ಉಮೇಶ್ ಯಾದವ್ ಸ್ಥಾನಕ್ಕೆ ಶಾರ್ದೂಲ್ ಅಥವಾ ನಟರಾಜನ್..?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಸಿಡ್ನಿಯಲ್ಲಿ ನಡೆಯುವುದು ಬಹುತೇಕ ಖಚಿತವಾಗಿದೆ. ಜನವರಿ ಏಳರಿಂದ ಮೂರು ಟೆಸ್ಟ್ ಪಂದ್ಯ ಶುರುವಾಗಲಿದೆ. ಈಗಾಗಲೇ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಅಂತರ 1-1ರಿಂದ ಸಮಬಲದಲ್ಲಿದೆ.
ಈ ನಡುವೆ ಆಸ್ಟ್ರೇಲಿಯಾ ತಂಡವನ್ನು ಡೇವಿಡ್ ವಾರ್ನರ್ ಸೇರಿಕೊಂಡಿದ್ದಾರೆ. ಹೀಗಾಗಿ ಕಳೆಗುಂದಿದ್ದ ಆಸೀಸ್ ಬ್ಯಾಟಿಂಗ್ ವಿಭಾಗಕ್ಕೆ ಆನೆ ಬಲ ಬಂದಂತಾಗಿದೆ.
ಇನ್ನೊಂದೆಡೆ ಟೀಮ್ ಇಂಡಿಯಾಗೆ ಗಾಯದ ಸಮಸ್ಯೆ ಇನ್ನೂ ಮುಗಿದಿಲ್ಲ. ರೋಹಿತ್ ಶರ್ಮಾ ಟೀಮ್ ಇಂಡಿಯಾವನ್ನು ಸೇರಿಕೊಂಡಿದ್ದಾರೆ. ಮತ್ತೊಂದೆಡೆ ವೇಗಿ ಉಮೇಶ್ ಯಾದವ್ ಅವರು ಗಾಯಗೊಂಡಿರುವುದು ರಹಾನೆ ಪಡೆಗೆ ಚಿಂತೆಗೀಡು ಮಾಡುವಂತೆ ಮಾಡಿದೆ.
ಎರಡನೇ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್ ವೇಳೆ ಉಮೇಶ್ ಯಾದವ್ ಸ್ನಾಯು ಸೆಳೆತದಿಂದಾಗಿ ಮೈದಾನದಿಂದ ಹೊರ ನಡೆದಿದ್ದಾರೆ. ಹೀಗಾಗಿ ಇನ್ನುಳಿದ ಎರಡು ಪಂದ್ಯಕ್ಕೂ ಉಮೇಶ್ ಯಾದವ್ ಅಲಭ್ಯರಾಗಿದ್ದಾರೆ.
ಹಾಗಿದ್ರೆ ಉಮೇಶ್ ಯಾದವ್ ಸ್ಥಾನವನ್ನು ಯಾರು ತುಂಬುತ್ತಾರೆ ಅನ್ನೋ ಪ್ರಶ್ನೆಗೆ ಉತ್ತರ ಶಾರ್ದೂಲ್ ಥಾಕೂರ್ ಮತ್ತು ಟಿ. ನಟರಾಜನ್ ಅವರು ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ.
ಇಲ್ಲಿ ನಟರಾಜನ್ ಅವರು ಐಪಿಎಲ್ ಮತ್ತು ಟಿ-ಟ್ವೆಂಟಿ ಸರಣಿಯಲ್ಲಿ ಅದ್ಭುತವಾಗಿ ಬೌಲಿಂಗ್ ಮಾಡಿದ್ದರು. ಆದ್ರೆ ನಟರಾಜನ್ ಅವರು ದೇಶಿಯ ಪಂದ್ಯಗಳಲ್ಲಿ ಆಡಿಲ್ಲ. ಆಡಿರೋದು ಕೇವಲ ಒಂದು ಪಂದ್ಯ ಮಾತ್ರ. ಹೀಗಾಗಿ ಅನುಭವದ ಕೊರತೆ ಅವರನ್ನು ಕಾಡುತ್ತಿದೆ. ಆದ್ರೂ ಅವರ ಮೇಲೆ ಭರವಸೆಯನ್ನಿಡಬಹುದು.
ಹಾಗೇ ಶಾರ್ದೂಲ್ ಥಾಕೂರ್ 62 ದೇಶಿ ಪಂದ್ಯಗಳನ್ನು ಆಡಿರುವ ಅನುಭವ ಇದ್ದು, 206 ವಿಕೆಟ್ ಗಳನ್ನು ಪಡೆದುಕೊಂಡಿದ್ದಾರೆ. ಹಾಗೇ ಟೀಮ್ ಇಂಡಿಯಾದ ಏಕದಿನ ಮತ್ತು ಟಿ-ಟ್ವೆಂಟಿ, ಐಪಿಎಲ್ ಪಂದ್ಯಗಳನ್ನು ಆಡಿದ್ದಾರೆ. ಆದ್ರೆ ವೆಸ್ಟ್ ಇಂಡೀಸ್ ವಿರುದ್ಧ ಚೊಚ್ಚಲ ಪಂದ್ಯವನ್ನಾಡುವಾಗಲೇ ಅವರು ಗಾಯಕ್ಕೆ ತುತ್ತಾಗಿದ್ದಾರೆ. ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ಅವರು ಬೌಲಿಂಗ್ ಕೂಡ ಮಾಡಲಿಲ್ಲ. ಆದ್ರೆ ಈಗ ಉಮೇಶ್ ಯಾದವ್ ಅವರ ಜಾಗದಲ್ಲಿ ಶಾರ್ದೂಲ್ ಥಾಕೂರ್ ಆಡುವುದು ಬಹುತೇಕ ಖಚಿತವಾಗಿದೆ.
ಒಟ್ಟಿನಲ್ಲಿ ಉಮೇಶ್ ಯಾದವ್ ಜಾಗಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬುದನ್ನು ಹೆಡ್ ಕೋಚ್ ರವಿಶಾಸ್ತ್ರಿ, ನಾಯಕ ಅಜಿಂಕ್ಯಾ ರಹಾನೆ ಹಾಗೂ ಬೌಲಿಂಗ್ ಕೋಚ್ ಭರತ್ ಅರುಣ್ ನಿರ್ಧಾರ ಮಾಡಲಿದ್ದಾರೆ.