ಬೆಂಗಳೂರು: ಶಾಲೆಯಲ್ಲಿ ಮಕ್ಕಳ ಸುರಕ್ಷತೆಯ ಜವಾಬ್ದಾರಿ ನಮ್ಮದು, ಎಲ್ಲ ಪೆÇೀಷಕರು ಮಕ್ಕಳನ್ನು ಆಶೀರ್ವದಿಸಿ ಧೈರ್ಯವಾಗಿ ಶಾಲೆಗೆ ಕಳಿಸಿ, ಅವರ ಶೈಕ್ಷಣಿಕ ಭವಿಷ್ಯ ಉಜ್ವಲವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ರಾಜ್ಯದ ಪೋಷಕರಲ್ಲಿ ಮನವಿ ಮಾಡಿದ್ದಾರೆ.
ಇಂದಿನಿಂದ ಶೈಕ್ಷಣಿಕ ವರ್ಷದ 10 ಮತ್ತು 12ನೇ ತರಗತಿಗಳು ಸುರಕ್ಷಿತ ವಾತಾವರಣದಲ್ಲಿ ಆರಂಭವಾಗಿವೆ. ಶಾಲೆಗಳಲ್ಲಿ ನಿಮ್ಮ ಮಕ್ಕಳನ್ನು ನಮ್ಮ ಮಕ್ಕಳಂತೆಯೇ ನೋಡಿಕೊಳ್ಳುತ್ತೇವೆ. ಶಾಲೆ ಮಕ್ಕಳ ಇನ್ನೊಂದು ಮನೆಯಾಗಿರಲಿದ್ದು, ಶಾಲಾ ವಿದ್ಯಾಲಯ ಸುರಕ್ಷಿತಾಲಯವಾಗಿರಲಿದೆ ಎಂದು ಭರವಸೆ ನೀಡಿದ್ದಾರೆ.
ಕೊರೊನಾ ಓಡಿಸೋಣ..ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ…ಧ್ಯೇಯದೊಂದಿಗೆ ಆರಂಭವಾಗಿರುವ ಈ ಶೈಕ್ಷಣಿಕ ವರ್ಷ ಮಕ್ಕಳ ಬಾಳಿಗೆ ಒಂದು ಹೊಸ ಪರ್ವಕಾಲವಾಗಿ ಹೊರಹೊಮ್ಮಲಿದೆ. ಶಾಲೆಗಳಲ್ಲಿ ಮಕ್ಕಳ ಕಲರವವೇ ಇರಲಿಲ್ಲ. ಶಾಲೆಗಳು ಮುಚ್ಚಿಕೊಂಡಿದ್ದವು, ಮೈದಾನಗಳು ಬಿಕೋ ಎನ್ನುತ್ತಿದ್ದವು. ಅದೆಲ್ಲಕ್ಕೂ ಅಂತ್ಯವೆಂಬಂತೆ ಶಾಲೆಗಳು ಆರಂಭವಾಗಿರುವುದು ಮಕ್ಕಳು ಮತ್ತು ಪೆÇೀಷಕರಲ್ಲಿ ಒಂದು ಹೊಸ ಉತ್ಸಾಹಕ್ಕೆ ಕಾರಣವಾಗಿದೆ.
ಶಾಲೆಗಳು ಆರಂಭವಾಗಿರುವುದರಿಂದ ವಿಶೇಷವಾಗಿ ಗ್ರಾಮೀಣ ಪ್ರದೇಶದ ಪೆÇೀಷಕರು ಮತ್ತು ಮಕ್ಕಳಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ. ಮಕ್ಕಳಂತೂ ಶಾಲೆಯಲ್ಲಿ ಬಹುದಿನಗಳ ನಂತರ ತಮ್ಮ ಗೆಳೆಯರನ್ನು ನೋಡಲು ಕಾತರರಾಗಿದ್ದರು ಎಂದಿದ್ದಾರೆ.
