ಜಗತ್ತಿನಾದ್ಯಂತ ಮರಣ ಮೃದಂಗ ಬಾರಿಸುತ್ತಿರುವ ಕೊರೊನಾ ವೈರಸ್ ಸೋಂಕು ಎಂಬ ಮಹಾಮಾರಿ ಬಡವ ಬಲ್ಲಿದನೆಂಬ ಭೇದವಿಲ್ಲದೆ ವಿಶ್ವದ ಗಣ್ಯರನ್ನು ಕಾಡಿದೆ. ಇದೀಗ ಇಸ್ರೇಲ್ ದೇಶದ ಪ್ರಧಾನಮಂತ್ರಿ ಬೆಂಜಮಿನ್ ನೇತನ್ಯಾಹು ಅವರಿಗೆ ಕೋವಿಡ್ 19 ವೈರಸ್ ಸೋಂಕು ದೃಢಪಟ್ಟಿದೆ ಎಂದು ವರದಿಗಳು ಹೇಳಿವೆ.
ಬೆಂಜಮಿನ್ ನೇತನ್ಯಾಹು ಅವರಲ್ಲಿ ಕೋವಿಡ್ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ, ಸೋಮವಾರ ಅವರು ಸ್ವಯಂ ನಿರ್ಬಂಧಕ್ಕೆ (ಕ್ವಾರೆಂಟೈನ್) ಒಳಗಾಗಿದ್ದಾರೆ ಎಂದು ಪ್ರಧಾನಿ ಕಛೇರಿ ಮೂಲಗಳು ತಿಳಿಸಿವೆ.
ಇಸ್ರೇಲ್ ನಲ್ಲಿ ಇಲ್ಲಿಯವರೆಗೆ 4,347 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಹದಿನಾರು ಸೋಂಕಿತರು ಸಾವನ್ನಪ್ಪಿದ್ದಾರೆ. 134 ಸೋಂಕಿತರು ಚೇತರಿಸಿಕೊಂಡಿದ್ದು, 95 ಪ್ರಕರಣಗಳು ಗಂಭೀರ ಸ್ವರೂಪದ್ದಾಗಿದೆ.
ಇಸ್ರೇಲ್ ನಲ್ಲಿ ಕಟ್ಟುನಿಟ್ಟಿನ ಲಾಕ್ ಡೌನ್ ಆದೇಶ ಜಾರಿಯಲ್ಲಿದ್ದು, ಜನರು ತಮ್ಮ ಮನೆಗಳಿಂದ 100 ಮೀಟರ್ ದೂರಕ್ಕೆ ಹೋಗಲೂ ಅವಕಾಶ ನೀಡದಂತೆ ನಿರ್ಬಂಧ ವಿಧಿಸಲಾಗಿದೆ. ಆಹಾರ ಹಾಗೂ ಅವಶ್ಯಕ ಸಾಮಾಗ್ರಿಗಳನ್ನು ಸಂಗ್ರಹಿಸಲು ಮಾತ್ರವೇ ಹೊರಹೋಗಲು ಅವಕಾಶ ನೀಡಲಾಗುತ್ತಿದೆ.








