ಬೆಂಗಳೂರು: ಕೊರೊನಾ ವೈರಸ್ ಸೋಂಕು ಜಗತ್ತಿನಾದ್ಯಂತ ಮರಣಮೃದಂಗವನ್ನು ಬಾರಿಸುತ್ತಿದೆ. ಕೊರೊನಾಸುರನ ಹೊಡೆತಕ್ಕೆ ಇದೀಗ ಭಾರತ ಲಾಕ್ ಡೌನ್ ಆಗಿದೆ. ಈ ಮಧ್ಯೆ ಕುರಿಗಳಿಂದ ಕೊರೊನಾ ಸೋಂಕು ಹರಡುತ್ತೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ಇದಕ್ಕೆ ಕಿವಿಕೊಟ್ಟು ಸಿರಾ, ಚಿಕ್ಕನಾಯಕನಹಳ್ಳಿ, ಹಿರಿಯೂರು ಸೇರಿದಂತೆ ಹಲವೆಡೆ ಕುರಿಗಾಯಿಗಳನ್ನು ಓಡಿಸುವ ಕೆಲಸ ನಡೆಯುತ್ತಿದೆ.

ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಕುರಿಗಳಿಂದ ಕೊರೊನಾ ಸೋಂಕು ತಗಲಲಿದೆ ಎಂಬ ತಪ್ಪು ಕಲ್ಪನೆಯಿಂದ ಸಿರಾ,ಚಿಕ್ಕನಾಯ್ಕನಹಳ್ಳಿ, ಹಿರಿಯೂರು,ಮಧುಗಿರಿ,ಹೊಸದುರ್ಗ ಕಡೆ ಜನ ಕುರಿಗಳನ್ನು ಹೊಡೆಯುವ, ಕುರಿಗಾಹಿಗಳನ್ನು ಓಡಿಸುವ ಕೆಲಸ ಮಾಡ್ತಿದ್ದಾರೆ.
ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಕುರಿಗಾಹಿಗಳಿಗೆ ರಕ್ಷಣೆ ಕೊಟ್ಟು ಕುರಿ ಮೇಯಿಸಲು ಅವಕಾಶ ಕಲ್ಪಿಸಬೇಕು ಎಂದು ಟ್ವಿಟ್ಟರ್ ನಲ್ಲಿ ಒತ್ತಾಯಿಸಿದ್ದಾರೆ








