.
ಜಾತಿ ನಿಂದನೆ ಪ್ರಕರಣದಲ್ಲಿ ಕೆಲವು ತಿಂಗಳ ಹಿಂದೆ ಜೈಲು ಸೇರಿದ್ದರು. ಸ್ನೇಹಿತರು ಹಗೂ ಕಾರ್ಯಕರ್ತರ ಸಹಾಯದಿಂದ ಜೈಲಿನಿಂದಲೇ ನಾಮಪತ್ರ ಸಲ್ಲಿಸಿ ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧೆ ನಡೆಸಿದ್ದರು. ಈ ಹಿಂದೆ ಪುಲಿಯಂಡ ಬೋಪಣ್ಣ ಎರಡು ಬಾರಿ ಪಾಲಿಬೆಟ್ಟ ಗ್ರಾಮ ಪಂಚಾಯಿಸಿ ಅಧ್ಯಕ್ಷರಾಗಿಯೂ ಆಯ್ಕೆಯಾಗಿ ಕೆಲಸ ಮಾಡಿದ್ದಾರೆ.
ಅಕ್ಕನ ವಿರುದ್ಧ ತಂಗಿ ಭರ್ಜರಿ ಗೆಲುವು
ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಮೇಕೇರಿ ಗ್ರಾಮ ಪಂಚಾಯಿತಿಯಲ್ಲಿ ಅಕ್ಕನ ವಿರುದ್ಧ ತಂಗಿಯ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಳಿಗೇರಿ ವಾರ್ಡ್ 1 ರಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪುಷ್ಪಾ ಜಯಭೇರಿ ಬಾರಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸುಮಾವತಿ ಕೇವಲ 80 ಮತಗಳ ಅಂತರದಿಂದ ಪರಾಜಿತರಾಗಿದ್ದಾರೆ.
ಕಳೆದ ಬಾರಿಯೂ ಅಕ್ಕ-ತಂಗಿ ಚುನಾವಣೆಯಲ್ಲಿ ಸ್ಪರ್ಧೆ ನಡೆಸಿದ್ದರು. ಆಗಲೂ ಪುಷ್ಪಾ ಅವರೇ ಗೆದ್ದಿದ್ದರು. ಆಗ ಅಕ್ಕ ಸುಮಾವತಿ ತಂಗಿ ಪುಷ್ಪಾ ವಿರುದ್ಧ ಮುನಿಸಿಕೊಂಡಿದ್ದರಂತೆ. ಈ ಬಾರಿ ಮತ್ತೆ ಸ್ಪರ್ಧೆ ಮಾಡಿದಾಗಲು ಅಕ್ಕನೇ ತಂಗಿಗೆ ಬೆನ್ನುತಟ್ಟಿ ಪ್ರೋತ್ಸಾಹ ಮಾಡಿದ್ದರಂತೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








