ಜನ ಸೇರೋದನ್ನ ತಪ್ಪಿಸಲು ನಿಷೇಧಾಜ್ಞೆ : ಬಸವರಾಜ್ ಬೊಮ್ಮಾಯಿ
ಬೆಂಗಳೂರು : ಕೊರೊನಾ ರೂಪಾಂತರಿ ವೈರಸ್ ಹರಡುವ ಭೀತಿ ಹಿನ್ನೆಲೆ ಸಾಮೂಹಿಕ ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸಲಾಗಿದ್ದು, ಜನ ಸೇರೋದನ್ನ ತಪ್ಪಿಸಲು ಇಂದು ಮಧ್ಯಾಹ್ನದಿಂದಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬೊಮ್ಮಾಯಿ, ನಿನ್ನೆ ಮೂವರಿಗೆ ಬ್ರಿಟನ್ ರೂಪಾಂತರ ವೈರಸ್ ಪಾಸಿಟಿವ್ ಬಂದಿದೆ. ಆ ವೈರಸ್ ವೇಗವಾಗಿ ಹರಡುವ ಕಾರಣ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಹೊಸ ವರ್ಷ ನೆಪದಲ್ಲಿ ಜನ ಸೇರಿದರೇ ವೈರಾಣು ಅತಿ ವೇಗದಲ್ಲಿ ಹರಡುವ ಸಾಧ್ಯಗಳಿವೆ. ಈ ಕಾರಣದಿಂದಾಗಿ ಈಗಾಗಲೇ ಬೆಂಗಳೂರು ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಎಂ.ಜಿ. ರಸ್ತೆ, ಕೋರಮಂಗಲ, ಇಂದಿರಾನಗರ, ಬ್ರಿಗೇಡ್ ರಸ್ತೆಯಲ್ಲಿ ಹೆಚ್ಚು ಜನ ಸೇರುತ್ತಾರೆ. ಹೀಗಾಗಿ ಜನರ ಓಡಾಟ ತಪ್ಪಿಸಲು ಇಂದು ಮಧ್ಯಾಹ್ನ 12 ಗಂಟೆಯಿಂದ ಎಲ್ಲ ಕಡೆಯೂ ನಿಷೇಧಾಜ್ಞೆ ಜಾರಿ ಇರುತ್ತದೆ ಎಂದರು.
ಇದೇ ವೇಳೆ ಧರ್ಮೇಗೌಡ ಆತ್ಮಹತ್ಯೆ ಪ್ರಕರಣದ ಬಗ್ಗೆ ಮಾತನಾಡಿ, ಪ್ರಕರಣದ ಪ್ರಾಥಮಿಕ ತನಿಖೆಯನ್ನು ಮಾಡಲಾಗುತ್ತಿದೆ.
ಮರಣೋತ್ತರ ಪರೀಕ್ಷೆ ವರದಿಯನ್ನು ಪಡೆಯುತ್ತೇವೆ, ಈವರೆಗೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ. ತನಿಖೆ ಮುಗಿದ ಬಳಿಕ ಸತ್ಯಾಂಶ ಹೊರಬರಲಿದೆ ಎಂದು ತಿಳಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









