ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಮಂಡಸಿದ ಪಿಣರಾಯಿ..!
ಕೇರಳ: ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ಕೇರಳ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಮಡಿದೆ. ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ರಾಜ್ಯ ವಿಧಾನಸಭೆಯಲ್ಲಿ ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ನಿರ್ಣಯವನ್ನು ಮಂಡಿಸಿದ್ದಾರೆ.
ರೈತರ ಸಮಸ್ಯೆಗಳನ್ನು ಚರ್ಚಿಸಲು ಒಂದು ಗಂಟೆಯ ವಿಶೇಷ ಅಧಿವೇಶವನ್ನು ಕರೆಯಲಾಗಿತ್ತು. ಈ ಅಧಿವೇಶನದಲ್ಲಿ ಕೃಷಿ ಕಾಯ್ದೆಗಳ ವಿರುದ್ಧ ನಿರ್ಣಯ ಮಂಡಿಸಲಾಗಿದ್ದು, ಆದಷ್ಟು ಬೇಗ ಅವುಗಳನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಲಾಗಿದೆ.
ರಾಷ್ಟ್ರ ರಾಜಧಾನಿಯಲ್ಲಿ ನ್ಯೂ ಇಯರ್ ಸಂಭ್ರಮಾಚರಣೆಗೆ ಬ್ರೇಕ್..!
ಈ ವೆಳೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಪಿಣರಾಯಿ ವಿಜಯನ್ ಅವರು ದೇಶದಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ವಿರುದ್ಧ ರೈತರು ಉಗ್ರವಾಗಿ ಹೋರಾಟ ನಡೆಸ್ತಾಯಿದ್ದಾರೆ. ಇದು ಇತಿಹಾಸದಲ್ಲಿ ರೈತರು ಕೈಗೊಂಡ ಮಹತ್ವಪೂರ್ಣ ಪ್ರತಿಭಟನೆ. ಕೇಂದ್ರ ಸರ್ಕಾರದ ಈ ಕಾಯ್ದೆಗಳು, ರೈತ ವಿರೋಧಿ ಮಾತ್ರವಲ್ಲದೇ ಕಾರ್ಪೊರೇಟ್ ಸಂಸ್ಥೆಗಳ ಪರವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇದೇ ವೇಳೆ ಮಾತು ಮುಂದುವರೆಸಿದ ಪಿಣರಾಯಿ ಅವರು ಕಳೆದ 35 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ 32 ರೈತರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಸರ್ಕಾರದ ಕೆಲವು ಕಾನೂನುಗಳು ನಮ್ಮ ಜೀವನಕ್ಕೆ ಹಾನಿ ಉಂಟು ಮಾಡಬಹುದು ಎಂಬ ಭಯ ಜನರಲ್ಲಿರುವಾಗ, ಅದರ ಬಗ್ಗೆ ಸರಿಯಾದ ಕ್ರಮಕೈಗೊಳ್ಳುವುದು ಶಾಸಕಾಂಗ ಸಭೆಯ ನಾಯಕರ ಕರ್ತವ್ಯ. ಕೃಷಿಯು ನಮ್ಮ ದೇಶದ ಸಂಸ್ಕೃತಿಯ ಒಂದು ಭಾಗವಾಗಿದೆ ಎಂದು ಹೇಳಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel