ಬೆಂಗಳೂರು: ನಾಳೆ ಭಾರತೀಯ ಜನತಾ ಪಕ್ಷದ ಕೋರ್ ಕಮಿಟಿ ಸಭೆ ಹಾಗೂ ಭಾನುವಾರ ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆಯು ಶಿವಮೊಗ್ಗದಲ್ಲಿ ನಡೆಯಲಿದೆ.
ಶಿವಮೊಗ್ಗ ನಗರ ಹೊರವಲಯದಲ್ಲಿರುವ ಪೆಸಿಟ್ ಕಾಲೇಜಿನ ಆವರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ನಡೆಯಲಿದೆ. ನಾಳೆ ಪಕ್ಷದ ಕೋರ್ ಕಮಿಟಿ ಸಭೆ ನಡೆಯಲಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ನಿರ್ಮಲ್‍ಕುಮಾರ್ ಸುರಾಣಾ ಅವರು ತಿಳಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ.ರವಿ, ಮುಖ್ಯಮಂತಿ ಬಿ.ಎಸ್.ಯಡಿಯೂರಪ್ಪ ಅವರು ಪಾಲ್ಗೊಳ್ಳಲಿದ್ದಾರೆ. ಪಕ್ಷದ ರಾಜ್ಯ ಪದಾಧಿಕಾರಿಗಳು, ಪ್ರಕೋಷ್ಠಗಳ ಸಂಚಾಲಕರು, ಜಿಲ್ಲಾಧ್ಯಕ್ಷರು, ವಿಭಾಗ ಪ್ರಭಾರಿಗಳು ಸೇರಿದಂತೆ ಒಟ್ಟು 180 ಜನರು ಭಾಗವಹಿಸಲಿದ್ದಾರೆ.
ನಾಳೆಯ ಬಿಜೆಪಿ ಕೋರ್ ಕಮಿಟಿ ಸಭೆ ಹಾಗೂ ಭಾನುವಾರ ನಡೆಯಲಿರುವ ವಿಶೇಷ ಸಭೆ ಹಿನ್ನೆಲೆಯಲ್ಲಿ ಸಿಎಂ ಬಿಎಸ್‍ವೈ ನಾಳೆ ಹಾಗೂ ನಾಡಿದ್ದು ಎರಡು ದಿನಗಳ ಶಿವಮೊಗ್ಗ ಜಿಲ್ಲೆ ಪ್ರವಾಸ ಕೈಗೊಂಡಿದ್ದಾರೆ.
ಸಂಪುಟ ವಿಸ್ತರಣೆಗೆ ಸಿಗುತ್ತಾ ಸಿಗ್ನಲ್
ನಾಳೆ ಶಿವಮೊಗ್ಗದಲ್ಲಿ ನಡೆಯುವ ಕೋರ್ ಕಮಿಟಿ ಸಭೆಯಲ್ಲಿ ಸಂಪುಟ ವಿಸ್ತರಣೆ ವಿಚಾರವಾಗಿ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೊತ್ತು ತರುತ್ತಿರುವ ಸಂದೇಶದತ್ತ ಬಿಜೆಪಿ ಶಾಸಕರ ಕುತೂಹಲ ಹೆಚ್ಚಿದೆ.
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸ್ಥಾನ ಪಡೆದಿರುವುದು ಬಿಜೆಪಿ ಸರ್ಕಾರದ ಉತ್ಸಾಹ ಹೆಚ್ಚಿಸಿದೆ. ಈ ಹಿನ್ನೆಲೆಯಲ್ಲಿ ಹಲವು ತಿಂಗಳಿಂದ ಮುಂದಕ್ಕೆ ಹೋಗುತ್ತಾ ಬಂದಿರುವ ಸಂಪುಟ ವಿಸ್ತರಣೆಗೆ ಹಸಿರು ನಿಶಾನೆ ಸಿಗುತ್ತಾ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








