ಒಂದು ದಿನ ನಿಷೇಧಾಜ್ಞೆ ಪಾಲಿಸಿ ಪ್ಲೀಸ್ : ಮುಖ್ಯಮಂತ್ರಿ
ಬೆಂಗಳೂರು : ಆರೋಗ್ಯದ ದೃಷ್ಟಿಯಿಂದ ಇಂದು ದಿನ ನಿಷೇಧಾಜ್ಞೆಯನ್ನು ಪಾಲನೆ ಮಾಡಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬ್ರಿಟನ್ ವೈರಸ್ ರೂಪಾಂತರ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 12 ಗಂಟೆಯಿಂದ ನಾಳೆ ಬೆಳಗ್ಗೆ ಆರು ಗಂಟೆ ತನಕ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.
ಜನರ ಆರೋಗ್ಯದ ದೃಷ್ಟಿಯಿಂದ ಇವತ್ತು ಒಂದು ದಿನ ಪಾಲನೆ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಇದೇ ವೇಳೆ ಗ್ರಾಮ ಪಂಚಾಯಿತಿ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿ, ಬಿಜೆಪಿ ದಿನೇ ದಿನೇ ತನ್ನ ಸಾಧನೆ ಉತ್ತಮಗೊಳಿಸ್ತಿದೆ.
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಶೇ 60 ಕ್ಕೂ ಹೆಚ್ಚು ಸ್ಥಾನಗಳನ್ನಗಳಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