ಮಕ್ಕಳಿಗೆ ಶೀತ, ಜ್ವರ, ನೆಗಡಿಯಂತ ಲಕ್ಷಣಗಳಿದ್ದರೆ ಕಳಿಸುವುದು ಬೇಡ. ನಮಗೆ ಮಕ್ಕಳ ಶೈಕ್ಷಣಿಕ ಭವಿಷ್ಯಕ್ಕಿಂತ ಅವರ ಆರೋಗ್ಯವೂ ಸಹ ಮುಖ್ಯವಾಗಿದೆ. ಶಾಲೆಗಳಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಶಾಲೆಗಳನ್ನು ಸ್ಯಾನಿಟೈಜೇಶನ್ ಮಾಡಲಾಗಿದೆ. ಪ್ರತಿ ಸಂಜೆಯೂ ಸ್ಯಾನಿಟೈಸೇಷನ್ ಮಾಡಲಾಗುತ್ತದೆ. ಪ್ರತಿ ದಿನ ಮಕ್ಕಳ ಆರೋಗ್ಯದ ಕಡೆ ಓರ್ವ ಶಿಕ್ಷಕರು ಕಣ್ಗಾವಲು ಇಟ್ಟಿರುತ್ತಾರೆ. ರೋಗ ಲಕ್ಷಣವಿರುವುದು ಕಂಡು ಬಂದರೆ ಅಂತಹ ವಿದ್ಯಾರ್ಥಿಯನ್ನು ಪ್ರತ್ಯೇಕ ಕೊಠಡಿಯಲ್ಲಿರಿಸಿ ಮುಂದಿನ ಆರೋಗ್ಯ ತಪಾಸಣೆಯಂತಹ ಉಪಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಮಕ್ಕಳ ಸುರಕ್ಷಿತ ಶಿಕ್ಷಣಕ್ಕಾಗಿ ಆರೋಗ್ಯ, ಸಾರಿಗೆ, ನಗರಾಭಿವೃದ್ಧಿ, ಪೌರಾಡಳಿತ, ಕಂದಾಯ, ಗ್ರಾಮೀಣಾಭಿವೃದ್ಧಿ ಇಲಾಖೆಗಳು ಇಲಾಖೆಗಳು ಶಿಕ್ಷಣ ಇಲಾಖೆಯೊಂದಿಗೆ ಕೈಜೋಡಿಸಿವೆ. ಇಡೀ ರಾಜ್ಯ ಸರ್ಕಾರವೇ ನಿಮ್ಮ ಮಕ್ಕಳ ಹಿತದೃಷ್ಟಿಗೆ ಟೊಂಕ ಕಟ್ಟಿ ನಿಂತಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
ಕೆಲವೇ ತಿಂಗಳಲ್ಲಿ ಬೋರ್ಡ್ ಪರೀಕ್ಷೆಗಳಿರುವ ಹಿನ್ನೆಲೆಯಲ್ಲಿ 10 ಮತ್ತು 12ನೇ ತರಗತಿಗಳ ಮಕ್ಕಳಿಗೆ ಶಾಲಾ ತರಗತಿಗಳು ಪುಟ್ಟ ಪುಟ್ಟ ತಂಡಗಳಲ್ಲಿ ಸಾಮಾಜಿಕ ಅಂತರದಲ್ಲಿ ಆರಂಭಗೊಂಡರೆ, 6ರಿಂದ 9ನೇ ತರಗತಿಗಳ ಪರಿಷ್ಕøತ ವಿದ್ಯಾಗಮ ತರಗತಿಗಳು ಸುರಕ್ಷಿತ ಶಾಲಾವರಣದಲ್ಲಿ ನಡೆಯಲಿವೆ. 2020 ಕೊರೋನ ವರ್ಷವಾದರೆ, 2021ನೇ ವರ್ಷ ಕೊರೊನಾ ಎದುರಿಸುವ ಶಕ್ತಿಯನ್ನು ಪಡೆಯುವ ವರ್ಷವಾಗಿದ್ದು, ಅದು ನಮ್ಮ ಮಕ್ಕಳೇ ನಮಗೆ ನಿದರ್ಶನವಾಗಲಿದ್ದಾರೆ ಎಂದು ಸಚಿವರು ಹೇಳಿದ್ದಾರೆ.
ಶಾಲಾ ತರಗತಿ, ಶಾಲಾವರಣ ಸ್ವಚ್ಛವಾಗಿರಲಿದೆ. ಶೌಚಾಲಯಗಳು ಸ್ವಚ್ಚವಾಗಿರಲಿವೆ. ಮಕ್ಕಳು ಗುಂಪು ಗೂಡುವುದಿಲ್ಲ, ಪ್ರತಿಯೊಬ್ಬರ ಆರೋಗ್ಯ ತಪಾಸಣೆ ನಡೆಯಲಿದೆ, ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪೆÇೀಷಕರ ಸಹಕಾರ ನಿಜಕ್ಕೂ ದೊಡ್ಡದು, ಮಕ್ಕಳ ಭವಿಷ್ಯವೂ ಇದರಲ್ಲಿ ಪ್ರಮುಖವಾಗಿರುವುದರಿಂದ ನಮ್ಮ ಪೋಷಕರು ಮಕ್ಕಳನ್ನು ಶಾಲೆಗೆ ಕಳಿಸಲು ಮುಂದಾಗಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.
ಮಕ್ಕಳಿಗೆ ಮನೆಯಿಂದಲೇ ಕುಡಿಯುವ ನೀರು ಕಳಿಸಿಕೊಡಿ, ಆಯಾ ತರಗತಿಗಳಲ್ಲೇ ಬೆಳಗಿನ ಪ್ರಾರ್ಥನೆ ನಡೆಯಲಿವೆ. ಮಕ್ಕಳು ಗುಂಪುಗುಂಪಾಗಿ ಸೇರುವ ಪ್ರಮೇಯವೇ ಇರುವುದಿಲ್ಲ. 10 ಮತ್ತು 12ನೇ ತರಗತಿಯಂತೆಯೇ ಉಳಿದ ತರಗತಿಗಳನ್ನು ಆರಂಭಿಸಬೇಕೆಂದು ಬಹು ಭಾಗದಿಂದ ಒತ್ತಾಯಗಳು ಕೇಳಿಬರುತ್ತಿವೆ. ಇನ್ನು ಕೆಲವೇ ದಿನಗಳಲ್ಲಿ ಇಂದಿನ ಶಾಲೆಗಳ ನಡೆಯನ್ನು ಅನುಸರಿಸಿ ಒಂದು ನಿರ್ಧಾರಕ್ಕೆ ಬರಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel