ಪುಲ್ವಾಮಾದಲ್ಲಿ ಉಗ್ರರಿಂದ ಗ್ರೆನೇಡ್ ದಾಳಿ !
ಜಮ್ಮು-ಕಾಶ್ಮೀರ : ಪುಲ್ವಾಮಾ ಜಿಲ್ಲೆಯ ಟ್ರಾಲ್ ಬಸ್ ನಿಲ್ಡಾಣದ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಎಂಟು ಮಂದಿ ನಾಗರೀಕರು ಗಾಯಗೊಂಡಿದ್ದಾರೆ.
ಭದ್ರತಾ ಪಡೆಯನ್ನು ಗುರಿಯಾಗಿಸಿಕೊಂಡು ಉಗ್ರರು ಟ್ರಾಲ್ ಬಸ್ ನಿಲ್ದಾಣದ ಮೇಲೆ ಗ್ರೆನೇಡ್ ಎಸೆದಿದ್ದಾರೆ. ಆದ್ರೆ ಅದು ಗುರಿತಪ್ಪಿ ರಸ್ತೆಯ ಮೇಲೆ ಬಿದ್ದು ಸ್ಫೋಟಗೊಂಡಿದೆ.
ಇದರಿಂದ ನಾಗರೀಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ದೇಶದ ಮತ್ತೊಂದು ದೊಡ್ಡ ಆಸ್ತಿ ಸೇಲ್..!?
ಇನ್ನು ನಿನ್ನೆ ಸಂಜೆ ಕೂಡ ಶ್ರೀನಗರದ ಚನಪೋರಾದಲ್ಲಿ ಸಶಸ್ತ್ರ ಸೀಮಾ ಬಲ (ಎಸ್ ಎಸ್ ಬಿ) ಶಿಬಿರದ ಮೇಲೆ ಗ್ರೆನೇಡ್ ಎಸೆದು ಉಗ್ರರು ಪರಾರಿಯಾಗಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel