ನಾಳೆಯಿಂದ ರಾಜ್ಯದ ಐದು ಜಿಲ್ಲೆಗಳಲ್ಲಿ ಲಸಿಕೆ ವಿತರಣೆ ತಾಲೀಮು
ಹೊಸದಿಲ್ಲಿ, ಜನವರಿ01: ದೇಶದ 4 ರಾಜ್ಯಗಳಲ್ಲಿ ಕೇಂದ್ರ ಸರ್ಕಾರವು ಲಸಿಕೆ ವಿತರಣೆ ತಾಲೀಮು ನಡೆಸಲು ಸೂಚನೆ ನೀಡಿದೆ. ಕೇಂದ್ರದ ಸೂಚನೆ ಮೇರೆಗೆ ನಾಳೆ ರಾಜ್ಯದ ಐದು ಜಿಲ್ಲೆಗಳಲ್ಲಿ ಕೊರೋನಾ ಲಸಿಕೆ ವಿತರಣೆಯ ತಾಲೀಮು ನಡೆಯಲಿದೆ.

ರಾಜ್ಯದ ಬೆಂಗಳೂರು ನಗರ, ಶಿವಮೊಗ್ಗ, ಕಲಬುರ್ಗಿ, ಮೈಸೂರು ಹಾಗೂ ಬೆಳಗಾವಿಯಲ್ಲಿ ನಾಳೆ ಕೊರೋನಾ ಲಸಿಕೆ ವಿತರಣೆಯ ತಾಲೂಮು ನಡೆಯಲಿದ್ದು, ಇದಕ್ಕಾಗಿ ಕೋವಿಡ್ ಅಪ್ಲಿಕೇಷನ್ ನಲ್ಲಿ ಲಸಿಕೆ ಪಡೆಯುತ್ತಿರುವವರ ಹೆಸರನ್ನು ನಮೂದಿಸಲಾಗಿದೆ.
ಕೋವಿಡ್-19 ಲಸಿಕೆಗಳು ಮತ್ತು ವ್ಯಾಕ್ಸಿನೇಷನ್ ಪ್ರಕ್ರಿಯೆಯ ಬಗ್ಗೆ ಮಾಹಿತಿಯನ್ನು ಸಕ್ರಿಯಗೊಳಿಸಲು ರಾಷ್ಟ್ರೀಯ, ರಾಜ್ಯ ಮತ್ತು ಜಿಲ್ಲಾ ಮಟ್ಟದ ಸಂವಹನ ಚಟುವಟಿಕೆಗಳಿಗೆ ಮಾರ್ಗದರ್ಶನ ನೀಡುವ 88 ಪುಟಗಳ ದಾಖಲೆಯು ದೇಶದ ಎಲ್ಲಾ ರಾಜ್ಯಗಳಾದ್ಯಂತ ಜನರನ್ನು ತಲುಪಲಿದೆ.

ಈಗಾಗಲೇ ಇದಕ್ಕಾಗಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿರುವ ರಾಜ್ಯ ಆರೋಗ್ಯ ಇಲಾಖೆ, ಜಿಲ್ಲಾ ಮಟ್ಟದಲ್ಲಿ 1, ತಾಲೂಕು ಮಟ್ಟದಲ್ಲಿ 1 ಲಸಿಕಾ ಕೇಂದ್ರ ತೆರೆಯಲಿದೆ. ಅಲ್ಲದೇ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೂಡ ಡ್ರೈರನ್ ಇರಲಿದೆ.
ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ, ಕೋವಿಡ್ ವಾರಿಯರ್ಸ್ ಗಳಿಗೆ ಕೋವಿಡ್ ಲಸಿಕೆಯನ್ನು ಆದ್ಯತೆ ಮೇರೆಗೆ ನೀಡಲಾಗುತ್ತಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
https://twitter.com/SaakshaTv/status/1344696988034498560?s=19
https://twitter.com/SaakshaTv/status/1344697354536927232?s=19








